ಮುಂಬೈ:ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಕೊಟ್ಟ ಶಾಕ್​ಗೆ ಮಹಾರಾಷ್ಟ್ರ ಸರ್ಕಾರ ಪತನದ ಅಂಚಿನಲ್ಲಿದೆ. ಸರ್ಕಾರದ ಪತನಕ್ಕೆ ಇನ್ನೇನು ಕ್ಷಣಗಣನೆಗೆ ಆರಂಭವಾಗಿದೆ ಎಂದೇ ಹೇಳಲಾಗುತ್ತಿದೆ. ಸುಮಾರು 13 ಶಾಸಕರನ್ನು ಕರೆದುಕೊಂಡು ಬಂಡಾಯ ಎದ್ದಿರುವ ಶಿಂಧೆಯಿಂದಾಗಿ ಇದೀಗ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ.
ಏಳು ಮಂದಿ ಸ್ವತಂತ್ರ ಶಾಸಕರು ಹಾಗೂ 33 ಶಿವಸೇನೆ ಶಾಸಕರು ಸೇರಿದಂತೆ ಮಹಾರಾಷ್ಟ್ರದ 40ಶಾಸಕರು ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂಧೆಯವರಿಗೆ ಬೆಂಬಲ ವ್ಯಕ್ತಪಡಿಸಿ ಪತ್ರಕ್ಕೆ ಸಹಿ ಹಾಕಿದ್ದು, ರಾಜ್ಯಪಾಲರ ಭೇಟಿಯಾಗಿ ವಿಶ್ವಾಸಮತ ಯಾಚನೆ ಮಾಡಲು ಸಿದ್ಧತೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಇಂದು ಬೆಳಿಗ್ಗೆ ಗುವಾಹಟಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿರುವ ಶಿಂಧೆ, 40 ಶಾಸಕರು ನನ್ನೊಂದಿಗೆ ಇದ್ದಾರೆ. ಇನ್ನೂ 10 ಶಾಸಕರು ಶೀಘ್ರದಲ್ಲೇ ನಮ್ಮನ್ನು ಸೇರಿಕೊಳ್ಳಲಿದ್ದಾರೆ. ನಾನು ಯಾರನ್ನೂ ಟೀಕಿಸುತ್ತಿಲ್ಲ. ದಿವಂಗತ ಬಾಳಾಸಾಹೇಬ್ ಠಾಕ್ರೆ ಸ್ಥಾಪಿಸಿದ್ದ ಸೇನಾವನ್ನು ಮುಂದುವರಿಸಲು ನಾವು ಉತ್ಸುಕರಾಗಿದ್ದೇವೆಂದು ಹೇಳಿದರು.
ಇದರ ನಡುವೆಯೇ ಇದೀಗ ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಅವರಿಗೆ ಕರೊನಾ ಪಾಸಿಟಿವ್​ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.
ಎಐಸಿಸಿ ವೀಕ್ಷಕ ಕಮಲ್​ನಾಥ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ರಾಜ್ಯದ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಇಂದು ಸಭೆ ನಡೆಯುತ್ತಲಿದೆ. ಸಭೆಗೂ ಮುನ್ನ ಠಾಕ್ರೆ ಅವರನ್ನು ಭೇಟಿಯಾಗಬೇಕಿತ್ತು. ಆದರೆ ಅವರಿಗೆ ಕರೊನಾ ಪಾಸಿಟಿವ್​ ಬಂದಿರುವುದು ತಿಳಿದುಬಂದಿದೆ ಎಂದು ಕಮಲ್​ನಾಥ್​ ಹೇಳಿದ್ದಾರೆ.
‘ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!

ಕ್ಷಣ ಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಿದೆ ‘ಮಹಾ’ ಡ್ರಾಮಾ: ಈ ಮಧ್ಯೆ ಗವರ್ನರ್​ಗೆ ಕರೊನಾ ಪಾಸಿಟಿವ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 16 =
Remember me
