ಚಂಡೀಗಢ:ಇತ್ತೀಚೆಗಷ್ಟೇ ದೆಹಲಿ ಸರ್ಕಾರ ಮದ್ಯಪಾನಿಗಳ ವಯಸ್ಸನ್ನು 25 ವರ್ಷದಿಂದ 21 ವರ್ಷಕ್ಕೆ ಏರಿಕೆ ಇಳಿಕೆ ಮಾಡಿತ್ತು. ಬಹುತೇಕ ಯುವಕರು ಕದ್ದುಮುಚ್ಚಿ ಮದ್ಯ ಸೇವನೆ ಮಾಡುವುದು ನಡೆದೇ ಇದ್ದರೂ ಈಗ ಕಾನೂನುಬದ್ಧವಾಗಿ ದೆಹಲಿಯ 21 ವರ್ಷ ಮೇಲ್ಪಟ್ಟ ಯುವಕರು ಮದ್ಯಸೇವನೆ ಮಾಡಬಹುದಾಗಿತ್ತು. ಇದೇ ಹೆಜ್ಜೆಯನ್ನೀಗ ಚಂಡೀಗಢ ಸರ್ಕಾರವೂ ಇಟ್ಟಿದೆ.ಚಳಿಗಾಲದ ಅಧಿವೇಶನದಲ್ಲಿ ಹರಿಯಾಣ ಅಬಕಾರಿ (ತಿದ್ದುಪಡಿ) ಮಸೂದೆ- 2021 ತರಲಾಗಿದ್ದು, ರಾಜ್ಯದಲ್ಲಿ ಮದ್ಯ ಸೇವನೆ ಮತ್ತು ಅದರ ಖರೀದಿ, ಮಾರಾಟದ ಕಾನೂನುಬದ್ಧ ವಯಸ್ಸನ್ನು 25ರಿಂದ 21ಕ್ಕೆ ಇಳಿಸಿದೆ. ಅಬಕಾರಿ ಖಾತೆಯನ್ನೂ ಹೊಂದಿರುವ ಉಪಮುಖ್ಯಮಂತ್ರಿ ದುಷ್ಯಂತ್‌ ಚೌತಾಲ್‌ ಅವರು ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಿದರು.ಹಾಲಿ, ಹರಿಯಾಣದಲ್ಲಿ 25 ವರ್ಷಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗೆ ಮದ್ಯ ಖರೀದಿಸಲು ಅಥವಾ ಮಾರಾಟ ಮಾಡಲು ಅವಕಾಶವಿರಲಿಲ್ಲ. ಈ ಕಾಯ್ದೆಯ ತಿದ್ದುಪಡಿಯಿಂದಾಗಿ 21 ವರ್ಷ ಮೇಲ್ಪಟ್ಟವರು ಮದ್ಯ ಖರೀದಿಸಲು, ಮಾರಾಟ ಮಾಡಲು ಮತ್ತು ಸೇವನೆಗೆ ಅವಕಾಶ ಕಲ್ಪಿಸಲಾಗಿದೆ.ಜನರು ಈಗ ಹೆಚ್ಚು ವಿದ್ಯಾವಂತರಾಗಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕುಡಿಯುವ ವಿಚಾರದಲ್ಲೂ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಈ ಮಸೂದೆ ಕಾನೂನು ರೂಪ ಪಡೆದ ಮೇಲೆ ಸಾಮಾಜಿಕ, ಆರ್ಥಿಕ ಪರಿಸ್ಥಿತಿಯಲ್ಲಿ ಬದಲಾವಣೆ ಆಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.ಒಂದು ವೇಳೆ ಇದಕ್ಕಿಂತ ಕಡಿಮೆ ವಯಸ್ಸಿನ ವ್ಯಕ್ತಿಗಳು ಮದ್ಯಸೇವನೆ, ಮಾರಾಟ, ಖರೀದಿಯಲ್ಲಿ ಪಾಲ್ಗೊಂಡರೆ ಜೈಲು ಅಥವಾ 50 ಸಾವಿರ ರೂಪಾಯಿ ದಂಡ ವಿಧಿಸಬಹುದಾಗಿದೆ.
ವಿಜಯಪುರ-ಬಾಗಲಕೋಟೆ ಹಾಲು ಒಕ್ಕೂಟದಿಂದ 39 ಹುದ್ದೆಗಳಿಗೆ ಆಹ್ವಾನ: ಲಕ್ಷ ರೂ.ವರೆಗೆ ಸಂಬಳ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × 5 =
Remember me
