ಶ್ರೀನಗರ:ಒಂದೆಡೆ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಸರಣಿ ಹತ್ಯಾಕಾಂಡ ನಡೆಯುತ್ತಿದ್ದರೆ, ಇತ್ತ ಜಮ್ಮು- ಕಾಶ್ಮೀರದಲ್ಲಿಯೂ ಬಿಜೆಪಿ ಮುಖಂಡರನ್ನು ಕೊಲೆ ಮಾಡುವ ಘಟನೆ ಮುಂದುವರೆದಿದೆ.ಟ್ರಾಲ್ ಮುನ್ಸಿಪಲ್ ಕೌನ್ಸಿಲರ್ ರಾಕೇಶ್ ಪಂಡಿತ್ ಅವರನ್ನು ಭಯೋತ್ಪಾದಕರು ಗುಂಡಿಕ್ಕಿ ಕೊಂದಿರುವ ಘಟನೆ ಪುಲ್ವಾಮಾ ಜಿಲ್ಲೆಯಲ್ಲಿ ನಡೆದಿದೆ. ಸ್ನೇಹಿತನನ್ನು ಭೇಟಿಯಾಗಲು ಟ್ರಾಲ್‍ಪಯಿನ್‍ಗೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಈ ಸುದ್ದಿಯನ್ನು ಅರಿತ ಭಯೋತ್ಪಾದಕರು ಅವರ ಮೇಲೆ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಪಂಡಿತ್‌ ಅಲ್ಲಿಯೇ ಮೃತಪಟ್ಟರೆ, ಅವರ ಸ್ನೇಹಿತನ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ.ರಾಕೇಶ್ ಅವರು ಶ್ರೀನಗರದ ವಸತಿ ಗೃಹದಲ್ಲಿ ವಾಸಿಸುತ್ತಿದ್ದರು. ಅವರಿಗೆ ಇದಾಗಲೇ ಜೀವಬೆದರಿಕೆ ಇದ್ದುದರಿಂದ ಇಬ್ಬರು ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು. ಆದರೆ ಸ್ನೇಹಿತನ ಮನೆಗೆ ಹೋಗುವ ಸಂದರ್ಭದಲ್ಲಿ ಅವರು ಸಿಬ್ಬಂದಿಯನ್ನು ಕರೆದುಕೊಂಡು ಹೋಗಿರಲಿಲ್ಲ ಎನ್ನಲಾಗಿದೆ.
https://twitter.com/ImRavinderRaina/status/1400150368152002561ಈ ಕುರಿತು ತೀವ್ರ ಸಂತಾಪ ವ್ಯಕ್ತಪಡಿಸಿರುವ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ಮುಖ್ಯಸ್ಥ ರವೀಂದರ್ ರೈನಾ, ರಾಕೇಶ್ ಪಂಡಿತ್ ಅವರ ಬಲಿಯನ್ನು ವ್ಯರ್ಥವಾಗಲು ಬಿಡುವುದಿಲ್ಲ. ಕಾಶ್ಮೀರದ ಕಣಿವೆಯಲ್ಲಿ ರಕ್ತದೋಕುಳಿಯನ್ನುಂಟು ಮಾಡುವ ಭಯೋತ್ಪಾದಕರ ನಿರ್ಮೂಲನೆ ಮಾಡಲಾಗುವುದು. ಇದು ಮಾನವೀಯತೆ ಮತ್ತು ಕಾಶ್ಮೀರದ ಹತ್ಯೆಯಾಗಿದೆ ಎಂದಿದ್ದಾರೆ. ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಸಂತಾಪ ಸೂಚಿಸಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯಾಕಾಂಡ- 37 ಮಂದಿಯ ಕೊಲೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen + 1 =
Remember me
