ಮುಂಬೈ:ಚಿತ್ರ ನಿರ್ಮಾಪಕ ಕರಣ್ ಜೋಹರ್ ಅವರ ಪಾರ್ಟಿಯಲ್ಲಿ ಭಾಗವಹಿಸಿ ಬಂದಿದ್ದ ಬಾಲಿವುಡ್‌ ನಟಿಯರಾದ ಕರೀನಾ ಕಪೂರ್‌ ಹಾಗೂ ಅಮೃತಾ ಅರೋರಾರಿಗೆ ಕರೊನಾ ಪಾಸಿಟಿವ್‌ ಕಾಣಿಸಿಕೊಂಡಿದ್ದು, ಅವರು ಇರುವ ಪ್ರದೇಶವನ್ನು ಸೀಲ್‌ಡೌನ್‌ ಮಾಡಲಾಗಿದೆ.
ನಟ ಸೊಹೇಲ್ ಖಾನ್ ಅವರ ಪತ್ನಿ ಸೀಮಾ ಖಾನ್ ಇರುವ ಕಿರಣ್ ಅಪಾರ್ಟ್‌ಮೆಂಟ್, ಕರೀನಾ ಕಪೂರ್ ಇರುವ ಸದ್ಗುರು ಶರಣ್, ಕರಣ್ ಜೋಹರ್ ಇರುವ ದಿ ರೆಸಿಡೆನ್ಸಿ, ಅಮೃತ ಅರೋರಾ ಇರುವ ಗವರ್ನಮೆಂಟ್​ ಹೇರಿಟೇಜ್ ಅನ್ನು ಸೀಲ್ ಮಾಡಲಾಗಿದೆ ಎಂದು ಬೃಹನ್‌ಮುಂಬೈ ಮಹಾನಗರ ಪಾಲಿಕೆಯ ಆರೋಗ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕರಣ್ ಜೋಹರ್ ಏರ್ಪಡಿಸಿದ್ದ ಪಾರ್ಟಿಯಲ್ಲಿ ಇವರೆಲ್ಲರೂ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ್ದರು. ಆದ್ದರಿಂದ ಸೋಂಕು ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಇದೀಗ ಪಾರ್ಟಿಯಲ್ಲಿ ಭಾಗವಹಿಸಿದವರು ಕೂಡ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕರಣ್ ಜೋಹರ್ ಅವರಿಗೂ ಇದಾಗಲೇ ಪರೀಕ್ಷೆ ಮಾಡಲಾಗಿದೆ. ಆದರೆ ಅವರ ವರದಿ ನೆಗೆಟಿವ್ ಬಂದಿದೆ. ಆದರೂ ಸದ್ಯ ಹೋಂ ಐಸೋಲೇಷನ್‌ನಲ್ಲಿ ಇರುವಂತೆ ವೈದ್ಯರು ಹೇಳಿದ್ದಾರೆ. ಪಾರ್ಟಿಯಲ್ಲಿ ಭಾಗವಹಿಸಿದ್ದ ಉಳಿದವರ ವರದಿ ಬರಬೇಕಿದೆ. ಈ ಎಲ್ಲರ ಪ್ರಾಥಮಿಕ ಸಂಪರ್ಕಕ್ಕೆ ಬಂದವರ ಪರೀಕ್ಷೆಯನ್ನು ಕೂಡ ಮಾಡಲಾಗುತ್ತಿದೆ.
ಆಫ್ರಿಕಾದಿಂದ ಹಿಂದಿರುಗಿದ್ದ ನಟ ಅರ್ಜುನ್‌ ಸರ್ಜಾಗೆ ಕೋವಿಡ್‌: ‘ರಾಮ ಭಕ್ತ ಹನುಮಾನ್​ ಕಿ ಜೈ’ ಎಂದು ಪೋಸ್ಟ್‌…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 − six =
Remember me
