ರಾಜ್ಯ ನೌಕರರ ವಿಮಾ ನಿಗಮದ (Employees State Insurance Corporation – ESIC) ವತಿಯಿಂದ 3865 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಕರ್ನಾಟಕ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಅಪ್ಪರ್ ಡಿವಿಷನ್ ಕ್ಲರ್ಕ್, ಮಲ್ಟಿ ಟಾಸ್ಕಿಂಗ್ ಸ್ಟಾಫ್ ಮತ್ತು ಶೀಘ್ರಲಿಪಿಗಾರ ಹೀಗೆ ಒಟ್ಟು 3865 ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಕರ್ನಾಟಕದಲ್ಲಿ ಅಪ್ಪರ್ ಡಿವಿಷನ್‌ ಕ್ಲರ್ಕ್ 199 ಹುದ್ದೆ, ಸ್ಟೆನೋಗ್ರಾಫರ್ 18 ಹುದ್ದೆ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್‌ 65 ಹುದ್ದೆ ಖಾಲಿ ಇವೆ.
ಆನ್‌ಲೈನ್ ನೋಂದಣಿ ಪ್ರಕ್ರಿಯೆಯು ಜನವರಿ 15, 2022 ರಿಂದ ಪ್ರಾರಂಭವಾಗಿ ಫೆಬ್ರವರಿ 15, 2022 ರಂದು ಕೊನೆಗೊಳ್ಳಲಿದೆ.
ಹುದ್ದೆಗಳ ವಿವರ:ಅಪ್ಪರ್ ಡಿವಿಷನ್ ಕ್ಲರ್ಕ್ – 1736ಮಲ್ಟಿ ಟಾಸ್ಕಿಂಗ್ ಸ್ಟಾಫ್ – 1964ಶೀಘ್ರಲಿಪಿಗಾರ – 165
ವಯೋಮಿತಿ:2022ರ ಫೆಬ್ರವರಿ 15ಕ್ಕೆ ಅನ್ವಯ ಆಗುವಂತೆ 27 ವರ್ಷದ ಒಳಗಿರಬೇಕು. ಆದರೆ ಮಲ್ಟಿ ಟಾಸ್ಕಿಂಗ್ ಸ್ಟಾಫ್​ಗೆ ಗರಿಷ್ಠ 25 ವರ್ಷ.
ಆಯ್ಕೆ ಪ್ರಕ್ರಿಯೆ: ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆಗಳಿವೆ.
ವಿದ್ಯಾರ್ಹತೆ:ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಪದವಿ, ಮೆಟ್ರಿಕ್ಯುಲೇಶನ್ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ವೇತನ:ಅಪ್ಪರ್ ಡಿವಿಷನ್ ಕ್ಲರ್ಕ್ ಮತ್ತು ಶೀಘ್ರಲಿಪಿಗಾರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 81,100/-ರೂ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ತಿಂಗಳಿಗೆ 18,000/- ರಿಂದ 56,900/-ರೂ.
ಅರ್ಜಿ ಶುಲ್ಕ:ಸಾಮಾನ್ಯ ಅಭ್ಯರ್ಥಿಗಳಿಗೆ 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ/ಇಲಾಖೆಯ ಅಭ್ಯರ್ಥಿಗಳು, ಮಹಿಳಾ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250/-ರೂ
ಮಾಹಿತಿಗೆhttps://www.esic.nic.in/recruitments
ಆಸಕ್ತರು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್http://www.esic.nic.in/ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಎಸ್‌ಬಿಐ: 90 ಸಾವಿರ ರೂವರೆಗೆ ಸಂಬಳ

ಕೇಂದ್ರೀಯ ವಿವಿಯಲ್ಲಿದೆ 71 ಬೋಧಕ ಹುದ್ದೆಗಳು: 1.45 ಲಕ್ಷ ರೂ.ವರೆಗೆ ಸಂಬಳ, ಕೆಲವೇ ದಿನ ಬಾಕಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + 18 =
Remember me
