ಝಾನ್ಸಿ (ಮಧ್ಯಪ್ರದೇಶ):ಕಾರಿನಲ್ಲಿ ಹೋಗುತ್ತಿರುವ ವೇಳೆ ಹಸುವೊಂದು ಅಡ್ಡ ಬಂದ ಕಾರಣ, ಅದನ್ನು ತಪ್ಪಿಸಲು ಹೋಗಿ ವೃದ್ಧ ದಂಪತಿ ಪ್ರಾಣ ಬಿಟ್ಟಿದ್ದಾರೆ. ಮಗನ ಜತೆ ಕಾರಿನಲ್ಲಿ ಹೋಗುತ್ತಿದ್ದ ಆತನ ಅಪ್ಪ- ಅಮ್ಮ ಅಪಘಾತದಲ್ಲಿ ಅಸುನೀಗಿರುವ ದಾರುಣ ಘಟನೆ ಇದಾಗಿದೆ.
ಯುವಕ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಘಟನೆ ನಡೆದಿರುವುದು ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಝಾನ್ಸಿ-ಖಜುರಾಹೊ ರಸ್ತೆಯಲ್ಲಿ.
ಅಂಕುರ್ ಅಗರ್ವಾಲ್ ಎಂಬ 27 ವರ್ಷದ ಯುವಕ ತನ್ನ ತಂದೆ ಶಯಮ್ ಲಾಲ್ ಅಗರವಾಲ್ (70) ಮತ್ತು ತಾಯಿ ಮಂಜು (60) ಅವರನ್ನು ಕರೆದುಕೊಂಡು ಕಾರಿನಲ್ಲಿ ಹೋಗುತ್ತಿದ್ದರು. ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯ ಝಾನ್ಸಿ-ಖಜುರಾಹೊ ರಸ್ತೆಯಲ್ಲಿ ಹೋಗುವಾಗ ಈ ಘಟನೆ ನಡೆದಿದೆ. ಜಿಲ್ಲಾ ಕೇಂದ್ರದಿಂದ 22 ಕಿಮೀ ದೂರದಲ್ಲಿರುವ ಬಿಲಹರಿ ಗ್ರಾಮದ ಬಳಿ ಅಪಘಾತ ಸಂಭವಿಸಿರುವುದಾಗಿ ನೌಗಾಂವ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂಜಯ್ ವೇದಿಯಾ ತಿಳಿಸಿದ್ದಾರೆ.
ಅಂಕುರ್​ ಅವರು ಕಾರನ್ನು ಚಲಾಯಿಸಿಕೊಂಡು ಹೋಗುತ್ತಿದ್ದರು. ಕಾರಿಗೆ ಏಕಾಏಕಿ ಹಸುವೊಂದು ಅಡ್ಡ ಬಂದಿದೆ. ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್​ ಆಗಿ ಅಂಕುರ್​ ಬ್ರೇಕ್​ ಹಾಗಿದ್ದಾರೆ. ಕಾರು ಪಲ್ಟಿಯಾಗಿ ಬಿದ್ದುಬಿಟ್ಟಿದೆ. ಈ ಸಂದರ್ಭದಲ್ಲಿ ವೃದ್ಧ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಸಂಜಯ್​ ತಿಳಿಸಿದ್ದಾರೆ. ಈ ಕುಟುಂಬ ಝಾನ್ಸಿಯಿಂದ ಛತ್ತರ್‌ಪುರದ ತಮ್ಮ ಮನೆಗೆ ಪ್ರಯಾಣಿಸುತ್ತಿತ್ತು ಎಂದು ಮಾಹಿತಿ ನೀಡಿದರು.
ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತಪಟ್ಟವನ್ನು ಕಾರಿನಿಂದ ಹೊರತೆಗೆದು ಗಾಯಾಳು ಅಂಕುರ್​ನನ್ನು ಹತ್ತಿರದ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ.(ಏಜೆನ್ಸೀಸ್​)
ಚಿಕನ್ ಅಂಗಡಿ ತೆರೆದಿದ್ದೇ ಪ್ರಾಣಕ್ಕೆ ಮುಳುವು? ಪ್ರವೀಣ್​ಗೆ ಮೊದಲೇ ಸಿಕ್ಕಿತ್ತಾ ಸಾವಿನ ಸುಳಿವು? ಸಹೋದರ ನೀಡಿದರು ಸ್ಫೋಟಕ ಹೇಳಿಕೆ
ಕಳ್ಳ-ಪೊಲೀಸ್​ ಆಡುತ್ತಾ ಗುಂಡು ಹಾರಿಸಿದ ಬಿಜೆಪಿ ಮುಖಂಡನ ಪುತ್ರ: ಪ್ರಾಣ ಬಿಟ್ಟ ನೆರೆಮನೆಯ ಬಾಲಕ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four − 3 =
Remember me
