ಮುಂಬೈ:ಮಹಾರಾಷ್ಟ್ರದಲ್ಲಿ ಏಕನಾಥ್​ ಶಿಂಧೆ ಸರ್ಕಾರ ರಚನೆಯಾಗಿ ವಾರ ಕಳೆದಿದೆ. ಬಿಜೆಪಿ ಜತೆ ಮೈತ್ರಿಮಾಡಿಕೊಂಡು ಈ ಸರ್ಕಾರದ ರಚನೆಯಾಗಿದೆ. ಇದೀಗ ಸಚಿವ ಸಂಪುಟದ ರಚನೆ ಕುರಿತು ಬಿರುಸಿನ ಮಾತುಕತೆ ನಡೆದಿದೆ.
ಮುಖ್ಯಮಂತ್ರಿ ಏಕನಾಥ್ ಶಿಂಧೆ 38 ಸಚಿವರ ಸಂಪುಟವನ್ನು ಹೊಂದುವ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಇದರಲ್ಲಿ ಬಿಜೆಪಿಯವರದ್ದೇ ಮೇಲುಗೈ ಎನ್ನಲಾಗಿದೆ. ಸಚಿವ ಸಂಪುಟದಲ್ಲಿ ಬಿಜೆಪಿಯ 25 ಹಾಗೂ ಶಿವಸೇನೆಯ 13 ಶಾಸಕರು ಸಚಿವ ಸ್ಥಾನ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಉಳಿದಂತೆ ಪಕ್ಷೇತರ ಶಾಸಕರು ಸಚಿವರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಮತ್ತು ಅವರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಹೊರತುಪಡಿಸಿ, ಸಂಪುಟದಲ್ಲಿ ಹೆಚ್ಚಿನ ಸಚಿವರು ಹೊಸಬರಾಗಿರಲಿದ್ದಾರೆ ಎನ್ನಲಾಗಿದೆ. ಮುಂದಿನ ಮಹಾರಾಷ್ಟ್ರ ಚುನಾವಣೆಗೆ (2024) ತಯಾರಿ ನಡೆಸುವ ಮುನ್ನ ಹೊಸ ಮುಖಗಳನ್ನು ಪರೀಕ್ಷಿಸಲು ಬಿಜೆಪಿ ಬಯಸಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಹಿಂದೆ ಆಡಳಿತ ನಡೆಸಿದ್ದ ಮಹಾ ವಿಕಾಸ್‌ ಅಘಾಡಿ ಸರ್ಕಾರ ಹಾಗೂ ಅದಕ್ಕೂ ಹಿಂದೆ ಇದ್ದ ಬಿಜೆಪಿ ಸರ್ಕಾರ ಕೂಡ ಸಂಪುಟ ರಚನೆಗಾಗಿ ವಿಶೇಷ ಫಾರ್ಮುಲಾ ಹೊಂದಿತ್ತು. ಶಿಂಧೆ ಸರ್ಕಾರ ಕೂಡ ಅದೇ ಫಾರ್ಮುಲಾದಲ್ಲಿ ಕೆಲಸ ಮಾಡಿದೆ. ಶಿಂಧೆಯ ಶಿವಸೇನೆ ಬಣದಲ್ಲಿ ಪ್ರತಿ ಮೂರು ಶಾಸಕರಿಗೆ ಒಂದು ಸಚಿವ ಸ್ಥಾನ ನೀಡುವ ನಿರ್ಧಾರ ಮಾಡಲಾಗಿದೆ. ಇನ್ನು ಬಿಜೆಪಿಯಲ್ಲಿ ಪ್ರತಿ ನಾಲ್ವರು ಶಾಸಕರಿಗೆ ಒಂದು ಸಚಿವ ಸ್ಥಾನವನ್ನು ನೀಡುವ ಯೋಜನೆ ರೂಪಿಸಲಾಗಿದೆ.
ಈ ನಡುವೆ, ಶಿವಸೇನೆಯ ಬಂಡಾಯ 16 ಶಾಸಕರ ಅನರ್ಹತೆ ಪ್ರಶ್ನೆ ಮಾಡಿ ಶಿವಸೇನೆ ಈಗಾಗಲೇ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ್ದು, ಅದರ ವಿಚಾರಣೆ ಜುಲೈ 11ರಂದು ನಡೆಯಲಿದೆ. ಹೀಗಾಗಿ, ಮಹಾರಾಷ್ಟ್ರ ಸಚಿವ ಸಂಪುಟ ರಚನೆಗೆ ಸದ್ಯ ತಡೆ ನೀಡಲಾಗಿದೆ. ಸುಪ್ರೀಂಕೋರ್ಟ್​ನಿಂದ ಆದೇಶ ಹೊರಬೀಳುತ್ತಿದ್ದಂತೆ ಶಾಸಕರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ.
2019ರಲ್ಲಿ ನಡೆದ ವಿಧಾನಸಭೆ ಚುನಾವಣೆ ನಂತರ ಶಿವಸೇನೆ+ಎನ್​​ಸಿಪಿ+ ಕಾಂಗ್ರೆಸ್​ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ್ದವು. ಆದರೆ, ಕಳೆದ ಕೆಲ ದಿನಗಳ ಹಿಂದೆ ಶಿವಸೇನೆಯ ಏಕನಾಥ್ ಶಿಂಧೆ 48 ಶಾಸಕರೊಂದಿಗೆ ಬಂಡಾಯ ಎದ್ದಿದ್ದರು. ಹೀಗಾಗಿ, ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಜತೆ ಸೇರಿ ಬಂಡಾಯ ಶಿವಸೇನೆ ಸರ್ಕಾರ ರಚನೆ ಮಾಡಿದೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − 2 =
Remember me
