ಬಂಡಾ (ಉತ್ತರ ಪ್ರದೇಶ):ಈಗ ಎಲ್ಲೆಡೆ ಜಾತ್ರೆ, ತೇರುಗಳ ಸಂಭ್ರಮ. ಅದರಲ್ಲಿಯೂ ಮಕರ ಸಂಕ್ರಾಂತಿಯ ಆಸುಪಾಸು ಜಾತ್ರೆಗಳು ಭರ್ಜರಿಯಾಗಿ ನಡೆಯುತ್ತವೆ. ಅಂಥದ್ದೇ ಒಂದು ವಿಶೇಷ ಜಾತ್ರೆ ಇದೀಗ ಉತ್ತರ ಪ್ರದೇಶದಲ್ಲಿ ನಡೆಯುತ್ತಿದೆ. ಅಂದಹಾಗೆ ಇದು ಪ್ರೇಮಿಗಳ ಜಾತ್ರೆ!
ಸಂಕ್ರಾಂತಿಯ ಎರಡು ದಿನಗಳು ವಿಶೇಷವಾಗಿ ಈ ಜಾತ್ರೆ ನಡೆಯುತ್ತದೆ. ಉತ್ತರ ಪ್ರದೇಶದ ಬಂಡಾ ನಗರದ ಕೆನ್ ನದಿಯ ದಡದಲ್ಲಿರುವ ಭೂರಗಢ್ ಕೋಟೆಯಲ್ಲಿ ಈ ಜಾತ್ರೆ ಪ್ರತಿ ವರ್ಷ ನಡೆಯುತ್ತದೆ. ಇಲ್ಲಿ ನಟಾಬಲಿ ಬಾಬಾನ ದೇವಾಲಯ ಇದೆ. ಇದು ಪ್ರೇಮಿಗಳ ಕಾಮನೆಗಳನ್ನು ಈಡೇರಿಸುವ ದೇವತೆ ಎಂಬುದು ನಂಬಿಕೆ. ಆದ್ದರಿಂದ ದೂರ ದೂರದ ಊರಿಗಳಿಂದ ಜನರು ಅದರಲ್ಲಿಯೂ ಹೆಚ್ಚಾಗಿ ಪ್ರೇಮಿಗಳು ನಟಾಬಲಿ ಬಾಬಾಗೆ ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ.
ಭೂರಗಢ ಕೋಟೆಯ ಅಡಿ ನಿರ್ಮಿಸಲಾದ ನಟಾಬಲಿ ಬಾಬಾನ ವಿಶೇಷ ಎಂದರೆ ಇಲ್ಲಿ ಯಾವುದೇ ಹರಕೆ ಹೊತ್ತರೂ ಈಡೇರುತ್ತೆಯಂತೆ. ಪ್ರೇಮಿಗಳ ಬದುಕಿನಲ್ಲಿ ಏನಾದರೂ ಸಮಸ್ಯೆ ಬಂದರೆ ಈ ಜಾತ್ರೆಯ ಸಂದರ್ಭದಲ್ಲಿ ಹರಕೆ ಹೊತ್ತರೆ ಸಾಕು, ಎಲ್ಲವೂ ಈಡೇರುತ್ತದೆ. ಪ್ರೀತಿಯಲ್ಲಿ ಯಶಸ್ಸು ಸಿಗುತ್ತದೆ ಎಂಬ ಬಲವಾದ ನಂಬಿಕೆ ಇರುವ ಕಾರಣ, ಪ್ರೇಮಿಗಳು ಜಾತ್ರೆಯ ದಿನದಂದು ಇಲ್ಲಿಗೆ ಭೇಟಿ ನೀಡುತ್ತಾರೆ.
ಅಷ್ಟಕ್ಕೂ ಈ ಜಾತ್ರೆ ಇಂದು ನಿನ್ನೆಯದ್ದಲ್ಲ, ಬದಲಿಗೆ ಇದಕ್ಕೆ ಸುಮಾರು ಆರು ಶತಮಾನಗಳ ಇತಿಹಾಸವಿದೆ. ಇಲ್ಲಿಯ ಮಹೊಬಾ ಜಿಲ್ಲೆಯ ಸುಗೀರಾ ಎಂಬ ಊರಿನ ನಿವಾಸಿಯಾದ ಅರ್ಜುನ್ ಸಿಂಗ್ ಭುರಗಢ ಕೋಟೆಯ ರಾಜನಾಗಿದ್ದ. ಬಿರಾನ್ ಎಂಬ ನಾಟ್ ಜಾತಿಯ 21 ವರ್ಷದ ಯುವಕ ಇಲ್ಲಿ ಸೇವಕನಾಗಿದ್ದ. ಈ ಯುವಕನಿಗೆ ತಂತ್ರ – ಮಂತ್ರಗಳ ಬಗ್ಗೆ ಸಾಕಷ್ಟು ಅರಿವಿತ್ತು. ಆತ ರಾಜ ಅರ್ಜಿನ್‌ ಸಿಂಗ್‌ನ ಮಗಳನ್ನು ಪ್ರೀತಿಸಿದ್ದ.
ಈತನನ್ನು ಮದುವೆಯಾಗುವುದಾಗಿ ಅಪ್ಪನಿಗೆ ರಾಜನ ಮಗಳು ಹೇಳಿದಾಗ ರಾಜಾ ಅರ್ಜುನ್ ಸಿಂಗ್ ಒಂದು ಷರತ್ತು ಹಾಕಿದ. ಅದೇನೆಂದರೆ ಬಂಬೇಶ್ವರ ಪರ್ವತದಿಂದ ನದಿಯ ಸಮೀಪ ಇರುವ ಕೋಟೆಗೆ ನೂಲಿನ ದಾರದ ಹಗ್ಗವನ್ನು ಹತ್ತಿ ಕೋಟೆಗೆ ಬಂದರೆ ಮಗಳನ್ನು ಮದುವೆಯಾಗಬಹುದು ಎಂದು. ಅದಕ್ಕೆ ಒಪ್ಪಿದ ಬಿರಾನ್‌ ಪರ್ವತದಿಂದ ಹತ್ತಿಯ ಹಗ್ಗದ ಸಹಾಯದಿಂದ ನದಿಯನ್ನು ದಾಟಿ ಕೋಟೆ ತಲುಪಲು ಇನ್ನೇನು ಯಶಸ್ವಿಯಾಗುತ್ತಾನೆ ಎಂದಾಗಲೇ ಕುತಂತ್ರದಿಂದ ರಾಜ ಹಗ್ಗವನ್ನು ಕತ್ತರಿಸುತ್ತಾನೆ. ಬಿರಾನ್ ಬಿದ್ದು ಸಾಯುತ್ತಾನೆ. ಇದನ್ನು ಅರಗಿಸಿಕೊಳ್ಳಲಾಗದ ರಾಜನ ಮಗಳು ಕೋಟೆಯಿಂದ ಹಾರಿ ಪ್ರಾಣ ಬಿಡುತ್ತಾಳೆ. ಇದರಿಂದ ನೊಂದುಕೊಂಡ ರಾಜ ಈ ಪ್ರೇಮಿಗಳಿಗಾಗಿ ಒಟ್ಟಿಗೇ ಸಮಾಧಿ ನಿರ್ಮಿಸುತ್ತಾನೆ. ಅಲ್ಲಿಂದ ಪ್ರತಿ ವರ್ಷ ಸಂಕ್ರಾಂತಿಯ ಆಸುಪಾಸು ಇಲ್ಲಿ ಜಾತ್ರೆ ನಡೆದು ಪ್ರೇಮಿಗಳ ಬಯಕೆ ಈಡೇರಿಸಲಾಗುತ್ತದೆ ಎಂಬ ನಂಬಿಕೆ ಇದೆ.
ಫ್ರಿಜ್‌ನಲ್ಲಿ ಆಹಾರದ ಪಕ್ಕ ಲಸಿಕೆ! ಕಂದಮ್ಮಗಳ ಜೀವದ ಜತೆ ಆಟವಾಡಿದ್ರಾ ಬೆಳಗಾವಿ ಆಸ್ಪತ್ರೆ ಸಿಬ್ಬಂದಿ?

ವಿಚ್ಛೇದನದಿಂದ ಭಾರಿ ಸುದ್ದಿಮಾಡಿದ್ದ ಆಮೀರ್‌ ದಂಪತಿ ಮತ್ತೆ ಒಂದಾದ್ರು! ಕಾರಣ ಕೇಳಿ ‘ವಿಚಿತ್ರ’ ಎಂದ ನೆಟ್ಟಿಗರು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + seven =
Remember me
