ಮಂಗಳೂರು:ಕರೊನಾ ವೈರಸ್​ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಸ್ಥಗಿತಗೊಂಡಿದ್ದ ವಿವಿಧ ಸೇವೆಗಳು ನಾಳೆಯಿಂದ (ಸೋಮವಾರ) ಆರಂಭವಾಗಲಿದೆ.
“ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಎಲ್ಲಾ ಸೇವೆಗಳು ನಾಳೆಯಿಂದ ಶುರುವಾಗಲಿದೆ. ಆದರೆ ಕರೊನಾ ವೈರಸ್​ ಹಿನ್ನೆಲೆಯಲ್ಲಿ ಕೆಲವೊಂದು ಷರತ್ತುಗಳನ್ನು ಪೂಜಾ ವಿಧಿ ವಿಧಾನಗಳಿಗೆ ಸಂಬಂಧಿಸಿದಂತೆ ಅನ್ವಯ ಮಾಡಲಾಗಿದೆ ಎಂದು ದೇವಾಲಯದ ಆಡಳಿತಾಧಿಕಾರಿ ಎಂ.ಜೆ.ರೂಪಾ ತಿಳಿಸಿದ್ದಾರೆ.
ಇದನ್ನೂ ಓದಿ:16 ಬಾರಿ ಬಂಧಿಸಿದ್ದ ಪೊಲೀಸ್​ ಅಧಿಕಾರಿಗೇ ಕಿಡ್ನಿ ಕೊಟ್ಟು ಕಾಪಾಡಿದಳು!
ನಿಯಮಗಳು ಹೀಗಿವೆ
* ಸೇವಾರ್ಥಿಗಳಿಗೆ ಮಾತ್ರ ಭೋಜನ ವ್ಯವಸ್ಥೆಯನ್ನು ಮಾಡಲಾಗುತ್ತದೆ.
* ದೇವಾಲಯ ಬೆಳಗ್ಗೆ 6.30 ರಿಂದ ಮಧ್ಯಾಹ್ನ 1.30ರವರೆಗೆ ಮತ್ತು 3.30 ರಿಂದ ರಾತ್ರಿ 8ಗಂಟೆಯವರೆಗೆ ತೆರೆದಿರುತ್ತದೆ.
* ಪ್ರತಿದಿನ ಮೂವತ್ತು ಭಕ್ತರಿಗೆ ಮಾತ್ರ ಸರ್ಪ ಸಂಸ್ಕಾರ, ಆಶ್ಲೇಷ ಬಲಿ ನಡೆಸಲು ಅವಕಾಶ ನೀಡಲಾಗುವುದು.
* ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇವೆಯಲ್ಲಿ ಇಬ್ಬರಿಗೆ ಮಾತ್ರ ಒಂದು ಟಿಕೆಟ್​ನಲ್ಲಿ ಸೇವೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದು.
* ಮಹಾಪೂಜೆ ಮತ್ತು ಪಂಚಾಮೃತ ಸೇವೆಯ ಹತ್ತು ಟಿಕೆಟ್ ಮಾತ್ರ ವಿತರಿಸಲಾಗುವುದು.
* ಸರ್ಪ ಸಂಸ್ಕಾರ ಸೇವೆ ಸಲ್ಲಿಸುವವರಿಗೆ ಎರಡು ದಿನ, ಬೇರೆ ಸೇವೆ ನೀಡುವವರಿಗೆ ಒಂದು ದಿನ ಮಾತ್ರ ದೇವಾಲಯದ ವಸತಿ ಗೃಹದಲ್ಲಿ ತಂಗಲು ಅವಕಾಶ ಕಲ್ಪಿಸಲಾಗುವುದು.
ಜಪ್ತಿ ಮಾಡಿದ ವಾಹನಗಳಲ್ಲಿ ಸಾವಯವ ಕೃಷಿ: ಮೊದಲ ಕಟಾವಿನ ಖುಷಿಯಲ್ಲಿ ಪೊಲೀಸರು!

ಮಾಜಿ ಸಚಿವ ರಘುವಂಶ್ ಪ್ರಸಾದ್ ಸಿಂಗ್ ನಿಧನ: ಆರ್​ಜೆಡಿ ಪಕ್ಷದಿಂದ ಹೊರಬಂದ ಬೆನ್ನಲ್ಲೇ ಘಟನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 15 =
Remember me
