ವಾರಾಣಸಿ:ಕಾಶಿ ವಿಶ್ವನಾಥ ಮಂದಿರದ ಸಮೀಪವಿರುವ ಜ್ಞಾನವಾಪಿ ಮಸೀದಿಯ ವಿಡಿಯೋ ಸಮೀಕ್ಷೆ ನಡೆಸಲು ವಾರಣಾಸಿ ಕೋರ್ಟ್ ಅನುಮತಿ ನೀಡಿದೆ. ಇದೇ 17ರಂದು ಸರ್ವೆ ನಡೆಸಬಹುದು ಎಂದು ಕೋರ್ಟ್​ ಹೇಳಿದೆ.
ಸಮೀಕ್ಷೆಗೆ ನೇಮಿಸಲಾಗಿರುವ ಕೋರ್ಟ್ ಕಮಿಷನರ್ ಅಜಯ್ ಕುಮಾರ್ ಮಿಶ್ರಾರನ್ನು ತೆಗೆದು ಹಾಕುವಂತೆ ಜ್ಞಾನವಾಪಿ ಮಸೀದಿ ಆಡಳಿತ ಸಮಿತಿ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಕೋರ್ಟ್​ ಈ ಆದೇಶ ಹೊರಡಿಸಿದೆ.
ಸತತ ಮೂರು ದಿನಗಳಿಂದ ವಾದ, ಪ್ರತಿವಾದ ಆಲಿಸಿರುವ ಕೋರ್ಟ್​, ಕಮಿಷನರ್​ ಮಿಶ್ರಾ ಅವರ ನೇಮಕ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಏನಿದು ಘಟನೆ?ಅಯೋಧ್ಯೆ ರಾಮ ಜನ್ಮಭೂಮಿ ವಿವಾದದ ತೀರ್ಪಿನಷ್ಟೇ ಮಹತ್ವವಾಗಿತ್ತು ಉತ್ತರ ಪ್ರದೇಶದ ಬನಾರಸ್‌ನಲ್ಲಿರುವ ಜ್ಞಾನವಾಪಿ ಮಸೀದಿ ವಿವಾದ. ವಾರಣಾಸಿಯ ಕಾಶಿ ವಿಶ್ವನಾಥ್-ಜ್ಞಾನವಾಪಿ ಸಂಕೀರ್ಣದ ಸಮಸ್ಯೆಯು 2019 ರಲ್ಲಿ ಇತ್ಯರ್ಥಗೊಂಡ ಅಯೋಧ್ಯೆ ದೇವಾಲಯ-ಮಸೀದಿ ವಿವಾದಕ್ಕೆ ಹೋಲುತ್ತದೆ. 1669 ರಲ್ಲಿ ಕಾಶಿ ವಿಶ್ವನಾಥ ಮಂದಿರದ ಒಂದು ಭಾಗವನ್ನು ಕೆಡವಿ ಮೊಘಲ್ ಚಕ್ರವರ್ತಿ ಔರಂಗಜೇಬನ ಆದೇಶದ ಮೇರೆಗೆ ಜ್ಞಾನವಾಪಿ ಮಸೀದಿಯನ್ನು ನಿರ್ಮಿಸಲಾಗಿದೆ ಎನ್ನುವ ವಾದವಿದೆ.
ಈ ಮಸೀದಿಯನ್ನು 1669ರಲ್ಲಿ ಮೊಘಲ ದೊರೆ ಔರಂಗಜೇಬ್​ ಕೆಡವಿದ ಹಳೆಯ ಶಿವ ದೇವಾಲಯದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎಂಬುದಾಗಿ ಹೇಳಲಾಗುತ್ತಿದೆ. ಮಸೀಯಲ್ಲಿ ಹಿಂದೂ ಧರ್ಮದ ಚಿಹ್ನೆಗಳ ಗುರುತು ಪತ್ತೆಯಾಗಿರುವುದು ಸತ್ಯ ಹಲವಾಡು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.
ಜ್ಞಾನವಾಪಿ ಮಸೀದಿಯ ಹೊರಗಿನ ಗೋಡೆ ಮೇಲಿರುವ ಶೃಂಗಾರ್ ಗೌರಿ, ಗಣೇಶ, ಹನುಮಾನ್ ಮತ್ತು ನಂದಿ ವಿಗ್ರಹಗಳಿಗೆ ಪ್ರತಿನಿತ್ಯ ಪೂಜೆ ಮಾಡಲು ಅನುಮತಿ ಕೋರಿ ದೆಹಲಿಯ ರಾಖಿ ಸಿಂಗ್, ಲಕ್ಷ್ಮಿ ದೇವಿ, ಸೀತಾ ಸಾಹು ಮತ್ತು ಇತರರು ಅರ್ಜಿ ಸಲ್ಲಿಸಿದ್ದರು. ನ್ಯಾಯಾಧೀಶರು ಮಸೀದಿಯ ವಿಡಿಯೊಗ್ರಫಿ ಮತ್ತು ಸಮೀಕ್ಷೆಗೆ ಆದೇಶಿಸಿದ್ದರು. ಈ ಸಮಯದಲ್ಲಿ ಅರ್ಜಿದಾರರು ಮಸೀದಿ ಗೊಡೆ ಮೇಲಿರುವ ವಿಗ್ರಹಗಳಿಗೆ ಯಾವುದೇ ಹಾನಿ ಮಾಡದಂತೆ ತಡೆಯಲು ನ್ಯಾಯಾಲಯದ ಆದೇಶವನ್ನು ಕೋರಿದ್ದರು.
ಸಮೀಕ್ಷೆಗೆಂದು ಕೋರ್ಟ್​ನಿಂದ ಕಮಿಷನರ್ ನೇಮಕ ಮಾಡಲಾಗಿತ್ತು. ಇವರು ಪಕ್ಷಪಾತದಿಂದ ವರ್ತಿಸುತ್ತಿದ್ದಾರೆ ಎಂದು ಮುಸ್ಲಿಂ ಕಡೆಯವರು ಆರೋಪಿಸಿದ್ದರು. ಕೋರ್ಟ್ ಆದೇಶವಿಲ್ಲದೆ ಅವರು ಜ್ಞಾನವಾಪಿ ಮಸೀದಿಯೊಳಗೆ ವಿಡಿಯೋಗ್ರಫಿ ಮಾಡಲು ಪ್ರಯತ್ನಿಸಿದ್ದಾರೆ ಎಂದು ದೂರಿದ್ದು, ಅವರನ್ನು ಬದಲಾಯಿಸುವಂತೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 4 =
Remember me
