ಇಸಾನಗರ್ (ಉತ್ತರ ಪ್ರದೇಶ):ಖಾಸಗಿ ಬಸ್ ಮತ್ತು ಟ್ರಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಇಸಾನಗರದಲ್ಲಿ ನಡೆದಿದೆ. ಘಟನೆಯಲ್ಲಿ 24 ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.
ಖಮರಿಯಾ ಪೊಲೀಸ್ ಪೋಸ್ಟ್ ಬಳಿ ಇರುವ ಶಾರದಾ ನದಿಯ ಸೇತುವೆಯ ಮೇಲೆ ಈ ದುರ್ಘಟನೆ ಸಂಭವಿಸಿದೆ. ಅಗತ್ಯಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಬಸ್​ ಹೊತ್ತೊಯ್ಯುತ್ತಿದ್ದುದೇ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಮೃತಪಟ್ಟವರು ಎಲ್ಲರೂ ಬಸ್​ನಲ್ಲಿ ಪ್ರಯಾಣಿಸುತ್ತಿದ್ದರು.
ಧೌರಹರಾದಿಂದ ಬಸ್ಸು ಲಖಿಂಪುರಖೇರಿಗೆ ಬರುತ್ತಿತ್ತು. ಲಖಿಂಪುರ ಖೇರಿಯಿಂದ ಬಹ್ರೈಚ್‌ಗೆ ಹೋಗುತ್ತಿದ್ದ ಟ್ರಕ್‌ಗೆ ಇದು ಡಿಕ್ಕಿ ಹೊಡೆದಿದೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಾಯದೊಂದಿಗೆ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದರು. ಅಗಲಿದ ಕುಟುಂಬ ಸದಸ್ಯರಿಗೆ ಭಗವಂತ ನೋವು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಾಳುಗಳನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತದ ಅಧಿಕಾರಿಗಳಿಗೆ ಸಿಎಂ ಯೋಗಿ ಸೂಚನೆ ನೀಡಿದ್ದಾರೆ(ಏಜೆನ್ಸೀಸ್​)
ಅಬಕಾರಿ ನೀತಿ: ಕೊನೆಗೂ ಸಿಕ್ಕಿಬಿದ್ದ ದೆಹಲಿ ಡಿಸಿಎಂ ಸಿಸೋಡಿಯಾ ಆಪ್ತ ವಿಜಯ್ ನಾಯರ್‌

VIDEO: ಚೀನಾದಲ್ಲಿ ಕ್ಷಿಪ್ರಕ್ರಾಂತಿ, ಅಧ್ಯಕ್ಷನ ಗೃಹಬಂಧನ? ಎಲ್ಲರ ಬಾಯಿ ಮುಚ್ಚಿಸಿತು ಈ ವಿಡಿಯೋ…

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:two + nine =
Remember me
