ನವದೆಹಲಿ: ಜೆಎನ್​​ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷರಾಗಿದ್ದ, ಸಿಪಿಐ ಮುಖಂಡ ಕನ್ಹಯ್ಯ ಕುಮಾರ್ ಹಾಗೂ ಗುಜರಾತ್ ಶಾಸಕ (ಸ್ವತಂತ್ರ) ಜಿಗ್ನೇಶ್ ಮೇವಾನಿ ಅವರು ಇಂದು ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರೆ.
ಇದುವರೆಗೆ ಸಿಪಿಐನಲ್ಲಿಯೇ ಇರುವ ಕನ್ಹಯ್ಯ ಕುಮಾರ್‌ ಅವರು ಕಾಂಗ್ರೆಸ್‌ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬ ಕಾರಣದಿಂದ ಕಾಂಗ್ರೆಸ್‌ ವಲಯದಲ್ಲಿ ಭಾರಿ ಸಂತಸದ ವಾತಾವರಣ ನಿರ್ಮಾಣವಾಗಿದ್ದು, ದೆಹಲಿಯ ತುಂಬೆಲ್ಲಾ ಅವರನ್ನು ಸ್ವಾಗತಿಸುವ ಫೋಟೋ ರಾರಾಜಿಸುತ್ತಿದೆ. ಇವರು 2019 ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ಸೇರಿದ್ದರು. ಊರು ಬಿಹಾರದ ಬೇಗುಸರೈನಲ್ಲಿ ಸ್ಪರ್ಧಿಸಿದ್ದರು. ಆದರೆ ಬಿಜೆಪಿಯ ಗಿರಿರಾಜ್ ಸಿಂಗ್ ವಿರುದ್ಧ ಪರಾಭವಗೊಂಡಿದ್ದರು.
ಇನ್ನು ಜಿಗ್ನೇಶ್‌ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2017ರ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲದೊಂದಿಗೆ ಇವರು ಸ್ಪರ್ಧಿಸಿದ್ದರು. ಇದೀಗ ಅವರೂ ಕಾಂಗ್ರೆಸ್‌ ಸೇರಲಿದ್ದಾರೆ.
ಅ.3ರಂದು ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಯ ಪರೀಕ್ಷೆ: ಕೇಂದ್ರದ ಮಾಹಿತಿ, ಹಾಲ್‌ ಟಿಕೆಟ್‌ ಡೌನ್‌ಲೋಡ್‌ ವಿವರ ಇಲ್ಲಿದೆ…

VIDEO: ಮತ್ತೆ ಬೆಚ್ಚಿಬಿದ್ದ ಬೆಂಗಳೂರು- ಎರಡೇ ದಿನಗಳಲ್ಲಿ ಎರಡೆರಡು ದುರಂತ- ಕುಸಿಯಿತು ಎರಡಂತಸ್ತಿನ ಕಟ್ಟಡ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 14 =
Remember me
