ಉದರಪುರ (ರಾಜಸ್ಥಾನ):ಹಿಂದೂ ದೇವರನ್ನು ಅವಹೇಳನ ಮಾಡಿರುವುದನ್ನು ವಿರೋಧಿಸಿ ಬಿಜೆಪಿ ನಾಯಕಿ ನೂಪುರ್​ ಶರ್ಮಾ ಪ್ರವಾದಿ ಮೊಹಮ್ಮದ್​ ವಿರುದ್ಧ ನೀಡಿರುವ ಹೇಳಿಕೆಗೆ ಕಾಂಗ್ರೆಸ್ಸಿಗರು ಸೇರಿದಂತೆ ಇಸ್ಲಾಮಿಕ್​ ರಾಷ್ಟ್ರಗಳು ಪ್ರತಿಭಟನೆ ಮಾಡುತ್ತಿರುವ ನಡುವೆಯೇ, ರಾಜಸ್ಥಾನದ ಉದಯಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ನೂಪುರ್​ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್​ ಹಾಕಿದ ಟೈಲರ್​ ಕನ್ಹಯ್ಯಾಲಾಲ್​ ಎಂಬುವವರ ಶಿರಚ್ಛೇದನ ಮಾಡಿದ್ದಾರೆ ಕ್ರೂರಿಗಳು. ಬಟ್ಟೆ ಹೊಲಿಸಿಕೊಳ್ಳುವ ನೆಪದಲ್ಲಿ ಕನ್ಹಯ್ಯಾಲಾಲ್​ ಅವರ ಅಂಗಡಿಗೆ ಬಂದಿರುವ ಇಬ್ಬರು ಕ್ರೂರಿಗಳು ನಂತರ ಕನ್ಹಯ್ಯಾಲಾಲ್​ ಅವರ ರುಂಡವನ್ನು ಕತ್ತರಿಸಿ, ಅದನ್ನು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಇಬ್ಬರನ್ನೂ ಪೊಲೀಸರು ಕೂಡಲೇ ಬಂಧಿಸಿದ್ದಾರೆ.
ಇದೀಗ ಟೈಲರ್​ ಕನ್ಹಯ್ಯಾಲಾಲ್ ಕುಟುಂಬಕ್ಕೆ ರಾಜಸ್ಥಾನ ಸರ್ಕಾರ, 31 ಲಕ್ಷ ರೂಪಾಯಿ ಪರಿಹಾರ ನೀಡಿದೆ. ಅವರ ಕುಟುಂಬದ ಇಬ್ಬರಿಗೆ ಗುತ್ತಿಗೆ ಆಧಾರದ ಮೇಲೆ ಸರ್ಕಾರಿ ಹುದ್ದೆಯನ್ನು ನೀಡುವುದಾಗಿ ಸರ್ಕಾರ ಹೇಳಿದೆ.
ಇನ್ನು, ಘಟನೆ ಕುರಿತು ತನಿಖೆ ನಡೆಸಿರುವ ಪೊಲೀಸರಿಗೆ ಈ ಇಬ್ಬರು ಕ್ರೂರಿಗಳು, ಐಸಿಸ್ ನಂಟು ಹೊಂದಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಈ ಬಗ್ಗೆ ಇನ್ನಷ್ಟು ತನಿಖೆ ನಡೆಸಲಾಗುತ್ತಿದೆ. ಇದರ ಹಿಂದೆ ಭಾರಿ ದೊಡ್ಡ ಉಗ್ರರ ಜಾಲ ಇರುವ ಶಂಕೆ ವ್ಯಕ್ತವಾಗಿದೆ.
ಕಲ್ಲಂಗಡಿ ಒಡೆದಾಗ ಗಡಿಪಾರು ಮಾಡು ಎಂದ ಬುದ್ಧಿಜೀವಿಗಳೇ, ರುಂಡ ಕತ್ತರಿಸಿದ್ದಾರೆ… ಬಾಯಿ ಮುಚ್ಚಿಕೊಂಡಿರುವಿರೇಕೆ?

ಹಿಂದು ಹತ್ಯೆ ಕೇಸ್​: ಉದಯಪುರದಲ್ಲಿ 144 ಸೆಕ್ಷನ್​ ಜಾರಿ, ಜಾಲತಾಣದಲ್ಲಿ ಪೋಸ್ಟ್​ ಹಾಕಿದ್ದು ಕೊಲೆಯಾದ ವ್ಯಕ್ತಿಯಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − 11 =
Remember me
