ನವದೆಹಲಿ:ಕೆಲ ವಾರಗಳಿಂದ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡ ಸಂಜಯ್ ರೌತ್ ಅವರೊಂದಿಗೆ ನಡೆಯುತ್ತಿರುವ ಜಟಾಪಟಿ ಹಿನ್ನೆಲೆಯಲ್ಲಿ, ನಟಿ ಕಂಗನಾ ರಣಾವತ್​ ಅವರಿಗೆ ವೈ ಪ್ಲಸ್​ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕಂಗನಾ ಇತ್ತೀಚೆಗೆ ಮುಂಬೈಯನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರಕ್ಕೆ (ಪಿಒಕೆ) ಹೋಲಿಸಿದ್ದರು, ಇದರ ವಿರುದ್ಧ ಮಹಾರಾಷ್ಟ್ರ ಸರ್ಕಾರ ಮತ್ತು ಶಿವಸೇನೆ ಮುಖಂಡರು ಕಿಡಿ ಕಾರಿದ್ದರು. ಸಂಜಯ್ ರೌತ್ ತನ್ನ ಸ್ವಂತ ರಾಜ್ಯ ಹಿಮಾಚಲ ಪ್ರದೇಶದಿಂದ ಮುಂಬೈಗೆ ಮರಳದಂತೆ ಎಚ್ಚರಿಕೆ ನೀಡಿದ ನಂತರ ಆಕೆ ಮತ್ತು ಕುಟುಂಬ ಭದ್ರತೆ ಒದಗಿಸುವಂತೆ ಕೇಳಿಕೊಂಡಿದ್ದರು.
ಇದೇ 9ರಂದು ಅವರು ಮುಂಬೈಗೆ ತೆರಳಲಿರುವ ಹಿನ್ನೆಲೆಯಲ್ಲಿ ಕಂಗನಾ ಅವರು ಸುರಕ್ಷತೆಯ ದೃಷ್ಟಿಯಿಂದ ಭದ್ರತೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:‘ನಟಿ ಕಂಗನಾಗೆ ನಾವು ಭದ್ರತೆ ಒದಗಿಸುತ್ತೇವೆ…ಅವರು ಧೈರ್ಯವಾಗಿ ಮುಂಬೈಗೆ ತೆರಳಬಹುದು ‘
ಈ ಭದ್ರತೆ ಅಡಿ ಕಂಗನಾ ಅವರಿಗೆ ಒಬ್ಬರು ಅಥವಾ ಇಬ್ಬರು 2 ಕಮಾಂಡೋಗಳು ಭದ್ರತೆ ವಹಿಸಲಿದ್ದಾರೆ, ಜತೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ 11 ಸಿಬ್ಬಂದಿಗಳ ಭದ್ರತಾ ವ್ಯವಸ್ಥೆಯನ್ನು ಇದು ಹೊಂದಿರುತ್ತದೆ.
ಹಿಮಾಚಲ ಪ್ರದೇಶ ಸರ್ಕಾರವು ರಾಜ್ಯದಲ್ಲಿ ಕಂಗನಾ ಅವರಿಗೆ ಭದ್ರತೆ ಒದಗಿಸಲು ನಿರ್ಧರಿಸಿತ್ತು. ಇದರ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಈ ನಿರ್ಧಾರ ಮಾಡಿದೆ.
ಚಿಕ್ಕಮಗಳೂರು: ಕರೊನಾದಿಂದ ಮೃತಪಟ್ಟ ಅಪ್ಪನ ಅಂತ್ಯಕ್ರಿಯೆ ನಡೆಸಿ ಮಾದರಿಯಾದ ಮಗಳು…

ಕರೊನಾದಿಂದ ನಳೀನ್​ಕುಮಾರ್​ ಗುಣಮುಖ: ದೇವರನ್ನು ಕಂಡೆ ಎಂದು ಭಾವುಕ ಟ್ವೀಟ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 1 =
Remember me
