ಲಖನೌ:ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಹತ್ಯೆ ಮಾಡುವುದಾಗಿ ಟ್ವಿಟರ್‌ನಲ್ಲಿ ವ್ಯಕ್ತಿಯೊಬ್ಬ ಬರೆದುಕೊಂಡಿದ್ದಾನೆ. ಇಬ್ಬರನ್ನೂ ಬಾಂಬ್ ಸ್ಫೋಟಿಸಿ ಕೊಲೆ ಮಾಡುವುದಾಗಿ ಟ್ವಿಟರ್‌ನಲ್ಲಿ ಆತ ಬರೆದುಕೊಂಡಿದ್ದಾರೆ.
ಈ ಬಗ್ಗೆ ಟ್ವಿಟರ್‌ ಬಳಕೆದಾರರೊಬ್ಬರು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ಪ್ರಮೋದ್ ಕುಮಾರ್ ತಿವಾರಿ, ಟ್ವಿಟರ್‌ನಲ್ಲಿ ಪ್ರಧಾನಿ ಮತ್ತು ಮುಖ್ಯಮಂತ್ರಿಯವರಿಗೆ ಬೆದರಿಕೆ ಹಾಕಿರುವ ಬಗ್ಗೆ ನಮ್ಮ ಸಹಾಯವಾಣಿಗೆ ಯಾರೋ ಒಬ್ಬರು ಕರೆ ಮಾಡಿ ಹೇಳಿದ್ದಾರೆ. ಆಗ ವಿಷಯ ತಿಳಿದಿದೆ ಎಂದಿದ್ದಾರೆ.
ಈ ಬಗ್ಗೆ ತನಿಖೆ ಶುರು ಮಾಡಿದ್ದೇವೆ. ಇದು ಕಿಡಿಗೇಡಿಗಳ ಕೃತ್ಯ. ಬೇರೆ ಹೆಸರು ನೀಡಿ ಖಾತೆ ತೆರೆಯಲಾಗಿದೆ. ಆದರೆ ಇದಾಗಲೇ ತನಿಖೆ ಶುರು ಮಾಡಿದ್ದೇವೆ. ಟ್ವಿಟರ್‌ ಸಂಸ್ಥೆಗೆ ಈ ಬಗ್ಗೆ ಮಾಹಿತಿ ನೀಡಲಾಗಿದೆ. ಅಲ್ಲಿಂದ ಶೀಘ್ರದಲ್ಲಿ ಆರೋಪಿಯ ಗುರುತು ಪತ್ತೆಯಾಗಲಿದೆ. ಅಧಿಕೃತ ಹೆಸರನ್ನು ತನಿಖೆ ಮುಗಿಯುವವರೆಗೂ ಬಹಿರಂಗಪಡಿಸುವುದಿಲ್ಲ.
ಆ ಬಳಕೆದಾರ ಯಾರು ಎಂದು ಕಂಡುಹಿಡಿದು ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ತಿವಾರಿ ಮಾಹಿತಿ ನೀಡಿದ್ದಾರೆ. ಈ ಹಿಂದೆಯೂ ಇದೇ ರೀತಿಯ ಬೆದರಿಕೆ ಹಾಕಲಾಗಿತ್ತು. ಬೆದರಿಕೆ ಜತೆಗೆ ಕೆಲವೊಂದು ಆಕ್ಷೇಪಾರ್ಹ ಕಾಮೆಂಟ್‌ಗಳನ್ನೂ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದಿದ್ದಾರೆ.
ಪುನೀತ್‌ ಹೆಸರಲ್ಲಿ ಫಿಲ್ಮ್‌ ಛೇಂಬರ್‌ನಿಂದ ಹಣ ವಸೂಲಿ ಕಾರ್ಯ? ಖಾಸಗಿ ಅಕೌಂಟ್‌ಗೆ ಹಣ ವರ್ಗ? ಗಂಭೀರ ಆರೋಪ

ಲಂಚಕ್ಕೆ ಬೇಡಿಕೆ ಇಟ್ಟು ಅಮಾನತುಗೊಂಡ ಹೆಡ್‌ ಕಾನ್‌ಸ್ಟೆಬಲ್‌: ಆಡಿಯೋದಿಂದ ಕೃತ್ಯ ಬಹಿರಂಗ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen − 6 =
Remember me
