ಮುಂಬೈ:ಮಹಾರಾಷ್ಟ್ರದಲ್ಲಿ ಉದ್ಧವ್​ ಠಾಕ್ರೆ ಸರ್ಕಾರ ಇನ್ನೇನು ಪತನವಾಗಲಿದೆ ಎಂದೇ ಎನ್ನಲಾಗುತ್ತಿದೆ. ಭಾರಿ ಕುತೂಹಲ ಹುಟ್ಟಿಸಿರುವ ಈ ರಾಜಕೀಯ ಆಟ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಇದಕ್ಕೆಲ್ಲಾ ಕಾರಣ ಶಿವಸೇನಾ ಮುಖಂಡ ಏಕನಾಥ್ ಶಿಂಧೆ ಬಂಡಾಯ ಎದ್ದಿರುವುದು.
ಇದೀಗ ಕುತೂಹಲ ಎನ್ನುವಂತೆ ರಾತ್ರೋರಾತ್ರಿ ಕಾಣೆಯಾಗಿದ್ದು ಶಿಂಧೆ ಜತೆಯಲ್ಲಿ ಕಾಣಿಸಿಕೊಂಡಿದ್ದ ಶಿವಸೇನೆ ಶಾಸಕ ನಿತಿನ್‌ ದೇಶ್‌ಮುಖ್‌ ಏಕಾಏಕಿ ಪ್ರತ್ಯಕ್ಷರಾಗಿದ್ದು, ಉದ್ಧವ್‌ ಠಾಕ್ರೆ ಬಳಿ ಬಂದಿದ್ದಾರೆ. ತಾವು ಠಾಕ್ರೆ ಪರ ಎಂದು ಹೇಳಿಕೊಂಡಿದ್ದಾರೆ.
ತಮ್ಮ ಪತಿಯನ್ನು ಅಪಹರಿಸಿಕೊಂಡು ಹೋಗಲಾಗಿದೆ ಎಂದು ದೇಶ್​ಮುಖ್​ ಅವರ ಪತ್ನಿ ಕೂಡ ಪೊಲೀಸರಲ್ಲಿ ದೂರು ನೀಡಿದ್ದರು. ಅದೇ ರೀತಿ ದೇಶ್​ಮುಖ್​ ಅವರೂ ಹೇಳಿಕೆ ನೀಡಿದ್ದು, ‘ನಾನು ಶಿಂಧೆ ಕ್ಯಾಂಪ್‌ನಿಂದ ತಪ್ಪಿಸಿಕೊಂಡು ಬಂದಿದ್ದೇನೆ. ನನ್ನನ್ನು ಕಿಡ್ನ್ಯಾಪ್‌ ಮಾಡಿಕೊಂಡು ಗುಜರಾತ್‌ನ ಸೂರತ್‌ಗೆ ಕರೆದುಕೊಡು ಹೋಗಿದ್ದರು’ ಎಂದಿದ್ದಾರೆ.
“ನಾನು ಮಧ್ಯರಾತ್ರಿ ಹೇಗೋ ತಪ್ಪಿಸಿಕೊಂಡು ಬಂದೆ. ನಸುಕಿನ 3 ಗಂಟೆ ವೇಳೆ ರಸ್ತೆ ಬದಿಗೆ ಬಂದು, ವಾಹನಕ್ಕಾಗಿ ಕಾಯುತ್ತಿದ್ದೆ. ಈ ಸಂದರ್ಭದಲ್ಲಿ ನೂರಾರು ಪೊಲೀಸರು ಸುತ್ತುವರಿದು ಆಸ್ಪತ್ರೆ ಸೇರಿಸಿದರು. ನನಗೆ ಹೃದಯಾಘಾತ ಆಗಿದೆ ನಾಟಕ ಮಾಡಿ ನನ್ನನ್ನು ಉಪಚರಿಸಿದಂತೆ ನಾಟಕ ಮಾಡಿದರು. ನನಗೆ ಏನೂ ಆರೋಗ್ಯ ಸಮಸ್ಯೆ ಇಲ್ಲದಿದ್ದರೂ ಅವರು ನನ್ನನ್ನು ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದರು’ ಎಂದು ದೇಶ್‌ಮುಖ್‌ ತಿಳಿಸಿದ್ದಾರೆ.
‘ಮಹಾ’ ಸರ್ಕಾರದ ಬಿಕ್ಕಟ್ಟಿನ ನಡುವೆಯೇ ಹಂಗಾಮಾ ಸೃಷ್ಟಿಸಿದ ಸಚಿವನ ‘ಪತ್ನಿ’: ಪರಪುರುಷನ ಜತೆ ಲಾಡ್ಜ್​ನಲ್ಲಿ ಅರೆಸ್ಟ್​!
‘ಮಹಾ’ ಸರ್ಕಾರವನ್ನೇ ಅಲ್ಲಾಡಿಸಿರೋ ಶಿಂಧೆಗೆ ಬಿಗ್​ ಶಾಕ್​: ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ವಜಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 + two =
Remember me
