ಬೆಂಗಳೂರು:ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಆರೋಪದಲ್ಲಿ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚಿಸಿ ತುಮಕೂರಿನ ಜೆಎಂಎಫ್‌ಸಿ ನ್ಯಾಯಾಲಯ ಹೊರಡಿಸಿದ್ದ ಆದೇಶ ರದ್ದುಪಡಿಸಿರುವ ಹೈಕೋರ್ಟ್, ಪ್ರಕರಣವನ್ನು ಹೊಸದಾಗಿ ಪರಿಗಣಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ದಾಖಲಿಸಿರುವ ಖಾಸಗಿ ದೂರಿನ ಆಧಾರದ ಮೇಲೆ ಕ್ಯಾತಸಂದ್ರ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದು ಕೋರಿ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್. ಪಿ ಸಂದೇಶ್ ಅವರಿದ್ದ ಪೀಠ ಈ ಆದೇಶ ನೀಡಿದೆ.
ಖಾಸಗಿ ದೂರಿನ ಸಂಬಂಧ ಎಫ್ಐಆರ್ ದಾಖಲಿಸಿಲು ಆದೇಶಿಸಿರುವ ಮ್ಯಾಜಿಸ್ಟ್ರೇಟ್, ದೂರಿನಲ್ಲಿರುವ ಆರೋಪಗಳೇನು, ಅವು ಅಪರಾದವಾಗುತ್ತದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸದೆ ಯಾಂತ್ರಿಕವಾಗಿ ವರ್ತಿಸಿದೆ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ದೂರನ್ನು ಹೊಸದಾಗಿ ವಿಚಾರಣೆ ನಡೆಸಿ, ಅದರಲ್ಲಿರುವ ಅಂಶಗಳು ಅಪರಾಧ ಕೃತ್ಯವಾಗಲಿದೆಯೇ ಎಂಬುದನ್ನು ಪರಿಶೀಲಿಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ವಿಚಾರಣಾ ನ್ಯಾಯಾಲಯಕ್ಕೆ ನಿರ್ದೇಶಿಸಿದೆ.
ಇದಕ್ಕೂ ಮುನ್ನ ವಾದ ಮಂಡಿಸಿದ ಕಂಗನಾ ಪರ ವಕೀಲರು, ಟ್ವೀಟ್‌ನಲ್ಲಿ ಯಾವುದೇ ದುರುದ್ದೇಶವಿರಲಿಲ್ಲ. ಜನರ ನಡುವೆ ದ್ವೇಷ ಬಿತ್ತುವ ಉದ್ದೇಶವೂ ಇರಲಿಲ್ಲ. ತಮ್ಮ ಅಭಿಮಾನಿಗಳನ್ನು ಎಚ್ಚರಿಸುವ ಉದ್ದೇಶದಿಂದ, ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂಬ ನಿಟ್ಟಿನಲ್ಲಿ ಆ ರೀತಿ ಟ್ವೀಟ್ ಮಾಡಲಾಗಿತ್ತು. ಆದರೆ, ಅದನ್ನೇ ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.
ಅಧಿಕಾರ ಕೊಟ್ಟವರ‌್ಯಾರು?ವಿಚಾರಣೆ ವೇಳೆ, ಕಂಗನಾ ರಣಾವತ್ ಅವರ ಟ್ವೀಟ್ ಕುರಿತು ಪ್ರತಿಕ್ರಿಯಿಸಿದ ಪೀಠ, ಪ್ರತಿಭಟನಾನಿರತ ರೈತರನ್ನು ಭಯೋತ್ಪಾದಕರು ಎಂದು ಕರೆಯುವ ಅಧಿಕಾರವನ್ನು ನಿಮಗೆ ಯಾರು ನೀಡಿದರು, ಅದೇ ಮಾತುಗಳನ್ನು ನಿಮ್ಮ ವಿರುದ್ಧ ಆಡಿದರೆ ಏನು ಮಾಡುತ್ತೀರಿ ಎಂದು ತೀಕ್ಷ್ಣವಾಗಿ ಪ್ರಶ್ನಿಸಿತಲ್ಲದೆ, ಸೆಲೆಬ್ರಿಟಿಗಳು ಯಾವುದೇ ಹೇಳಿಕೆ ನೀಡುವ ಮುನ್ನ ತಮ್ಮ ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು ಎಂದು ಮೌಖಿಕವಾಗಿ ಹೇಳಿತು.
ಪ್ರಕರಣವೇನು?ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಬಗ್ಗೆ 2020 ಸೆ.21ರಂದು ಟ್ವೀಟ್ ಮಾಡಿರುವ ಕಂಗನಾ, ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ, ಅವರನ್ನು ಅಪಮಾನಿಸಿದ್ದಾರೆ. ಜತೆಗೆ ಸಮಾಜದ ಸ್ವಾಸ್ಥ್ಯ ಕದಡುವ ಯತ್ನ ಮಾಡಿದ್ದಾರೆ. ಆದ್ದರಿಂದ, ಅವರ ವಿರುದ್ಧ ಕಾನೂನು ಜರುಗಿಸಲು ಪೊಲೀಸರಿಗೆ ನಿರ್ದೇಶಿಸಬೇಕೆಂದು ಕೋರಿ ತುಮಕೂರಿನ ವಕೀಲ ಎಲ್. ರಮೇಶ್ ನಾಯಕ್ ಸೆ.25ರಂದು ತುಮಕೂರಿನ ಪ್ರಧಾನ ಸಿವಿಲ್ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.
ಅ.9ರಂದು ವಿಚಾರಣೆ ನಡೆಸಿದ್ದ ನ್ಯಾಯಾಲಯ ಅರ್ಜಿದಾರರ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ಕ್ರಮ ಜರುಗಿಸಲು ಕ್ಯಾತಸಂದ್ರ ಠಾಣೆ ಪೊಲೀಸರಿಗೆ ನಿರ್ದೇಶಿಸಿತ್ತು. ಪೊಲೀಸರು ನಟಿಯ ವಿರುದ್ಧ ಐಪಿಸಿ ಸೆಕ್ಷನ್ 153(ಎ), 504, 108 ಅಡಿ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಎಫ್ಐಆರ್ ಸಲ್ಲಿಸಿದ್ದರು.
ಸುಂದರಿ ಸಿಕ್ಕಳೆಂದು ಹಿರಿಹಿರಿ ಹಿಗ್ಗಿದ ಯುವಕ: ಮೊದಲ ರಾತ್ರಿಯೇ ಕೊಟ್ಟಳೊಂದು ಶಾಕ್‌, ದಾಖಲಾಯ್ತು ದೂರು

ಬೆಂಗಳೂರು ಎಂಟ್ರಿಗೂ ಮುನ್ನ ಕರೊನಾ ನೆಗೆಟಿವ್‌ ವರದಿ ಕಡ್ಡಾಯ- ಯಾರಿಗೆಲ್ಲಾ ಅನ್ವಯ? ಎಂದಿನಿಂದ ಜಾರಿ? ಇಲ್ಲಿದೆ ಡಿಟೇಲ್ಸ್‌

ಅಯ್ಯಯ್ಯೋ ಬಂದೇ ಬಿಟ್ರು ಎನ್ನುತ್ತಲೇ ₹20 ಲಕ್ಷ ಗರಿಗರಿ ನೋಟ್‌ ಸುಟ್ಟು ಭಸ್ಮ ಮಾಡಿದ ತಹಶೀಲ್ದಾರ್‌!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:7 − 2 =
Remember me
