ಪಾಟ್ನಾ (ಬಿಹಾರ):ಭ್ರಷ್ಟಾಚಾರ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳದ (ಆರ್​ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್​ಗೆ ಸಂಬಂಧಿಸಿದ 15 ಸ್ಥಳಗಳ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಳಿ ಮಾಡಿದ್ದು, ಶೋಧ ಕಾರ್ಯ ನಡೆಯುತ್ತಿದೆ.
ಈ ಮೂಲಕ ಮೇವು ಹಗರಣದಲ್ಲಿ ಜಾಮೀನು ಪಡೆದ ಕೆಲವೇ ವಾರಗಳಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಸಿಬಿಐ ಮತ್ತೊಂದು ಆಘಾತ ನೀಡಿದೆ. ಲಾಲೂ ಅವರು 2004 ರಿಂದ 2009ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ನಡೆದಿದೆ ಎನ್ನಲಾದ ಅಕ್ರಮ ನೇಮಕಾತಿಯ ಆರೋಪಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಹೊಸದಾಗಿ ಭ್ರಷ್ಟಾಚಾರ ಪ್ರಕರಣ ದಾಖಲು ಮಾಡಲಾಗಿದೆ. ಇದರಲ್ಲಿ ಉದ್ಯೋಗ ನೀಡುವುದಾಗಿ ಭೂಮಿ ಅಥವಾ ನಿವೇಶನಗಳನ್ನು ತೆಗೆದುಕೊಳ್ಳಲಾಗಿದೆ ಎಂಬುದೂ ಸೇರಿದ್ದು ಲಾಲು ಮತ್ತು ಮಗಳ ವಿರುದ್ಧ ಹೊಸ ಪ್ರಕರಣ ದಾಖಲಾಗಿದೆ.
139 ಕೋಟಿ ರೂ ಮೊತ್ತದ ದೊರಂಡಾ ಖಜಾನೆ ಹಗರಣ ಪ್ರಕರಣದಲ್ಲಿ ಜಾರ್ಖಂಡ್ ಹೈಕೋರ್ಟ್ ಜಾಮೀನು ನೀಡಿದ ಬಳಿಕ 73 ವರ್ಷದ ಲಾಲು ಅವರು ಕಳೆದ ತಿಂಗಳು ಜೈಲಿನಿಂದ ಬಿಡುಗಡೆಯಾಗಿದ್ದರು. ಈ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯವು ಫೆಬ್ರವರಿಯಲ್ಲಿ 5 ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಜತೆಗೆ 60 ಲಕ್ಷ ರೂ ದಂಡ ಕೂಡ ವಿಧಿಸಲಾಗಿತ್ತು. ಈ ಖಜಾನೆ ಹಗರಣ ಪ್ರಕರಣವು ಲಾಲೂ ಅವರನ್ನು ಶಿಕ್ಷೆಗೆ ಗುರಿಪಡಿಸಿದ ಐದನೇ ಮೇವು ಹಗರಣಕ್ಕೆ ಸಂಬಂಧಿಸಿದ್ದಾಗಿತ್ತು.
ಇದರ ಬೆನ್ನಲ್ಲೇ ಇದೀಗ ಈ ಶಾಕ್​ ನೀಡಲಾಗಿದೆ. ಲಾಲೂ ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿ ಮತ್ತು ಮಗಳು ಮಿಸಾಗೆ ಸಂಬಂಧಿಸಿದ ಸ್ಥಳಗಳೂ ಸೇರಿದಂತೆ ಬಿಹಾರ ಮತ್ತು ದೆಹಲಿಯ ಹಲವು ಸ್ಥಳಗಳಲ್ಲಿ ತನಿಖಾಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಲಾಲೂ ಅವರು ದೆಹಲಿಯಲ್ಲಿದ್ದು, ಅವರ ಮಗ ಹಾಗೂ ಪಕ್ಷದ ನಾಯಕ ತೇಜಸ್ವಿ ಯಾದವ್ ಸಹ ಬೇರೆ ಊರಿನಲ್ಲಿದ್ದಾರೆ. ಅಧಿಕಾರದಲ್ಲಿ ಇರುವವರು ಲಾಲೂ ಯಾದವ್ ಮತ್ತು ತೇಜಸ್ವಿ ಯಾದವ್ ಅವರನ್ನು ಗುರಿ ಮಾಡುತ್ತಿದ್ದಾರೆ. ಏಕೆಂದರೆ ಅವರಿಗೆ ಅವರ ಜನಪ್ರಿಯತೆಯ ಅರಿವು ಇದೆ ಎಂದು ಆರ್‌ಜೆಡಿ ಶಾಸಕ ಡಾ. ಮುಕೇಶ್ ರೋಷನ್ ಆರೋಪಿಸಿದ್ದಾರೆ.
ಲೈಂಗಿಕ ಸಂಪರ್ಕದಿಂದಲೂ ಹರಡುತ್ತವೆ ಮಹಾಮಾರಿ ಮಂಕಿ ಪಾಕ್ಸ್‌: ಆತಂಕಕಾರಿ ವರದಿ ಬಿಚ್ಚಿಟ್ಟ ತಜ್ಞರು
ಕೆಜಿಎಫ್-2 ವೀಕ್ಷಣೆ ವೇಳೆ ಶೂಟ್‌ಔಟ್‌: ಹಾವೇರಿಯಲ್ಲಿ ನಡೆದ ಭಯಾನಕ ಘಟನೆಯ ಆರೋಪಿ ಕೊನೆಗೂ ಅರೆಸ್ಟ್‌
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × four =
Remember me
