ಪಟ್ನಾ:ಸಿಪಿಐ ಮುಖಂಡ ಹಾಗೂ ಜೆಎನ್‌ಯು ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ಕನ್ಹಯ್ಯ ಕುಮಾರ್ ಅವರು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತ, ಸಚಿವ ಅಶೋಕ್ ಚೌಧರಿ ಅವರನ್ನು ಭೇಟಿ ಮಾಡಿದ್ದಾರೆ. ಇದರಿಂದ ಅವರ ಮುಂದಿನ ರಾಜಕೀಯ ನಡೆಯ ಬಗ್ಗೆ ಕೆಲವು ಚರ್ಚೆ ಶುರುವಾಗಿದ್ದು, ಸಿಪಿಐ ಬಿಟ್ಟು ಜೆಡಿಯು ಸೇರಲಿರುವ ಬಗ್ಗೆ ಸುದ್ದಿಯಾಗಿದೆ.
ಕೆಲ ದಿನಗಳ ಹಿಂದೆ ಹೈದರಾಬಾದ್‌ನಲ್ಲಿ ನಡೆದಿದ್ದ ಸಿಪಿಐನ ಪಕ್ಷದ ಸಭೆಯಲ್ಲಿ, ಪಕ್ಷದ ಪದಾಧಿಕಾರಿಗಳ ಜತೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಕನ್ಹಯ್ಯ ಕುಮಾರ್ ವಿರುದ್ಧ ಖಂಡನಾ ನಿರ್ಣಯ ಅಂಗೀಕರಿಸಲಾಗಿತ್ತು. ಈ ಸಭೆಯ ಬೆನ್ನಲ್ಲೇ ಕನ್ಹಯ್ಯ ಅವರು ನಿತೀಶ್ ಅಪ್ತರನ್ನು ಭೇಟಿ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಕನ್ಹಯ್ಯ ಹಾಗೂ ಚೌಧರಿ ಅವರ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಕನ್ಹಯ್ಯ ಬೇಗುಸರಾಯ್‌ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್ ವಿರುದ್ಧ ಸೋತಿದ್ದರು. ಕನ್ಹಯ್ಯ ಅವರು ಬಿಜೆಪಿಯನ್ನು ವಿರೋಧಿಸಿಕೊಂಡು ಬಂದವರು. ಹಾಗಿದ್ದರೂ ನಿತೀಶ್ ಬಗ್ಗೆ ಮೃದು ಧೋರಣೆ ಹೊಂದಿದ್ದಾರೆ ಎನ್ನಲಾಗಿದೆ.
ಅದೇ ಇನ್ನೊಂದೆಡೆ, 2016ರ ದೇಶದ್ರೋಹ ಪ್ರಕರಣದಲ್ಲಿ ಕನ್ಹಯ್ಯ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ಪೊಲೀಸರು ಸಲ್ಲಿಸಿದ್ದ ಚಾರ್ಜ್‌ಶೀಟ್ ಅನ್ವಯ ದೆಹಲಿಯ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ (ಸಿಎಮ್ಎಂ) ಕೋರ್ಟ್‌ ಕನ್ಹಯ್ಯಗೆ ಸಮನ್ಸ್‌ ಜಾರಿ ಮಾಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 15ರಂದು ಅವರ ಹಾಜರಾತಿಗೆ ಆದೇಶಿಸಿದೆ.
ಕನ್ಹಯ್ಯ ಕುಮಾರ್ ಮತ್ತು ಜೆಎನ್‌ಯು ಮಾಜಿ ವಿದ್ಯಾರ್ಥಿಗಳಾದ ಉಮರ್ ಖಾಲಿದ್ ಮತ್ತು ಅನಿರ್ಬನ್ ಭಟ್ಟಾಚಾರ್ಯ, ಕಾಶ್ಮೀರಿ ವಿದ್ಯಾರ್ಥಿಗಳಾದ ಅಕ್ವಿಬ್ ಹುಸೇನ್, ಮುಜೀಬ್ ಹುಸೇನ್, ಮುನೀಬ್ ಹುಸೇನ್, ಉಮರ್ ಗುಲ್, ರಾಯಿಯಾ ರಸ್ಸೋಲ್, ಬಶೀರ್ ಭಟ್ ಮತ್ತು ಬಶರತ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಸಿಪಿಐ) ನಾಯಕಿ ಡಿ ರಾಜಾ ಅವರ ಪುತ್ರಿ ಅಪ್ರಜಿತಾ, ಶೆಹ್ಲಾ ರಶೀದ್ (ಆಗಿನ ಉಪ-ಜೆಎನ್‌ಯುಎಸ್‌ಯು ಅಧ್ಯಕ್ಷ), ರಾಮ ನಾಗ, ಅಶುತೋಷ್ ಕುಮಾರ್ ಮತ್ತು ಜೆಎನ್‌ಯುನ ಎಲ್ಲಾ ಮಾಜಿ ವಿದ್ಯಾರ್ಥಿಗಳಾದ ಬನೋಜೋಟ್ಸ್ನಾ ಲಾಹಿರಿ ಸೇರಿದಂತೆ 36 ಮಂದಿಯ ವಿರುದ್ಧ ಚಾರ್ಜ್‌ಷೀಟ್‌ ಸಲ್ಲಿಸಲಾಗಿದೆ.
ಹಾಲಿನ ವ್ಯವಹಾರ ನಡೆಸಲು 30 ಕೋಟಿ ರೂ. ಹೆಲಿಕಾಪ್ಟರ್‌ ಖರೀದಿ!

ನಿವೃತ್ತ ಮುಖ್ಯ ನ್ಯಾಯಮೂರ್ತಿ, ಮಾಜಿ ರಾಜ್ಯಪಾಲ, ಸಂವಿಧಾನ ತಜ್ಞ ರಾಮಾ ಜೋಯಿಸ್‌ ಇನ್ನಿಲ್ಲ

ದೆಹಲಿಗೆ ಹಾರಿದ ಸಿದ್ದರಾಮಯ್ಯ- ರಾಜ್ಯಕ್ಕೆ ರಾಹುಲ್‌ ಬರುವ ಮೊದಲೇ ಸಿಕ್ರೇಟ್‌ ಮಾತುಕತೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:19 + 20 =
Remember me
