ನವದೆಹಲಿ:ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಬುಧವಾರ (ಜುಲೈ 6) ಮಧ್ಯರಾತ್ರಿ ಪಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಗೆ ಸ್ಥಳಾಂತರಿಸಲಾಗಿದೆ. ದೆಹಲಿಯ ಏಮ್ಸ್‌ನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಲಾಲೂ ಪ್ರಸಾದ್ ಯಾದವ್ ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಎರಡು ದಿನಗಳ ಹಿಂದೆ ಬಲ ಭುಜದ ಮೂಳೆ ಮುರಿದುಕೊಂಡಿದ್ದಾರೆ. ಅವರನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ಕರೆತರಲಾಗಿತ್ತು. ಅವರನ್ನು ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಭುಜದ ಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿತ್ತು.
ವಯೋಸಹಜ, ಹಲವು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಇವರು ಮೂತ್ರಪಿಂಡ ಸಮಸ್ಯೆಯ ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ಅವಘಡ ಸಂಭವಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅನೇಕ ಅನಾರೋಗ್ಯ ಸಮಸ್ಯೆಯ ನಡುವೆ ಮೂರು ಸ್ಥಳಗಳಲ್ಲಿ ಮುರಿತ ಕಂಡು ಬಂದ ಹಿನ್ನೆಲೆಯಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ.
ಯಾದವ್ ಕುಟುಂಬದ ಮೂಲಗಳ ಪ್ರಕಾರ ಲಾಲೂ ಪ್ರಸಾದ್ ಯಾದವ್ ಶ್ವಾಸಕೋಶದಲ್ಲಿ ನೀರು ತುಂಬಿದೆ. ಇದರಿಂದ ಅವರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಮೂತ್ರಪಿಂಡದ ಕಸಿ ಬಗ್ಗೆಯೂ ಚರ್ಚಿಸಲಾಗುತ್ತಿದೆ. ಅವರು ತುಸು ಚೇತರಿಸಿಕೊಂಡ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಪುರಕ್ಕೆ ಕರೆದೊಯ್ಯಲು ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.
ಲಾಲೂ ಪ್ರಸಾದ್ ಯಾದವ್ ದೆಹಲಿ ತಲುಪಿದ ನಂತರ ಅವರ ಪುತ್ರ ತೇಜಸ್ವಿ ಯಾದವ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಮೆಟ್ಟಿಲುಗಳಿಂದ ಬಿದ್ದ ಕಾರಣ ಅವರ ದೇಹದ ಮೂರು ಸ್ಥಳಗಳಲ್ಲಿ ಮುರಿತವಾಗಿದೆ. ಇದರಿಂದ ಅವರು ಚಲಿಸಲು ಸಾಧ್ಯವಾಗುತ್ತಿಲ್ಲ. ಏಮ್ಸ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪತ್ನಿಯರ ಎಕ್ಸ್​ಚೇಂಜ್: ಸ್ನೇಹಿತರ ಜತೆ ಮಲಗಲು ಹೆಂಡ್ತಿಗೆ ಟಾರ್ಚರ್​- ಪೊಲೀಸರ ಮುಂದೆ ಕಣ್ಣೀರಿಟ್ಟ ಮಹಿಳೆ
ಅಮೆರಿಕದ ಫ್ಯಾಷನ್​ ಷೋಗೆ ಬೆಂಗಳೂರಿನ ಡೌನ್ ಸಿಂಡ್ರೋಮ್ ಯುವತಿ! ಭಾರತದ ಇತಿಹಾಸದಲ್ಲಿ ಇದೇ ಮೊದಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 4 =
Remember me
