ನವದೆಹಲಿ:ರಾಜ್ಯದ ಮಹಾತ್ವಕಾಂಕ್ಷೆಯ ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯಲ್ಲಿ ಇದ್ದ ವಿವಾದಕ್ಕೆ ತೆರೆ ಬಿದ್ದಿದ್ದು, ಈ ವಿವಾದದ ಮಧ್ಯೆ ತಾನು ಪ್ರವೇಶಿಸುವುದಿಲ್ಲ ಎಂದು ಮಂಡಳಿ ಹೇಳಿದೆ.
ಕಾವೇರಿಯ ಹೆಚ್ಚುವರಿ ನೀರನ್ನು ತಡೆದು ಬೆಂಗಳೂರು ಮತ್ತು ಸುತ್ತಮುತ್ತಲ ಪ್ರದೇಶಗಳ ಜನರಿಗೆ ಕುಡಿಯುವ ನೀರು ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಮೇಕೆದಾಟು ಯೋಜನೆ ರೂಪಿಸಿದೆ. ಈ ಕಾಮಗಾರಿಗೆ ತಮಿಳುನಾಡು ಸರ್ಕಾರ ತಕರಾರು ತೆಗೆದ ಪರಿಣಾಮ ಈ ಸ್ಥಳದಲ್ಲಿ ಯಾವುದೇ ಕಾಮಗಾರಿ ಆರಂಭಿಸಲಾಗಿಲ್ಲ. ಈ ಬಗ್ಗೆ ತಮಿಳುನಾಡು ಸರ್ಕಾರ ಈ ಯೋಜನೆಗೆ ಅನುಮತಿ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮನವಿ ಮಾಡಿದೆ.
ಈ ಮಧ್ಯೆಯೇ, ಮೇಕೆದಾಟು ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತಿರುವ ಬಗ್ಗೆ ಚೆನ್ನೈನಲ್ಲಿ ಪ್ರಕಟವಾದ ರಾಷ್ಟ್ರಮಟ್ಟದ ಇಂಗ್ಲಿಷ್‌ ಪತ್ರಿಕೆಯೊಂದು ವರದಿ ಪ್ರಕಟ ಮಾಡಿತ್ತು. ಈ ಯೋಜನೆ ಅನುಷ್ಠಾನಗೊಳಿಸಲು ಕರ್ನಾಟಕವು ಅಪಾರ ಪ್ರಮಾಣದ ಸಸ್ಯ ಸಂಪತ್ತನ್ನು ನಾಶ ಮಾಡುತ್ತದೆ ಎಂದು ಅದರಲ್ಲಿ ಉಲ್ಲೇಖವಾಗಿತ್ತು. ಇದನ್ನು ನೋಡಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯು ಸ್ವಯಂ ಪ್ರೇರಿತವಾಗಿ (ಸುವೋ ಮೋಟೋ) ದೂರು ದಾಖಲಿಸಿಕೊಂಡಿತ್ತು.
ನಂತರ ವಿಚಾರಣೆ ವೇಳೆ, ಪತ್ರಿಕೆಯು ಒನ್‌ಸೈಡೆಡ್‌ ವರದಿ ಮಾಡಿದ್ದು, ಕರ್ನಾಟಕದ ಬಗ್ಗೆ ವಿರುದ್ಧವಾಗಿ ಬರೆದಿದೆ. ಈಗಾಗಲೇ ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಎಲ್ಲ ರೀತಿಯ ಕ್ರಮ ತೆಗೆದುಕೊಂಡಿದೆ, ಆ ಬಗ್ಗೆ ವರದಿಯಲ್ಲಿ ಉಲ್ಲೇಖವಾಗಿಲ್ಲ, ಮಾತ್ರವಲ್ಲದೇ ಈ ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ಬಗ್ಗೆಯೂ ವರದಿಯಲ್ಲಿ ಉಲ್ಲೇಖವಾಗಿಲ್ಲ ಎಂದು ಕರ್ನಾಟಕದ ಪರ ವಕೀಲರು ನ್ಯಾಯಮಂಡಳಿಗೆ ಮಾಹಿತಿ ನೀಡಿದ್ದರು.
ಕರ್ನಾಟಕದ ವಾದವನ್ನು ಆಲಿಸಿರುವ ನ್ಯಾಯಮಂಡಳಿಯು ಈ ಹಂತದಲ್ಲಿ ನಾವು ಇದರ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಳ್ಳುವುದಿಲ್ಲ ಹಾಗೂ ಮೇಕೆದಾಟು ಯೋಜನೆಯ ವಿರುದ್ಧವಾಗಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯು ಇನ್ನೂ ಇತ್ಯರ್ಥಕ್ಕೆ ಬಾಕಿ ಇರುವ ಹಿನ್ನೆಲೆಯಲ್ಲಿ, ಈ ಬಗ್ಗೆ ನಾವು ತೀರ್ಪು ನೀಡುವುದಿಲ್ಲ ಎಂದು ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
ಗಂಗೆಯಲ್ಲಿ ತೇಲಿಬಂದ ಶಿಶುವೀಗ ನಮ್ಮ ಮಗು ಎಂದ ಸರ್ಕಾರ: ಅಂಬಿಗನಿಗೂ ಖುಲಾಯಿಸಿತು ಅದೃಷ್ಟ

ಕ್ಯಾಲೆಂಡರ್‌ಗೋಸ್ಕರ ಪುನಃ ಟಾಪ್‌ಲೆಸ್‌ ಆದ ನಟಿ- ಹಾಟ್‌ ಫೋಟೋಗಳು ವೈರಲ್‌

ನಾಲ್ಕು ವರ್ಷಗಳಿಂದ ಪತ್ನಿ ಪತ್ತೆಯಲ್ಲ, ನೋಟಿಸ್‌ ಕಳಿಸೋದು ಹೇಗೆ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − 6 =
Remember me
