ಪಾಲಕ್ಕಡ್ (ಕೇರಳ):ಮೆಟ್ರೋಮ್ಯಾನ್‌ ಎಂದೇ ಖ್ಯಾತಿ ಗಳಿಸಿರುವ ಇ.ಶ್ರೀಧರನ್‌ (88) ಅವರು ಬಿಜೆಪಿಗೆ ಸೇರ್ಪಡೆಯಾಗುವ ಮೂಲಕ ಕೇರಳದ ವಿಧಾನಸಭಾ ಚುನಾವಣಾ ಕಣಕ್ಕಿಳಿದಿದ್ದರು. ಪಾಲಕ್ಕಡ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಈ ಕ್ಷೇತ್ರದ ಮತದಾರರು ಇವರ ಕೈಹಿಡಿಯಲಿಲ್ಲ. ಬದಲಿಗೆ ಕಾಂಗ್ರೆಸ್ ಅಭ್ಯರ್ಥಿ ಶಫಿ ಪರಂಬಿಲ್ ಅವರು ಜಯ ಸಾಧಿಸಿದ್ದರು. ಕೇವಲ ನಾಲ್ಕು ಸಾವಿರ ಮತಗಳ ಅಂತರದಿಂದ ಶ್ರೀಧರನ್‌ ಪರಾಭವಗೊಂಡಿದ್ದರು.
ಇ.ಶ್ರೀಧರನ್‌ ಅವರು ಚುನಾವಣಾ ಪ್ರಚಾರಕ್ಕೆ ಹೋದ ಸಮಯದಲ್ಲಿ ನಾನು ಗೆಲಲ್ಲಿ ಅಥವಾ ಸೋಲಲಿ, ಪಾಲಕ್ಕಡ್ ಮುನ್ಸಿಪಾಲಿಟಿಯ ಮದುರವೀರನ್ ಕಾಲೋನಿಯ ಎಲ್ಲಾ ಕುಟುಂಬಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಭರವಸೆ ಕೊಟ್ಟಿದ್ದರು. ಆ ಮಾತನ್ನೀಗ ಅವರು ಉಳಿಸಿಕೊಂಡಿದ್ದಾರೆ.
ಬೆಳಕು ಕಾಣದೇ ವಂಚಿತರಾಗಿದ್ದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಒದಗಿಸಿಕೊಟ್ಟಿದ್ದಾರೆ. ಈ ಪೈಕಿ ಕೆಲವು ಮನೆಗಳ ವಿದ್ಯುತ್ ಶುಲ್ಕ ಬಾಕಿ ಇದುದ್ದರಿಂದ ವಿದ್ಯುತ್ ಸಂಪರ್ಕವನ್ನು ಕಿತ್ತು ಹಾಕಲಾಗಿತ್ತು. ಚುನಾವಣಾ ಪ್ರಚಾರಕ್ಕೆ ಹೋದಾಗಲೇ ಅವರು ಎಲ್ಲರಿಗೂ ಪುನಃ ವಿದ್ಯುತ್‌ ನೀಡುವ ಭರವಸೆ ಕೊಟ್ಟಿದ್ದರು.
ಅದರಂತೆಯೇ, ಈ ಕುಟುಂಬದ ಬಾಕಿ ವಿದ್ಯುತ್ ಬಾಕಿ ಪಾವತಿಗಾಗಿ 81,525 ರೂಪಾಯಿ ಚೆಕ್ಕನ್ನು ವಿದ್ಯುತ್‌ ನಿಗಮಕ್ಕೆ ಶ್ರೀಧರನ್ ಕಳುಹಿಸಿದ್ದಾರೆ. ಅಲ್ಲದೇ, ಪರಿಶಿಷ್ಟ ಜಾತಿಯ 11 ಕುಟುಂಬಗಳಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದಾರೆ. ಇಂದು ನಡೆದ ಕಾರ್ಯಕ್ರಮದಲ್ಲಿ ಶ್ರೀಧರನ್‌ ಚೆಕ್ಕನ್ನು ಹಸ್ತಾಂತರಿಸಿದರು.
ಆಫೀಸ್‌ಗೆ ಬರ್ತಾನೆ, ಪದೇ ಪದೇ ಟಾಯ್ಲೆಟ್‌ಗೆ ಓಡ್ತಾನೆ- ಏನ್‌ ಮಾಡೋದು? ಇಂಟರ್‌ನೆಟ್‌ ಮೊರೆ ಹೋದ ಕಂಪೆನಿ!

ದೇಹ ಒಪ್ಪಿಸಿದ್ದೇನೆ, ಕಿಡ್ನಿ ಮಾರಿ 20 ಲಕ್ಷ ರೂ ಕೊಡುವೆ ಎಂದ್ರೂ ಕೇಳದೇ ಬೇರೆ ಮದ್ವೆಯಾಗ್ತಿದ್ದಾನೆ- ಏನು ಮಾಡಲಿ?

ಬ್ಲ್ಯಾಕ್‌ ಫಂಗಸ್‌ ಗುರುತಿಸುವುದು ಹೇಗೆ? ಚಿಕಿತ್ಸೆ, ಪರಿಹಾರವೇನು? ವೈದ್ಯಕೀಯ ವಿಜ್ಞಾನ ಸಂಸ್ಥೆ ಮಾರ್ಗಸೂಚಿ ಇಲ್ಲಿದೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 17 =
Remember me
