ಲಂಡನ್:ಕೆಂಬ್ರಿಡ್ಜ್ ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಡಾ.ಮನಾಲಿ ದೇಸಾಯಿ ನೇಮಕಗೊಂಡಿದ್ದಾರೆ.ನ್ಯೂನ್‌ಹ್ಯಾಮ್ ಕಾಲೇಜಿನ ಪ್ರಾಧ್ಯಾಪಕಿಯಾಗಿರುವ ಇವರು, ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ನಿನ್ನೆ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಮೂಲಕ ಲಂಡನ್​ ವಿಶ್ವವಿದ್ಯಾನಿಲಯದ ಒಂದು ವಿಭಾಗದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಮೊದಲ ಭಾರತೀಯ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.ಕಂಪ್ಯಾರಿಟಿವ್ ಆ್ಯಂಡ್ ಹಿಸ್ಟಾರಿಕ್ ಸೋಷಿಯಾಲಜಿಯ ರೀಡರ್ ಹಾಗೂ ನ್ಯೂನ್‌ಹ್ಯಾಮ್ ಕಾಲೇಜಿನ ಫೆಲೋ ಆಗಿರುವ ಮನಾಲಿಯವರು, ಸಾಮಾಜಿಕ ಚಳವಳಿಗಳು, ಜನಾಂಗೀಯ ಮತ್ತು ಲಿಂಗಭೇದದ ಹಿಂಸಾಚಾರ ಮತ್ತು ವಸಾಹತೋತ್ತರ ಅಧ್ಯಯನಗಳ ಮೇಲೆ ಸಾಕಷ್ಟು ಸಂಶೋಧನೆ ನಡೆಸಿರುವುದಾಗಿ ವರದಿ ಹೇಳಿದೆ.
ಇದನ್ನೂ ಓದಿ:ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ?: ಆರ್.ಆರ್. ನಗರ ಕ್ಷೇತ್ರಕ್ಕೆ ವರ್ಷದ ನಂತರ ಉಪಚುನಾವಣೆಈ ಹುದ್ದೆಗೆ ತೀವ್ರವಾಗಿ ಸಂತೋಷ ವ್ಯಕ್ತಪಡಿಸಿರುವ ಮನಾಲಿಯವರು, ಸಮಾಜಶಾಸ್ತ್ರವು ನಮ್ಮ ಸುತ್ತಲಿನ ಪ್ರಪಂಚವನ್ನು ಅರಿತುಕೊಳ್ಳಲು ಸಾಧ್ಯವಾಗುವ ಸಾಧನಗಳನ್ನು ನೀಡುತ್ತದೆ. ಇಂಥ ಕಠಿಣ ಅವಧಿಯಲ್ಲಿ ಇಲಾಖೆಯ ಮುಖ್ಯಸ್ಥ ಹುದ್ದೆ ಸಿಕ್ಕಿದ್ದು ಉತ್ತಮ ಅವಕಾಶವಾಗಿರುವುದು ಬಹು ಹೆಮ್ಮೆ ಅನ್ನಿಸುತ್ತಿದೆ ಎಂದಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + two =
Remember me
