ತುಮಕೂರು:ನೂತನ ಕೃಷಿ ಕಾನೂನು ವಿರೋಧಿಸಿ ರೈತರು ಹೋರಾಟ ನಡೆಸುತ್ತಿದ್ದ ವೇಳೆ ಟ್ವಿಟರ್​​ನಲ್ಲಿ ಅವಹೇಳನಕಾರಿ ಪೋಸ್ಟ್​ ಮಾಡಿರುವ ಆರೋಪ ಹೊತ್ತ ಬಾಲಿವುಡ್​​ ನಟಿ ಕಂಗನಾ ರಣಾವತ್ ವಿರುದ್ಧ ನಗರದ ಕ್ಯಾತಸಂದ್ರ ಪೊಲೀಸರು ಎಫ್ಐಆರ್ ದಾಖಲು ಮಾಡಿದ್ದಾರೆ.
ಹೈಕೋರ್ಟ್ ವಕೀಲ ರಮೇಶ್ ನಾಯ್ಕ್ ಸಲ್ಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಜೆಎಂಎಫ್​ಸಿ ನ್ಯಾಯಾಲಯವು ಕಂಗನಾ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಲು ಕೋರ್ಟ್​ ಆದೇಶಿಸಿತ್ತು.
ಸೆಪ್ಟೆಂಬರ್​​ 21ರಂದು ಕಂಗನಾ ತಮ್ಮ ಟ್ವಿಟರ್​​ ಖಾತೆಯಲ್ಲಿ ಕೃಷಿ ಮಸೂದೆ ಪ್ರತಿಭಟನೆ ವಿರೋಧವಾಗಿ ಟ್ವೀಟ್​ ಮಾಡಿದ್ದರು.
ಇದನ್ನೂ ಓದಿ:ನನ್ನ ಮೇಲೂ ಕೇಸ್​ ಹಾಕಬಹುದು … ಬಾಲಿವುಡ್ ಸ್ಟ್ರೈಕ್ಸ್​ ಬ್ಯಾಕ್​ಗೆ ಕಂಗನಾ ತಿರುಗೇಟುಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನ ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದರು. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಗೆ ಕರ್ನಾಟಕ, ಪಂಜಾಬ್​, ಹರಿಯಾಣ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ವ್ಯಾಪಕ ಪ್ರತಿಭಟನೆ ನಡೆಸಲಾಗುತ್ತಿದ್ದು, ಈ ವೇಳೆ ಕಂಗನಾ ಟ್ವೀಟ್ ಮಾಡಿದ್ದರು.
ಈ ಸಂಬಂಧ ವಕೀಲ ರಮೇಶ್ ನಾಯ್ಕ್ ಅವರು ಕಂಗನಾ ವಿರುದ್ಧ ದೂರು ದಾಖಲಿಸಿದ್ದರು. ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ ಎಂದು ಆರೋಪಿಸಿದ್ದ ರಮೇಶ್​ ಅವರು ನೇರವಾಗಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಸಂಬಂಧಿಸಿದಂತೆ ಕೋರ್ಟ್​ ಆದೇಶದ ಹಿನ್ನೆಲೆಯಲ್ಲಿ ಇದೀಗ ಎಫ್​ಐಆರ್​ ದಾಖಲು ಮಾಡಲಾಗಿದೆ.
ಎಸ್​ಬಿಐ ಆನ್​ಲೈನ್​ ಸೇರಿದಂತೆ ಕೆಲ ಸೇವೆ ಸ್ಥಗಿತ- ಬ್ಯಾಂಕ್​ನಿಂದ ಮಾಹಿತಿ

ಮಕ್ಕಳನ್ನು ಸೊಂಟಕ್ಕೆ ಕಟ್ಟಿ ಕಾಲುವೆಗೆ ಹಾರಿ ದಾವಣಗೆರೆ ಶಿಕ್ಷಕಿ ಆತ್ಮಹತ್ಯೆ!

ಪ್ರಧಾನಿ ಮೋದಿ ಜೀವನಚರಿತ್ರೆಯ ಸಿನಿಮಾದ​ ಸಹ ನಿರ್ಮಾಪಕರಿಗೆ ಜೀವ ಬೆದರಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 − eleven =
Remember me
