ನವದೆಹಲಿ:ಕರೊನಾ ಪಾಸಿಟಿವ್‌ ಬಂದಿದ್ದ ಹಿನ್ನೆಲೆಯಲ್ಲಿ ಏಪ್ರಿಲ್‌ 19ರಂದು ದೆಹಲಿಯ ಏಮ್ಸ್​ ಆಸ್ಪತ್ರೆಯ ಟ್ರಾಮಾ ಸೆಂಟರ್​ಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಡಾ. ಮನಮೋಹನ್​ ಸಿಂಗ್ ಅವರು ಇಂದು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್‌ಚಾರ್ಜ್‌ ಆಗಿದ್ದಾರೆ.
ಮನಮೋಹನ್​ ಸಿಂಗ್ ಅವರು ಕಳೆದ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಕರೊನಾ ವೈರಸ್ ಹಾಗೂ ಲಸಿಕೆ ಕುರಿತು ಕೇಂದ್ರ ಸರ್ಕಾರಕ್ಕೆ ಅವರು ಪತ್ರ ಬರೆದಿದ್ದರು. ಕರೊನಾ ಲಸಿಕೆ, ಲಸಿಕೆ ವಿತರಣೆ ಕುರಿತು ಪಾರದರ್ಶಕತೆ ಬೇಕು ಎಂದು ಪತ್ರದಲ್ಲಿ ಹೇಳಿದ್ದರು.
ಇದಾದ ಬೆನ್ನಲ್ಲೇ ಅವರಿಗೆ ಕರೊನಾ ಪಾಸಿಟಿವ್‌ ಕಾಣಿಸಿಕೊಂಡಿತ್ತು. ಇದೀಗ ಗುಣಮುಖರಾಗಿ ಡಿಸ್‌ಚಾರ್ಜ್‌ ಆಗಿದ್ದಾರೆ.
2009 ರಲ್ಲಿ ಎರಡನೇ ಬಾರಿ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸಿಂಗ್​ ಅವರನ್ನು, ಕಳೆದ ವರ್ಷ ಮೇ ತಿಂಗಳಲ್ಲಿ ಸಹ ಎದೆನೋವು ಉಂಟಾದ ಹಿನ್ನೆಲೆಯಲ್ಲಿ ಏಮ್ಸ್​ ಆಸ್ಪತ್ರೆಗೆ ಸೇರಿಸಲಾಗಿತ್ತು ಎನ್ನಲಾಗಿದೆ.(ಏಜೆನ್ಸೀಸ್)
ಕೊಳೆಗೇರಿಯಲ್ಲಿ ಸಂಭವಿಸಿದ ಭಾರಿ ಅಗ್ನಿ ದುರಂತ: ಒಂದೇ ಕುಟುಂಬದ ಆರು ಮಂದಿ ಸಜೀವ ದಹನ

ಅವಳು ಇವ್ರ ಮೊದಲ ಲವ್‌ ಅಂತೆ: ಎರಡು ಮಕ್ಕಳಾದ್ರೂ ಅವಳನ್ನು ನೋಡಿದ್ರೆ ಏನೇನೋ ಆಗತ್ತಂತೆ- ನಾನೇನು ಮಾಡ್ಲಿ?

ಜನರು ಅನಗತ್ಯ ಓಡಾಡುತ್ತಿದ್ರೆ ಅವರ ನಿಯಂತ್ರಣಕ್ಕೆ ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ- ಜಿಲ್ಲಾಡಳಿತಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − one =
Remember me
