ನವದೆಹಲಿ:ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಪ್ರಚೋದನೆ ನೀಡಿದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಆಮ್‌ ಆದ್ಮಿ ಪಕ್ಷದ ಇಬ್ಬರು ಶಾಸಕರು ಹಾಗೂ ಇತರ 15 ಮಂದಿ ತಪ್ಪಿತಸ್ಥರು ಎಂದು ಸಂಸದರು ಮತ್ತು ಶಾಸಕರ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ದೆಹಲಿಯ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ಶಿಕ್ಷೆಯ ಪ್ರಮಾಣ ಇನ್ನಷ್ಟೇ ನಿಗದಿಯಾಗಬೇಕಿದೆ.
ಏಳು ವರ್ಷಗಳ ಹಿಂದೆ ಅಂದರೆ 2015ರ ಸೆಪ್ಟೆಂಬರ್​ 7ರಂದು ಬುರಾರಿ ಪೊಲೀಸ್ ಠಾಣೆಗೆ ಗುಂಪೊಂದು ನುಗ್ಗಿ ಗಲಭೆ ನಡೆಸಿರುವ ಘಟನೆ ಇದಾಗಿದೆ. ಈ ಸಂದರ್ಭದಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಲು ಗುಂಪಿಗೆ ಪ್ರಚೋದನೆ ನೀಡಿರುವ ಆರೋಪ ಶಾಸಕರಾದ ಅಖಿಲೇಶ್‌ ಪಾಟಿ ತ್ರಿಪಾಠಿ ಮತ್ತು ಸಂಜೀವ್ ಝಾ ಮೇಲೆ ಇದೆ. ಇವರನ್ನು ಅಪರಾಧಿಗಳೆಂದು ಇಂದು ಕೋರ್ಟ್​ ಹೇಳಿದೆ.
ಏನಿದು ಘಟನೆ?ಪೊಲೀಸರು ಬಂಧನದಲ್ಲಿರಿಸಿದ್ದ ಇಬ್ಬರ ಮೇಲೆ ಹಲ್ಲೆಗೈಯುವ ಸಲುವಾಗಿ ತಮ್ಮ ವಶಕ್ಕೆ ನೀಡುವಂತೆ ಒತ್ತಾಯಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಗುಂಪೊಂದು ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿತ್ತು. ಗುಂಪು ಹಿಂಸಾಚಾರಕ್ಕೆ ತಿರುಗಿದಾಗ ಸಂಜೀವ್ ಝಾ ಮತ್ತು ಅಖಿಲೇಶ್ ಪಾಟಿ ತ್ರಿಪಾಠಿ ಎಂಬ ಆರೋಪಿಗಳಿಬ್ಬರೂ ಸ್ಥಳದಲ್ಲಿ ಇದ್ದರು. ಗುಂಪನ್ನು ಸಮಾಧಾನಪಡಿಸಲು ಪೊಲೀಸರು ಯತ್ನಿಸಿದರೂ ಶಾಸಕರು ಗುಂಪಿಗೆ ಪ್ರಚೋದನೆ ನೀಡಿ ಹಲ್ಲೆ ಮತ್ತು ಕಲ್ಲು ತೂರಾಟ ನಡೆಸುವಂತೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು.
“ಗುಂಪು ಹಿಂಸಾಚಾರಕ್ಕೆ ತಿರುಗಿದಾಗ ಸಂಜೀವ್ ಝಾ ಮತ್ತು ಅಖಿಲೇಶ್ ಪಾಟಿ ತ್ರಿಪಾಠಿ ಎಂಬ ಆರೋಪಿಗಳಿಬ್ಬರೂ ಸ್ಥಳದಲ್ಲಿ ಇದ್ದರು. ಪ್ರಚೋದನೆ ಮತ್ತು ಕುಮ್ಮಕ್ಕು ನೀಡುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ಯಶಸ್ವಿಯಾಗಿದೆ” ಎಂಬುದಾಗಿ ಕೋರ್ಟ್​ ಹೇಳಿದೆ (ಏಜೆನ್ಸೀಸ್​)
ದಸರಾಕ್ಕಿಲ್ಲ 15 ದಿನಗಳ ರಜೆ: ಸರ್ಕಾರದಿಂದ ಹೊರಟಿದೆ ಈ ಆದೇಶ- ಪ್ರವಾಸಕ್ಕೆ ಪ್ಲ್ಯಾನ್​ ಮಾಡಿಕೊಂಡಿದ್ರೆ ಹುಷಾರ್​…

‘ಜೊತೆಜೊತೆಯಲಿ’ ತಂಡದ ಜತೆಗಿನ ಕಿರಿಕ್​ ಬಳಿಕ ಬಿಗ್​ಬಾಸ್​-9 ಮನೆಯೊಳಕ್ಕೆ ಅನಿರುದ್ಧ್​?

ನಮ್​ ಇಲಾಖೆಯಲ್ಲಿ ಹಲವಾರು ಕಳ್ಳರಿದ್ದಾರೆ, ನಾನೇ ಅವರ ನಾಯಕ! ಸಚಿವನ ಮಾತಿಗೆ ಸಿಎಂ ನಿತೀಶ್​ ಕಕ್ಕಾಬಿಕ್ಕಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 + eighteen =
Remember me
