ಮುಂಬೈ:ಬಾಲಿವುಡ್​ ಸಿನಿಮಾ ಹಾಗೂ ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳನ್ನು ನಿರ್ದೇಶಿಸಿರುವ ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ ಅವರು 17 ವರ್ಷಗಳ ಡೇಟಿಂಗ್​ ಬಳಿಕ, ಇಬ್ಬರು ಮಕ್ಕಳ ಸಮ್ಮುಖದಲ್ಲಿ ಸಫೀನಾ ಹುಸೇನ್ ಅವರನ್ನು ಮದುವೆಯಾಗಿದ್ದಾರೆ.
ಹನ್ಸಲ್ ಮೆಹ್ತಾ ಮತ್ತು ಸಫೀನಾ ಅವರ ಮದುವೆಯು ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಆಪ್ತರಷ್ಟೇ ಈ ಮದುವೆಯಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸಫೀನಾ ಅವರು ನಟ ಯುಸೂಫ್ ಹುಸೇನ್ ಅವರ ಮಗಳು.
ಅಜಯ್ ದೇವಗನ್ ನಟನೆ ಛಲಾಂಗ್ ಸೇರಿದಂತೆ ಇಪ್ಪತ್ತಕ್ಕೂ ಹೆಚ್ಚು ಸಿನಿಮಾಗಳನ್ನು ಮೆಹ್ತಾ ನಿರ್ದೇಶಿಸಿದ್ದಾರೆ. ಇಷ್ಟೇ ಅಲ್ಲದೇ ಹಲವಾರು ಟಿವಿ ಧಾರಾವಾಹಿಗಳಿಗೆ ನಿರ್ದೇಶನದ ಜತೆಗೆ ನಿರ್ಮಾಣವನ್ನೂ ಮಾಡಿದ್ದಾರೆ.
ಇವರಿಗೆ ಸಾಹಿದ್ ಚಿತ್ರಕ್ಕಾಗಿ ಇವರು ರಾಷ್ಟ್ರ ಪ್ರಶಸ್ತಿ ಸಂದಿದೆ. ಈ ಬಗ್ಗೆ ಮಾತನಾಡಿರುವ ಮೆಹ್ತಾ, ‘ನಾವಿಬ್ಬರೂ ಮದುವೆ ಆಗದೇ ಇದ್ದರೂ, ಪ್ರತಿಜ್ಞೆ ತಗೆದುಕೊಂಡಂತೆ ಬದುಕು ನಡೆಸಿದೆವು. ಮಕ್ಕಳು ಬೆಳೆಯುವುದನ್ನು ನೋಡುತ್ತಾ 17 ವರ್ಷಗಳು ಹೇಗೆ ಕಳೆದವು ಎನ್ನುವುದೇ ಗೊತ್ತಾಗಲಿಲ್ಲ. ಇದೀಗ ನಾವಿಬ್ಬರೂ ಮದುವೆಯಾಗುತ್ತಿದ್ದೇವೆ’ ಎಂದಿದ್ದಾರೆ.
ಅಂದಹಾಗೆ, ಹನ್ಸಲ್ ಮೆಹ್ತಾ ಅವರಿಗೆ ಇದು ಎರಡನೇ ಮದುವೆ. 20ನೇ ವಯಸ್ಸಿನಲ್ಲೇ ಸುನೀತಾ ಎನ್ನುವವರನ್ನು ಮದುವೆಯಾಗಿದ್ದು, ಈ ಜೋಡಿಗೆ ಇಬ್ಬರು ಮಕ್ಕಳು. ನಂತರ ಸಂಸಾರದಲ್ಲಿ ಬಿರುಕು ಉಂಟಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಸಫೀನಾ ಜತೆ ಡೇಟ್‍ ಮಾಡಲು ಆರಂಭಿಸಿದ್ದರು.
ಕ್ರಿಕೆಟಿಗನಾಗಿ, ಹಾಸ್ಯಗಾರನಾಗಿ, ರಾಜಕಾರಣಿಯಾಗಿರೋ ಸಿಧುಗೆ ಜೈಲಿನಲ್ಲೀಗ ಹೊಸ ಹುದ್ದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + eighteen =
Remember me
