ಬೇತುಲ್‌ (ಮಧ್ಯಪ್ರದೇಶ):ಸಾವು ಹೇಗೆ ಯಾವಾಗ ಬರುತ್ತದೆ ಎಂದು ಹೇಳುವುದೇ ಕಷ್ಟ. ಆರಾಮಾಗಿದ್ದ ವ್ಯಕ್ತಿ ದಿಢೀರನೆ ಮೃತಪಡುವ ಘಟನೆಗಳು ಸಾಕಷ್ಟು ನಡೆಯುತ್ತಲೇ ಇವೆ. ಅಂಥದ್ದೇ ಒಂದು ಘಟನೆ ಮಧ್ಯಪ್ರದೇಶದ ಬೇತುಲ್‌ ಜಿಲ್ಲೆಯ ಡೋರಿ ಗ್ರಾಮದಲ್ಲಿ ಸಂಭವಿಸಿದೆ.
ವಿವಾಹ ನಡೆಯುತ್ತಿದ್ದ ವೇಳೆ ಡಾನ್ಸ್‌ ಮಾಡುತ್ತಿದ್ದ ವರನ ಸಂಬಂಧಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದುಬಿದ್ದು ಮೃತಪಟ್ಟಿದ್ದಾರೆ. ಹಾಡಿಗೆ ತಕ್ಕಂತೆ ಖುಷಿಯಿಂದ ನರ್ತಿಸುತ್ತಿದ್ದ ವ್ಯಕ್ತಿ ದಿಢೀರ್‌ ಮೃತಪಟ್ಟಿದ್ದು, ಮದುವೆ ಮನೆಯಲ್ಲ ಸೂತಕದ ಛಾಯೆ ಮೂಡಿಸಿದ್ದು ಎಲ್ಲರಲ್ಲಿ ಆತಂಕ ಸೃಷ್ಟಿಸಿದೆ. ಅದರ ವಿಡಿಯೋ ವೈರಲ್‌ ಆಗಿದೆ.
ಈ ವಿಡಿಯೋದಲ್ಲಿ ವ್ಯಕ್ತಿಯೊಬ್ಬ ನೃತ್ಯ ಮಾಡುತ್ತಿರುವುದನ್ನು ಕಾಣಬಹುದು. ಇದ್ದಕ್ಕಿದ್ದಂತೆಯೇ ಅವರು ಕುಸಿದುಬಿದ್ದಿದ್ದಾರೆ. ಆಗ ಕೆಲವರು ಅದನ್ನು ತಮಾಷೆ ಎಂದುಕೊಂಡಿದ್ದಾರೆ. ಆದರೆ ಎಷ್ಟು ಹೊತ್ತಾದರೂ ಮೇಲೆ ಏಳದಿದ್ದಾಗ ಹತ್ತಿರ ಬಂದು ನೋಡಿದಾಗ ಉಸಿರು ನಿಂತಿರುವುದು ಕಂಡಿದೆ.
ತಕ್ಷಣ ಆತನನ್ನು ಜಿಲ್ಲಾಸ್ಪತ್ರೆ ಕರೆದುಕೊಂಡು ಹೋಗಲಾಯಿತು. ಅಲ್ಲಿ ವೈದ್ಯರು ಆತ ಮೃತಪಟ್ಟಿರುವುದಾಗಿ ಹೇಳಿದ್ದಾರೆ. ವೈದ್ಯರ ಪ್ರಕಾರ, ಆ ವ್ಯಕ್ತಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಸಾವಿನಲ್ಲೂ ಒಂದಾದ ಅಮ್ಮ ಮಗ: ಪುತ್ರನ ಸುದ್ದಿ ಕೇಳಿ ಕೊನೆಯುಸಿರೆಳೆದ ತಾಯಿ! ಮಂಡ್ಯದಲ್ಲೊಂದು ದುರಂತ

ಒಂದು ನಿಮಿಷದಲ್ಲಿ 109 ಪುಷ್‌ಅಪ್‌- ಗಿನ್ನೆಸ್‌ ವಿಶ್ವ ದಾಖಲೆ ಪುಟ ಸೇರಿದ ಯುವಕ: ವಿಡಿಯೋ ಇಲ್ಲಿದೆ ನೋಡಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
