ಲಖನೌ:ಉತ್ತರ ಪ್ರದೇಶ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳನ್ನು ಸೋಲಿಸಲು ಪಣ ತೊಟ್ಟಿರುವ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ, ಸಮಾಜವಾದಿ ಪಕ್ಷದವರನ್ನು ಸೋಲಿಸುವುದಕ್ಕಾಗಿ ಬೇರೆ ಯಾರಿಗೇ ಆದರೂ ಮತ ಹಾಕಲು ಸಿದ್ಧ ಎಂದಿದ್ದಾರೆ.
ಸಮಾಜವಾದಿ ಪಕ್ಷದ ಎರಡನೆಯ ಅಭ್ಯರ್ಥಿಯ ವಿರುದ್ಧ ಪ್ರಾಬಲ್ಯ ಮೆರೆಯುವ ಯಾವುದೇ ಪಕ್ಷದ ಅಭ್ಯರ್ಥಿಯು ಬಿಎಸ್‌ಪಿ ಶಾಸಕರ ಮತ ಪಡೆದುಕೊಳ್ಳಲಿದ್ದಾರೆ ಎಂದಿರುವ ಮಾಯಾವತಿ, ಈ ಮೂಲಕ ಬಿಜೆಪಿಯನ್ನು ಬೆಂಬಲಿಸುವ ಸುಳಿವು ನೀಡಿದ್ದಾರೆ.
2019ರ ಲೋಕಸಭಾ ಚುನಾವಣೆ ವೇಳೆ ಮಿತ್ರ ಪಕ್ಷವಾಗಿದ್ದ ಸಮಾಜವಾದಿ ಪಕ್ಷದ ಅಖಿಲೇಶ್‌ ಯಾದವ್‌ ಮೇಲೆ ಸಿಟ್ಟು ಇಟ್ಟುಕೊಂಡಿರುವ ಮಾಯಾವತಿ, ಇದೀಗ ಬಿಜೆಪಿ ಪರವಾಗಿ ಮಾತನಾಡುತ್ತಿದ್ದಾರೆ. ಉತ್ತರ ಪ್ರದೇಶದ ಮುಂದಿನ ಪರಿಷತ್‌ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯನ್ನು ಸೋಲಿಸಲು ನಾವು ನಿರ್ಧರಿಸಿದ್ದೇವೆ. ಇದಕ್ಕಾಗಿ ನಮ್ಮ ಎಲ್ಲ ಶಕ್ತಿಯನ್ನು ನಾವು ವಿನಿಯೋಗಿಸುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಚರ್ಚ್​ ಮೇಲೆ ದಾಳಿ: ಮಹಿಳೆಯ ರುಂಡ​ ತುಂಡರಿಸಿ ಮೂವರ ಹತ್ಯೆ ಮಾಡಿದ ದುಷ್ಕರ್ಮಿಗಳು!
ನಾವು ಎಸ್‌ಪಿಯೊಂದಿಗೆ ಕೈ ಜೋಡಿಸಬಾರದಿತ್ತು. ನಾವು ಸ್ವಲ್ಪ ಆಳವಾಗಿ ಯೋಚಿಸಬೇಕಿತ್ತು. ತರಾತುರಿಯಲ್ಲಿ ತಪ್ಪು ನಿರ್ಧಾರ ತೆಗೆದುಕೊಂಡಿದ್ದೇವೆ ಎಂದ ಮಾಯಾವತಿ, ನಮ್ಮ ಮತವನ್ನು ಬಿಜೆಪಿ ಅಭ್ಯರ್ಥಿಗೆ ಅಥವಾ ಬೇರೆ ಪಕ್ಷದ ಅಭ್ಯರ್ಥಿಗೆ ಹಾಕಬೇಕಾದ ಅಗತ್ಯ ಬಂದೆ ನಾವೂ ಅದನ್ನು ಮಾಡುತ್ತೇವೆ ಎಂದರು.
ನವೆಂಬರ್‌ 9 ರಂದು ಉತ್ತರ ಪ್ರದೇಶದ 10 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅಗತ್ಯವಿರುವ ಸದಸ್ಯಬಲ ಇಲ್ಲದಿದ್ದರೂ ಒಂದು ರಾಜ್ಯಸಭಾ ಸ್ಥಾನಕ್ಕೆ ಅಭ್ಯರ್ಥಿ ರಾಮ್‌ಜಿ ಗೌತಮ್ ಅವರನ್ನು ಬಿಎಸ್‌ಪಿ ಕಣಕ್ಕಿಳಿಸಿದೆ.
ಕೆ.ಕಲ್ಯಾಣ್​ ಕುಟುಂಬದಲ್ಲಿ ಹುಳಿ ಹಿಂಡಿದ್ದ ಗಂಗಾ ಕುಲಕರ್ಣಿ ಡೆತ್​ನೋಟ್​ ಪತ್ತೆ

ಡ್ರಗ್ಸ್​ ಕೇಸ್​: ಮಾಜಿ ಗೃಹ ಸಚಿವ ಬಾಲಕೃಷ್ಣನ್​ ಪುತ್ರ ಅರೆಸ್ಟ್​

ಸಿಎಂ ವಿರುದ್ಧ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆಗೆ ಸುಪ್ರೀಂಕೋರ್ಟ್​ ತಡೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:20 − four =
Remember me
