ಲಖನೌ:ತಂದೆಯೊಬ್ಬ ತನ್ನ ಮಗಳ ರುಂಡ ಕತ್ತರಿಸಿರುವ ಭಯಾನಕ ಘಟನೆ ಉತ್ತರ ಪ್ರದೇಶದ ಹರದೋಯಿ ಜಿಲ್ಲೆಯ ಮಾಜ್ ಹಿಲಾದಲ್ಲಿ ನಡೆದಿದೆ.17 ವರ್ಷದ ಮಗಳು ಪ್ರೇಮಿಯ ಜತೆ ಇದ್ದುದನ್ನು ಕಂಡ ಸರ್ವೇಶ್ ಕುಮಾರ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಮಗಳ ರುಂಡವನ್ನು ಛೇದಿಸಿ ಅದರ ಸಹಿತವಾಗಿ ಪೊಲೀಸ್‌ ಠಾಣೆಗೆ ಬಂದು ಶರಣಾಗಿದ್ದಾನೆ!
ತರಕಾರಿ ಮಾರಾಟ ಮಾಡುವ ಸರ್ವೇಶ್ ಕುಮಾರ್ ಮಗಳು ಯುವಕನೊಂದಿಗೆ ಸಂಬಂಧ ಹೊಂದಿದ್ದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದ. ನಿನ್ನೆ ಸುಮಾರು ಮೂರು ಗಂಟೆಯ ಹೊತ್ತಿಗೆ ಮಗಳು ಪ್ರಿಯತಮನ ಜತೆಗೆ ಇರುವುದನ್ನು ಕಂಡು ಸಿಟ್ಟುಗೊಂಡಿದ್ದಾನೆ. ಇದರಿಂದ ಆಕ್ರೋಶಗೊಂಡ ಆತ ಹರಿತವಾದ ಚಾಕು ತಂದು ಮಗಳ ತಲೆ ಕತ್ತರಿಸಿದ್ದಾನೆ!
ಕತ್ತರಿಸಿದ ಮಗಳ ತಲೆಯೊಂದಿಗೆ ಎರಡು ಕಿಲೋಮೀಟರ್ ದೂರದ ಪೊಲೀಸ್ ಠಾಣೆಗೆ ನಡೆದುಕೊಂಡು ಹೋಗಿ ಪೊಲೀಸರಿಗೆ ಶರಣಾಗಿದ್ದಾನೆ. ಈತ ಹೀಗೆ ಹೋಗುತ್ತಿರುವುದನ್ನು ನೋಡಿದ ಜನ ಬೆಚ್ಚಿಬಿದ್ದಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮಗಳಿಗೆ ಈ ರೀತಿಯ ಸಂಬಂಧ ಇರುವುದನ್ನು ತಿಳಿದು ಸಿಟ್ಟಿನಿಂದ ಇಂಥದ್ದೊಂದು ಘನಘೋರ ಕೃತ್ಯ ಎಸಗಿರುವುದಾಗಿ ಪೊಲೀಸರು ಹೇಳಿದ್ದಾರೆ.
ಪಲ್ಟಿಯಾದ ಲಾರಿ, ರಸ್ತೆ ತುಂಬಾ ಈರುಳ್ಳಿ… ಚಾಲಕ ಮಾತ್ರ ನಿಶ್ಚಿಂತೆ! ಫೋಟೋದಲ್ಲೂ ‘ರಾಗಾ’ನ ಹುಡುಕಿದ್ರು ಕಮೆಂಟಿಗರು!

20 ವರ್ಷಗಳ ಹಿಂದೆ ಪಾಕ್‌ ಗಡಿಹೊಕ್ಕ ಮೂಕ ಬಾಲಕಿಯ ಕಥೆಯಿದು… ಕೊನೆಗೂ ಸಿಕ್ಕಿತು ಅಮ್ಮನ ಮನೆ… ಕಣ್ಣೀರಧಾರೆ…

ಬಾಗಲಕೋಟೆ ಬಳಿ ಭೀಕರ ಅಪಘಾತ: ಮದುವೆಗೆ ಹೋದವರು ಬೆಂಕಿಯಲ್ಲಿ ದಹನವಾದರು

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:five × five =
Remember me
