ನವದೆಹಲಿ:ದೆಹಲಿ ಅಬಕಾರಿ ನೀತಿ ಅನುಷ್ಠಾನದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 12 ಜನರ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಭಾನುವಾರ ಲುಕ್ ಔಟ್ ನೋಟಿಸ್​​ ಹೊರಡಿಸಿದೆ.
ಕಳೆದ ಶುಕ್ರವಾರವಷ್ಟೇ ಅವರ ಮನೆಯ ಮೇಲೆ ಸಿಬಿಐ ದಾಳಿ ನಡೆಸಿತ್ತು. ಇದೀಗ ಲುಕ್ ಔಟ್ ನೋಟಿಸ್​​ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ, ವಿದೇಶ ಪ್ರವಾಸ ಕೈಗೊಳ್ಳದಂತೆ ಅವರ ಮೇಲೆ ನಿರ್ಬಂಧ ವಿಧಿಸಲಾಗಿದೆ. 468 ಖಾಸಗಿ ಬಾರ್‌ಗಳಿಗೆ ನೀಡಿರುವ ಅನುಮತಿಯಲ್ಲಿ ಅಕ್ರಮ ಎಸಗಿರುವ ಆರೋಪ ಇವರ ಮೇಲಿದೆ. ಈ ಪ್ರಕರಣದಲ್ಲಿ ಒಟ್ಟು 13 ಜನರ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಈ ಪೈಕಿ ಮನೀಷ್ ಸಿಸೋಡಿಯಾ ಮೊದಲ ಆರೋಪಿ.
ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ವಿಚಾರವೇ ಕೇಂದ್ರ ಸರ್ಕಾರ ಮತ್ತು ದೆಹಲಿಯ ಆಮ್ ಆದ್ಮಿ ಪಕ್ಷದ ಸರ್ಕಾರದ ನಡುವೆ ಜಟಾಪಟಿಗೆ ಕಾರಣವಾಗಿದೆ. ಇಂತಹ ಸಂದರ್ಭದಲ್ಲಿ ವಿದೇಶ ಪ್ರಯಾಣಕ್ಕೆ ನಿರ್ಬಂಧ ಹೇರಿದ್ದು ಎಎಪಿ ಕಾರ್ಯಕರ್ತರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕುರಿತು ಹೇಳಿಕೆ ನೀಡಿರುವ ಮನೀಷ್ ಸಿಸೋಡಿಯಾ, ದೆಹಲಿ ಅಬಕಾರಿ ನೀತಿ ಸಂಪೂರ್ಣ ಪಾರದರ್ಶಕವಾಗಿದೆ. ಯಾವುದೇ ಹಗರಣ ನಡೆದಿಲ್ಲ ಎಂದಿದ್ದಾರೆ. ಎಎಪಿ ರಾಜಕೀಯ ಬೆಳವಣಿಗೆ ಸಹಿಸದ ಬಿಜೆಪಿ ನಿಯಂತ್ರಣ ಹೇರಲು ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.
ಅವರು ಎಷ್ಟೇ ಪ್ರಯತ್ನಿಸಿದರೂ, ಎಷ್ಟೇ ಪಿತೂರಿ ಮಾಡಿದರೂ 2024ರ ಚುನಾವಣೆ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ನಡುವೆ ನಡೆಯಲಿದೆ” ಎಂದು ಸಿಸೋಡಿಯಾ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.
ಏನಿದು ಕೇಸ್​?ದೆಹಲಿ ಸರ್ಕಾರ 2021-22ನೇ ಸಾಲಿನ ಅಬಕಾರಿ ನೀತಿಯನ್ನು ರೂಪಿಸಿತ್ತು. ಈ ನೀತಿಯ ಅನ್ವಯ 468 ಖಾಸಗಿ ಬಾರ್‌ಗಳಿಗೆ ಅನುಮತಿ ನೀಡಲಾಗಿತ್ತು. ಈ ಅನುಮತಿ ನೀಡುವ ಸಮಯದಲ್ಲಿ ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಈ ಕುರಿತು ದೆಹಲಿಯ ಉಪರಾಜ್ಯಪಾಲ ವಿ.ಕೆ.ಸಕ್ಸೇನಾ ಅವರು ಕಳೆದ ತಿಂಗಳು ಸಿಬಿಐ ತನಿಖೆಗೆ ಶಿಫಾರಸು ಮಾಡಿದ್ದರು. ಸಚಿವ ಮನೀಶ್ ಸಿಸೋಡಿಯಾ ಕೂಡ ಇದಕ್ಕೆ ಸಮ್ಮತಿ ಸೂಚಿಸಿದ್ದರು.
ಇದೇ ಸಂದರ್ಭದಲ್ಲಿ 11 ಅಬಕಾರಿ ಅಧಿಕಾರಿಗಳನ್ನು ಕೂಡ ಅಮಾನತು ಮಾಡಲಾಗಿತ್ತು. ಮದ್ಯದ ಲೈಸೆನ್ಸ್‌ ಪಡೆದುಕೊಂಡವರಿಗೆ ಟೆಂಡರ್‌ ನಂತರ ಅನೇಕ ಸವಲತ್ತುಗಳನ್ನು ನೀಡಲಾಗಿದೆ. ಇದರಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವಾಗಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಮದ್ಯದ ವ್ಯಾಪಾರಿ ಸಮೀರ್ ಮಹೇಂದ್ರು ಅವರು ಸಿಸೋಡಿಯಾ ಅವರ ಸಹಚರರಿಗೆ 5 ಕೋಟಿ ರೂ ಪಾವತಿಸಿದ್ದಾರೆ ಎಂದು ಸಿಬಿಐ 2021-22ರ ಅಬಕಾರಿ ನೀತಿ ರಚನೆ ಮತ್ತು ಅನುಷ್ಠಾನದ ಅಡಿ ಎಫ್‌ಐಆರ್​ ದಾಖಲಿಸಿದೆ. ಈಗ ವಿದೇಶಕ್ಕೆ ತೆರಳದಂತೆ ಲುಕ್​ಔಟ್​ ನೋಟಿಸ್​ ಜಾರಿಗೊಳಿಸಲಾಗಿದೆ. ಒಂದು ವೇಳೆ ಸಿಸೋಡಿಯಾ ಅವರು ಸಹಕರಿಸದೇ ಇದ್ದರೆ ಬಂಧಿಸುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.(ಏಜೆನ್ಸೀಸ್​)
VEDIO: ರಾಹುಲ್​ ಕಚೇರಿಯ ಗಾಂಧಿ ಫೋಟೋ ಧ್ವಂಸ; ವಿಡಿಯೋದಿಂದ ಬಯಲಾಯ್ತು ಭಯಾನಕ ಸತ್ಯ- ಕಾಂಗ್ರೆಸ್ಸಿಗರೇ ಅರೆಸ್ಟ್​!

ಆಪರೇಷನ್​ ತಮಿಳುನಾಡು: ರಾಜ್ಯಪಾಲರ ಹುದ್ದೆಗೆ ಸೂಪರ್​ಸ್ಟಾರ್​ ರಜನೀಕಾಂತ್​?

VIDEO: ಈ ಕೆನ್ನೆಗೆ ಆ ಕೆನ್ನೆಯಂತೆ ಮೊಟ್ಟೆಗೆ ಮೊಟ್ಟೆ: ಯೂತ್​ ಕಾಂಗ್ರೆಸ್​ನಿಂದ ಹೀಗೊಂದು ಗಾಂಧಿ ತತ್ವ ಅಭಿಯಾನ- ನಲ್​ಪಾಡ್​ ಹೇಳಿಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:8 − four =
Remember me
