ರಾಂಚಿ:ಹಿಂದೂ- ಮುಸ್ಲಿಂ ನಡುವೆ ಅಲ್ಲಲ್ಲಿ ಆಗಾಗ್ಗೆ ಸಂಘರ್ಷಗಳು ನಡೆಯುತ್ತಿದ್ದರೂ, ಕೆಲವೆಡೆಗಳಲ್ಲಿ ಎರಡೂ ಕೋಮಿನ ನಡುವೆ ಸಾರಮಸ್ಯದ ಘಟನೆಗಳೂ ನಡೆಯುತ್ತಿರುತ್ತವೆ. ಅಂಥದ್ದೇ ಒಂದು ಘಟನೆ ನಡೆದಿರುವುದು ಜಾರ್ಖಂಡ್​ನಲ್ಲಿ. ಇಲ್ಲಿ ಮುಸ್ಲಿಂ ಉದ್ಯಮಿಯೊಬ್ಬರು 42 ಲಕ್ಷ ರೂ. ಖರ್ಚು ಮಾಡಿ ಶ್ರೀ ಕೃಷ್ಣನ ದೇವಸ್ಥಾನವನ್ನು ಕಟ್ಟಿಸಿದ್ದಾರೆ.
ಜಾರ್ಖಂಡ್‌ನ ದುಮ್ಕಾದ ಮಹೇಶ್‌ಬಥನ್‌ನಲ್ಲಿ ಉದ್ಯಮಿ ನೌಶಾದ್ ಶೇಖ್ 42 ಲಕ್ಷ ರೂಪಾಯಿ ವೆಚ್ಚದಲ್ಲಿ ಕೃಷ್ಣ ಮಂದಿರ ನಿರ್ಮಿಸಿದ್ದಾರೆ. ಶ್ರೀಕೃಷ್ಣನಿಂದ ಪ್ರಭಾವಿತರಾಗಿ ತಾವು ಇದನ್ನು ಕಟ್ಟಿಸಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಕೇಳಿದ ಪ್ರಶ್ನೆಗೆ ಉ್ತರಿಸಿದ ನೌಶಾದ್ ಶೇಖ್, ಎಲ್ಲರಿಗೂ ದೇವರು ಒಬ್ಬನೇ. ಆದ್ದರಿಂದ, ಒಬ್ಬೊಬ್ಬರು ದೇವಸ್ಥಾನ, ಮಸೀದಿ ಅಥವಾ ಚರ್ಚ್‌ನಲ್ಲಿ ಪೂಜಿಸುತ್ತಾರೆ. ನಾವು ಎಲ್ಲಿ ಪೂಜಿಸುತ್ತೇವೆ ಎಂಬುದು ಮುಖ್ಯವಲ್ಲ, ನಾವು ಎಷ್ಟು ಭಕ್ತಿಯನ್ನು ಹೊಂದಿದ್ದೇವೆ ಎಂಬುದು ಮುಖ್ಯ. ಕೃಷ್ಣ ಪರಮಾತ್ಮನೇ ನನ್ನ ಕನಸಿನಲ್ಲಿ ಬಂದು ತನಗಾಗಿ ದೇವಸ್ಥಾನವನ್ನು ನಿರ್ಮಿಸಲು ಪ್ರೇರೇಪಣೆ ನೀಡಿದ್ದಾನೆ. ನನಗೆ ಕೃಷ್ಣನಲ್ಲಿ ಭಕ್ತಿಯಿದೆ. ನಾನು ಶ್ರೀಕೃಷ್ಣನಿಂದ ಪ್ರಭಾವಿತನಾಗಿದ್ದೇನೆ’ ಎಂದಿದ್ದಾರೆ.
ಕಳೆದ ಸೋಮವಾರ ದೇವಸ್ಥಾನದ ‘ಪ್ರಾಣ-ಪ್ರತಿಷ್ಠೆ’ ನಡೆದಿದ್ದು, ಎಲ್ಲಾ ಸಮುದಾಯದ ಜನರು ಈ ದೇವಸ್ಥಾನಕ್ಕೆ ಆಗಮಿಸಿ, ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. 3 ವರ್ಷಗಳಲ್ಲಿ ದೇವಾಲಯದ ನಿರ್ಮಾಣವಾಗಿದೆ. ಹಿಂದೂ ಪದ್ಧತಿಯಂತೆ 150 ಬ್ರಾಹ್ಮಣರಿಂದ ‘ಪ್ರಾಣ-ಪ್ರತಿಷ್ಠೆ’ ನೆರವೇರಿಸಲಾಯಿತು.
ಮೆಸೇಂಜರ್‌, ವಾಟ್ಸ್‌ಆ್ಯಪ್‌ನಲ್ಲಿ ಕೆಂಪು ಹಾರ್ಟ್‌ ಇಮೋಜಿ ಕಳುಹಿಸಿದರೆ ಜೈಲು ಶಿಕ್ಷೆ- 20 ಲಕ್ಷ ರೂ. ದಂಡ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × four =
Remember me
