ರಾಂಚಿ:ಬಹುಕೋಟಿ ಮೇವು ಹಗರಣದಲ್ಲಿ ಜೈಲುಪಾಲಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ‌ ಯಾದವ್‌ ಅವರ ಜಾಮೀನು ಅರ್ಜಿಯನ್ನು ಜಾರ್ಖಂಡ್ ಹೈಕೋರ್ಟ್‌ ಪುನಃ ಮುಂದೂಡಿದೆ.
ಜಾಮೀನು ಕೋರಿ ಲಾಲು ಪ್ರಸಾದ್‌ ಸಲ್ಲಿಸಿರುವ ಅರ್ಜಿಗೆ ಸಿಬಿಐ ಆಕ್ಷೇಪಣೆ ಸಲ್ಲಿಸಿದ್ದು, ಅದಕ್ಕೆ ಉತ್ತರಿಸಲು ಆರು ವಾರಗಳ ಕಾಲಾವಕಾಶ ಬೇಕು ಎಂದು ಲಾಲು ಪರ ವಕೀಲರು ಕೋರಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಜನವರಿ 22ಕ್ಕೆ ಕೋರ್ಟ್​ ಮುಂದೂಡಿದೆ.
ಲಾಲು ವಿರುದ್ಧ ಎರಡು ಪ್ರಮುಖ ಕೇಸ್‌ಗಳು ದಾಖಲಾಗಿವೆ. ಅವುಗಳೆಂದರೆ ಚಾಯಿಬಾಸಾ ಹಾಗೂ ದುಮ್ಕಾ ಖಜಾನೆ ಅವ್ಯವಹಾರಗಳ ಕೇಸ್‌. ಕಳೆದ ತಿಂಗಳು ಕೋರ್ಟ್‌ ಚಾಯಿಬಾಸಾ ಅವ್ಯವಹಾರದ ಕೇಸ್‌ನಲ್ಲಿ ಜಾಮೀನು ನೀಡಿತ್ತು. ಆದರೆ ದುಮ್ಕಾ ಖಜಾನೆ ಅವ್ಯವಹಾರ ಪ್ರಕರಣ ಇನ್ನೂ ಇತ್ಯರ್ಥಕ್ಕೆ ಬಾಕಿ ಇರುವ ಹಿನ್ನೆಲೆಯಲ್ಲಿ ಹಾಗೂ ಅವರಿಗೆ ಈ ಕೇಸ್‌ನಲ್ಲಿ ಇನ್ನೂ ಜಾಮೀನು ಸಿಗದ ಕಾರಣ ಜೈಲಿನಲ್ಲಿಯೇ ಇದ್ದಾರೆ.
1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ 33.67 ಕೋಟಿ ರೂ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಸೇರಿದಂತೆ ಒಟ್ಟು 16 ಮಂದಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು. ಆ ಅವಧಿಯಲ್ಲಿ ಲಾಲು ಅವರೇ ಬಿಹಾರದ ಮುಖ್ಯಮುಂತ್ರಿ ಆಗಿದ್ದರು.
ಇನ್ನು ಇವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ದುಮ್ಕಾ ಖಜಾನೆಯಲ್ಲಿ ನಡೆದ 3.13 ಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಹಗರಣದಲ್ಲಿಯೂ ಇವರ ಭಾಗಿಯಾಗಿರುವುದು ಸಾಬೀತಾಗಿದ್ದು ಅದರಲ್ಲಿಯೂ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದರ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಒಟ್ಟಾರೆಯಾಗಿ ಇವರಿಗೆ 14 ವರ್ಷದ ಜೈಲುಶಿಕ್ಷೆಯಾಗಿದೆ.
72 ವರ್ಷ ವಯಸ್ಸಿನ ಲಾಲು ಅವರು ರಾಂಚಿಯಲ್ಲಿರುವ ರಾಜೇಂದ್ರ ಇನ್‌ಸ್ಟಿಟ್ಯೂಟ್‌ ಆಫ್‌ ಮೆಡಿಕಲ್‌ ಸೈನ್ಸ್‌ (ರಿಮ್ಸ್‌) ಆಸ್ಪತ್ರೆಯಲ್ಲಿ ಹಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.
30 ವರ್ಷ ಮಗನ ಆ ಒಂದು ಮಾತಿಗಾಗಿ ಕಾದಿದ್ದ ತಾಯಿ ಆತ ‘ಅಮ್ಮಾ’ ಎಂದಾಗ ಶವವಾಗಿದ್ದಳು!

ಎಸ್​ಎಸ್​ಎಲ್​ಸಿಯಿಂದ ಬಿಇ ಪದವೀಧರರವರೆಗೆ ಎಚ್‍ಎಲ್‍ಎಲ್​ನಲ್ಲಿ ಉದ್ಯೋಗಾವಕಾಶ

ಸನ್ನಿ ಲಿಯೋನ್​, ಇಮ್ರಾನ್​ ಹಶ್ಮಿ ನನ್ನ ಅಮ್ಮ-ಅಪ್ಪ; ಹಾಲ್​ ಟಿಕೆಟ್​ನಲ್ಲಿ ಬರೆದ ವಿದ್ಯಾರ್ಥಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:six − 6 =
Remember me
