ಬೆಂಗಳೂರು:ಅನಾರೋಗ್ಯ ಕಾರಣದಿಂದ ಒಂದು ವೇಳೆ ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಲು ಸಾಧ್ಯವಾಗದೇ ಹೋದರೆ, ಎಐಸಿಸಿ ಅಧ್ಯಕ್ಷ ಸ್ಥಾನವನ್ನು ರಾಹುಲ್ ಗಾಂಧಿಯವರೇ ವಹಿಸಿಕೊಳ್ಳಲಿ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸೋನಿಯಾ ಗಾಂಧಿಗೆ ಮನವಿ ಮಾಡಿಕೊಂಡಿದ್ದಾರೆ.
ಈ ಕುರಿತು ಪತ್ರ ಬರೆದಿರುವ ಸಿದ್ದರಾಮಯ್ಯನವರು, ಪಕ್ಷ ಸಂಕಷ್ಟಕ್ಕೆ ಸಿಲುಕಿಕೊಂಡಿರುವುದು ಇದೇ ಮೊದಲೇನಲ್ಲಾ. ಪ್ರತಿ ಬಾರಿ ಪಕ್ಷ ಇಂತಹ ಸನ್ನಿವೇಶಗಳನ್ನು ಎದುರಿಸಿ ನಿಂತು ಮೀರಿ ಬೆಳೆದಿದೆ. ಗಾಂಧಿ ಕುಟುಂಬ ಇಂತಹ ಸಂಕಷ್ಟದ ಅವಧಿಯಲ್ಲಿ ಪಕ್ಷವನ್ನು ಮುನ್ನಡೆಸಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಈ ಮೂಲಕ, ಸಿದ್ದರಾಮಯ್ಯನವರು ಸೋನಿಯಾ ಗಾಂಧಿಗೆ ಪತ್ರವನ್ನು ಬರೆಯುವ ಮೂಲಕ ಗಾಂಧಿ ಕುಟುಂಬದ ಬೆನ್ನಿಗೆ ನಿಂತಿದ್ದಾರೆ.
My letter to Smt. Sonia Gandhi urging her to continue as the President of@INCIndiaor convince Shri.@RahulGandhito take up the position.
I am convinced that Gandhi family can lead the party to success.pic.twitter.com/YqSpaMMFVF
— Siddaramaiah (@siddaramaiah)August 24, 2020

ಪತ್ರದಲ್ಲಿ ಇರುವುದು ಇಷ್ಟು…1977 – 98 ರ ಪರಿಸ್ಥಿತಿ ಮತ್ತೊಮ್ಮೆ ಕಾಂಗ್ರೆಸ್‌ಗೆ ಎದುರಾಗಿದೆ. ಇಡೀ ದೇಶವೇ ಸಂಕಷ್ಟದಲ್ಲಿದೆ. ದೇಶದ ಅಘೋಷಿತ ತುರ್ತುಪರಿಸ್ಥಿತಿಯಲ್ಲಿದೆ. ಇಂದಿರಾಗಾಂಧಿ 1977 ರಲ್ಲಿ ಸೋತಾಗ  ಗಾಂಧಿ ಕುಟುಂಬವನ್ನು ಗುರಿ ಮಾಡಲಾಗಿತ್ತು. ಆದರೆ ಅದನ್ನು ಸವಾಲಾಗಿ ಸ್ವೀಕರಿಸಿದ ಇಂಧಿರಾಗಾಂಧಿ ಪಕ್ಷವನ್ನು ಮತ್ತೆ ಸಂಘಟಿಸಿ ಅಧಿಕಾರಕ್ಕೆ ತರುವಲ್ಲಿ ಸಫಲರಾಗಿದ್ದೀರಿ.
ರಾಜೀವ್ ಗಾಂಧಿಯ ಹತ್ಯೆಯ ಬಳಿಕ ಕಾಂಗ್ರೆಸ್‌ನಲ್ಲಿ ನಾಯಕತ್ವದ ಪ್ರಶ್ನೆ ಎದುರಾಗಿತ್ತು.  ಅಂತಹ ಸಂಕಷ್ಟದ ಸಂದರ್ಭದಲ್ಲಿ ಪಕ್ಷದ ನಾಯಕತ್ವ ವಹಿಸಿಕೊಂಡು ನೀವು ಜವಾಬ್ದಾರಿ ನಿಭಾಯಿಸಿದ್ದೀರಿ. 1998 ರಿಂದ 2004 ರ ವರೆಗೆ ಪಕ್ಷವನ್ನು ಉತ್ತಮವಾಗಿ ನಿಭಾಯಿಸಿದ್ದೀರಿ.
2004ರಲ್ಲಿ ಪಕ್ಷ ಅಧಿಕಾರಕ್ಕೆ ಬಂದಾಗ ಅವಕಾಶ ಇದ್ದರೂ ಪ್ರಧಾನಿ ಹುದ್ದೆಯನ್ನು ನಿರಾಕರಿಸಿದ್ದೀರಿ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಆಡಳಿತ ಪಕ್ಷವನ್ನು ಎದುರಿಸಲು ನಾವು ಸಮರ್ಥವಾಗಿರಬೇಕು. ಪಕ್ಷದಲ್ಲಿ ಒಗ್ಗಟ್ಟು ಇರಬೇಕು. ಇದು ಗಾಂಧಿ ಕುಟುಂಬ ಪಕ್ಷವನ್ನು ಮುನ್ನಡೆಸಿದಾಗ ಮಾತ್ರ ಸಾಧ್ಯವಾಗುತ್ತದೆ.
ಈ ನಿಟ್ಟಿನಲ್ಲಿ ಪಕ್ಷದ ಅಧ್ಯಕ್ಷೆ ಸ್ಥಾನದಲ್ಲಿ ನೀವೇ ಮುಂದುವರಿಯಬೇಕು. ಒಂದು ವೇಳೆ ಅನಾರೋಗ್ಯ ಕಾರಣಕ್ಕಾಗಿ ಇದು ಸಾಧ್ಯವಿಲ್ಲ ಅಂದರೆ ರಾಹುಲ್ ಗಾಂಧಿ ಈ ಜಾವಾಬ್ದಾರಿಯನ್ನು ಹೊರಬೇಕು ಎಂದು ಸಿದ್ದರಾಮಯ್ಯ ಪತ್ರದ ಮೂಲಕ ಆಗ್ರಹಿಸಿದ್ದಾರೆ.
ಟಿಕೆಟ್‌ ಇಲ್ಲದೇ ಪ್ರಯಾಣಿಸಿ ರೈಲ್ವೆ ಇಲಾಖೆಗೆ ಲಾಭ ತಂದುಕೊಡ್ತಿರೋರಿವರು!

ಫ್ರಿಜ್‌ ಟ್ರೇ ಬಳಸಿ ಆನ್‌ಲೈನ್‌ ಕ್ಲಾಸ್‌: ಶಿಕ್ಷಕಿಯ ಪ್ಲ್ಯಾನ್‌ಗೆ ಅಪಾರ ಮೆಚ್ಚುಗೆ

ದಫನ್‌ ಆಗಿದ್ದವ ರಾತ್ರಿ ಹೆಂಡತಿಗೆ ಪ್ರತ್ಯಕ್ಷನಾಗಿ ನಾನೇ ನಿನ್ನ ಗಂಡ ಎಂದ!

ಸರ್ಕಾರಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಪತ್ನಿ ಡೆಲಿವರಿ: ಶ್ಲಾಘನೆಗಳ ಮಹಾಪೂರ

ಎಟಿಎಂ ಹಣ ಎಗರಿಸಿದ ಖದೀಮರು: ನಡೆದಾಡೋ ಸ್ಟೈಲ್‌ನಲ್ಲಿ ಸಿಕ್ಕಿಬಿದ್ದದ್ದೇ ರೋಚಕ…

ಹೋಟೆಲ್‌ನಲ್ಲಿ ರಾತ್ರಿ ಕಳೆದ ಪ್ರೇಮಿಗಳು ಮಾರನೆಯ ದಿನ ಶವವಾದರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × two =
Remember me
