ನವದೆಹಲಿ:ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಪ್ರತಿ ಸಿಲಿಂಡರ್​ಗೆ 135 ರೂಪಾಯಿ ಇಳಿಸಲಾಗಿದ್ದು, ದೆಹಲಿಯಲ್ಲಿ ಇದರ ಬೆಲೆ ಇದೀಗ 2,219 ರೂಪಾಯಿ ಆಗಿದೆ.
ಆದರೆ ಗೃಹ ಬಳಕೆ ಸಿಲಿಂಡರ್​ನಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಹಿಂದಿನ ದರದಲ್ಲೇ ಮಾರಾಟವಾಗುತ್ತಿದೆ. ಜೂ 1ರ ಬುಧವಾರ 19 ಕೆ.ಜಿಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯನ್ನು 135 ರೂ.ಗಳಷ್ಟು ಇಳಿಸಲಾಗಿದೆ. ಈ ಹಿಂದೆ 2,322 ರೂ.ಗಳಷ್ಟಿದ್ದ ಸಿಲಿಂಡರ್ ಈಗ 2,219 ರೂ. ಆಗಿದೆ. ಇದಕ್ಕೂ ಮುನ್ನ ಮೇ 1ರಂದು 19 ಕೆ.ಜಿ ಎಲ್‌ಪಿಜಿಯ ಬೆಲೆಯನ್ನು ಪ್ರತಿ ಸಿಲಿಂಡರ್‌ಗೆ 102.50 ರೂ ಹೆಚ್ಚಿಸಲಾಗಿತ್ತು. ಈಗ ಮುಂಬೈನಲ್ಲಿ ವಾಣಿಜ್ಯ ಎಲ್​ಪಿಜಿ ಸಿಲಿಂಡರ್​ ಬೆಲೆ 2171.50, ಚೆನ್ನೈನಲ್ಲಿ 2,373 ರೂ.ಗೆ ಮಾರಾಟವಾಗುತ್ತಿದೆ.
ಮೇ 19ರಂದು ಗೃಹ ಬಳಕೆ ಹಾಗೂ ಕಮರ್ಷಿಯಲ್ ಎರಡೂ ಎಲ್ ಪಿಜಿ ಸಿಲಿಂಡರ್​ಗಳ ಬೆಲೆಯಲ್ಲಿ ಹೆಚ್ಚಳ ಮಾಡಲಾಗಿತ್ತು. 14 ಕೆಜಿ ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ದರವನ್ನು 3.50 ರೂ. ಹಾಗೂ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆಯನ್ನು 8ರೂ. ಏರಿಕೆ ಮಾಡಲಾಗಿತ್ತು. ಮೇ ತಿಂಗಳಲ್ಲಿ ಎರಡು ಬಾರಿ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ ಮಾಡಲಾಗಿತ್ತು. ಮೇ 7ರಂದು ಗೃಹ ಬಳಕೆ ಎಲ್ ಪಿಜಿ ಸಿಲಿಂಡರ್ ಬೆಲೆಯಲ್ಲಿ 50ರೂ. ಏರಿಕೆ ಮಾಡಲಾಗಿತ್ತು. ಇನ್ನು ಮೇ 1ರಂದು 19 ಕೆಜಿ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು ಪ್ರತಿ ಸಿಲಿಂಡರ್ ಗೆ 104 ರೂ.ಗಳಷ್ಟು ಹೆಚ್ಚಿಸಲಾಗಿತ್ತು.
ಶಾಪವಾದ ಮದುವೆ, ಅತ್ತೆ-ಗಂಡನ ಕಿರುಕುಳವೇ ನನಗೆ ಸ್ಫೂರ್ತಿ: ಯುಪಿಎಸ್​ಸಿ ಗೆದ್ದಾಕೆಯ ಮನದ ಮಾತು

ಯಶ್​ ಅಭಿಮಾನಿಗಳಿಗೆ ಭರ್ಜರಿ ಗುಡ್​ ನ್ಯೂಸ್​: ಕೆಜಿಎಫ್​- 2 ಇನ್ಮುಂದೆ ನೋಡ್ಬೋದು ಉಚಿತವಾಗಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − twelve =
Remember me
