ಕಾಬುಲ್‌:ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತ ಬರುತ್ತಿರುವ ನಡುವೆಯೇ, ದೇಶದಿಂದ ಪಲಾಯನ ಮಾಡಲು ವಿಮಾನ ನಿಲ್ದಾಣಕ್ಕೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಪ್ರಾಣ ಉಳಿಸಿಕೊಳ್ಳಲು ಒಂದೇ ವಿಮಾನದಲ್ಲಿ ನೂಕು ನುಗ್ಗಲು ಉಂಟಾಗುತ್ತಿದೆ.
ಈ ನಡುವೆಯೇ ವಿಮಾನ ನಿಲ್ದಾಣದಲ್ಲಿಯೂ ಗುಂಡಿನ ದಾಳಿ ನಡೆದಿದೆ. ಇದರಲ್ಲಿ ಐವರು ಅಫ್ಘನ್ನರು ಮೃತಪಟ್ಟಿದ್ದಾರೆ. ಇವರ ಮೃತ ದೇಹಗಳನ್ನು ವಿಮಾನ ನಿಲ್ದಾಣದ ಭದ್ರತಾ ಸಿಬ್ಬಂದಿ ಹೊತ್ತೊಯ್ದಿದ್ದಾಗಿ ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಆದರೆ ಈ ಗುಂಡು ಹಾರಿಸಿದ್ದು ಯಾರು ಎಂಬ ಬಗ್ಗೆ ತನಿಖೆ ಶುರುವಾಗಿದೆ. ದೇಶ ಬಿಟ್ಟು ಹೋಗುತ್ತಿರುವ ಕಾರಣದಿಂದಾಗಿ ತಾಲಿಬಾನಿಗಳೇ ಇವರ ಮೇಲೆ ಗುಂಡು ಹಾರಿಸಿದ್ದಾರೋ ಅಥವಾ ಇದು ಅಮೆರಿಕದ ಸೈನಿಕರ ಕೃತ್ಯವೋ ತಿಳಿಯುತ್ತಿಲ್ಲ. ಏಕೆಂದರೆ ನೂಕುನುಗ್ಗಲನ್ನು ನಿಯಂತ್ರಿಸಲು ಅಮೆರಿಕ ಸಾವಿರಕ್ಕೂ ಹೆಚ್ಚು ಸೈನಿಕರನ್ನು ನಿಯೋಜನೆ ಮಾಡಿದೆ. ಪರಿಸ್ಥಿತಿ ಕೈಮೀರುತ್ತಿರುವುದನ್ನು ಅರಿತು ಅಮೆರಿಕನ್ ಸೈನಿಕರು ಗಾಳಿಯಲ್ಲಿ ಗುಂಡು ಹಲವು ಸುತ್ತು ಗುಂಡು ಹಾರಿಸಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅದೇ ಇನ್ನೊಂದೆಡೆ ಗುಂಡು ಹಾರಿಸಿರುವ ಶಬ್ದ ಕೇಳಿದ್ದು ನಿಜ. ಆದರೆ ಈ ಐವರು ಸತ್ತಿದ್ದು, ಕಾಲ್ತುಳಿತದಿಂದಲೂ ಇರಬಹುದು ಎನ್ನುತ್ತಿದ್ದಾರೆ. ಒಟ್ಟಿನಲ್ಲಿ ಜೀವ ಉಳಿಸಿಕೊಳ್ಳಲು ಪರದಾಡುತ್ತಿರುವ ಅಫ್ಘನ್ನರ ಬದುಕೀಗ ಅಕ್ಷರಶಃ ನರಕವಾಗಿದೆ.
‘ನಾನು ಆ ಕ್ಷಣ ನಿರ್ಧಾರ ತೆಗೆದುಕೊಳ್ಳದಿದ್ದರೆ ಲಕ್ಷಾಂತರ ಹೆಣಗಳು ಉರುಳುತ್ತಿದ್ದವು, ರಕ್ತದ ಹೊಳೆ ಹರಿಯುತ್ತಿತ್ತು’

VIDEO: ಪ್ರಾಣ ಉಳಿಸಿಕೊಳ್ಳಲು ಪರದಾಡುತ್ತಿರುವ ಅಫ್ಘಾನ್‌ ಪ್ರಜೆಗಳು- ವಿಮಾನ ಏರಲು ನೂಕು ನುಗ್ಗಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
