ಲಖನೌ:ಉತ್ತರ ಪ್ರದೇಶದಲ್ಲಿ ಬಹಳ ಹಿಂದಿನಿಂದಲೂ ಅಪರಾಧಿಕ ಚಟುವಟಿಕೆಯ ತಾಣವಾಗಿದೆ. ಇದರಿಂದಾಗಲೇ ಅದೆಷ್ಟೋ ದಶಕಗಳಿಂದಲೂ ಉತ್ತರ ಪ್ರದೇಶ ಗೂಂಡಾ ರಾಜ್ಯ ಎಂದೇ ಕುಖ್ಯಾತಿ ಗಳಿಸಿದೆ.ಆದರೆ ಇತ್ತೀಚೆಗೆ ನಡೆಯುತ್ತಿರುವ ಅಪರಾಧ ಘಟನೆಗಳು ದೇಶಾದ್ಯಂತ ಭಾರಿ ಸುದ್ದಿ ಮಾಡುತ್ತಿರುವ ಬೆನ್ನಲ್ಲೇ ಅಪರಾಧಿಗಳಿಗೆ ನಡುಕ ಹುಟ್ಟಿಸುವ ಮಾಹಿತಿಯನ್ನು ಉತ್ತರ ಪ್ರದೇಶ ಸರ್ಕಾರ ಬಿಡುಗಡೆ ಮಾಡಿದೆ.ಅದರಲ್ಲಿ ಅತ್ಯಂತ ಕುತೂಹಲದ ಸಂಗತಿ ಎಂದರೆ ಕಳೆದ 24ಗಂಟೆಯಲ್ಲಿ 23 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿರುವುದು! ಇವರ ಪೈಕಿ ಹೆಚ್ಚಿನ ಅಪರಾಧಿಗಳು ಮಹಿಳೆಯರು ಮತ್ತು ಮಕ್ಕಳ ಮೇಲೆ ದೌರ್ಜನ್ಯ ಎಸಗಿದವರೇ ಆಗಿದ್ದಾರೆ. ಇದರಲ್ಲಿ ಅಪರಾಧ ಕೃತ್ಯ ಎಸಗಿದ್ದ 31 ಆರೋಪಿಗಳಿಗೆ ಭಾರೀ ಮೊತ್ತದ ದಂಡ ವಿಧಿಸಲಾಗಿದೆ.ರಾಜ್ಯಾದ್ಯಂತ ಮಹಿಳೆಯರು ಮತ್ತು ಯುವತಿಯರ ಮೇಲೆ ನಡೆಯುವ ಅಪರಾಧ ತಡೆಗಟ್ಟುವ ನಿಟ್ಟಿನಲ್ಲಿ ಉತ್ತರಪ್ರದೇಶ ಸರ್ಕಾರ ಇತ್ತೀಚೆಗಷ್ಟೇ ‘ಮಿಷನ್ ಶಕ್ತಿ’ ಎಂಬ ಯೋಜನೆಯನ್ನು ಜಾರಿಗೊಳಿಸಿದೆ. ಅಪರಾಧಿಗಳಿಗೆ ತಕ್ಕಶಾಸ್ತಿ ಮಾಡುವ ಯೋಜನೆ ಇದಾಗಿದೆ ಎಂದು ಎಡಿಜಿ ಅಶುತೋಷ್ ಪಾಂಡೆ ತಿಳಿಸಿದ್ದಾರೆ.
ಇದನ್ನೂ ಓದಿ:ತ್ರಿವಳಿ ತಲಾಖ್​ ವಿರುದ್ಧದ ಹೋರಾಟಗಾರ್ತಿಯೀಗ ಮಹಿಳಾ ಆಯೋಗದ ಉಪಾಧ್ಯಕ್ಷೆ49 ಪ್ರಕರಣಗಳಲ್ಲಿ ಜಾಮೀನು ರದ್ದುಗೊಳಿಸಲಾಗಿದ್ದು, 28 ಅಪರಾಧಿಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಮಾತ್ರವಲ್ಲದೇ ಕಳೆದ ಒಂದು ವರ್ಷದಲ್ಲಿ ಮಹಿಳೆಯರ ವಿರುದ್ಧ ಅಪರಾಧ ಎಸಗಿದ್ದ 11 ಪ್ರಕರಣಗಳಲ್ಲಿನ 14 ಆರೋಪಿಗಳಿಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.ಬಂಧಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಮಾಡಲಾದ ಎನ್‌ಕೌಂಟರ್‌ಗಳಲ್ಲಿ ಇಲ್ಲಿಯವರೆಗೆ ಒಟ್ಟು 125 ಮಂದಿ ಮೃತಪಟ್ಟಿದ್ದು, 2,607 ಮಂದಿ ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ. 2017ರ ಮಾರ್ಚ್​ 20ರಿಂದ ಈ ಅಕ್ಟೋಬರ್​ 5ರವರೆಗಿನ ಎನ್​ಕೌಂಟರ್​ ಅಂಕಿಅಂಶವನ್ನು ಅವರು ಬಹಿರಂಗಪಡಿಸಿದ್ದಾರೆ.ಪೊಲೀಸ್​ ಹುತಾತ್ಮ ದಿನದ ಅಂಗವಾಗಿ ಅವರು ಜನರನ್ನು ಉದ್ದೇಶಿಸಿ ಮಾತನಾಡಿದರು. 2019-20ರ ಅವಧಿಯಲ್ಲಿ ಕರ್ತವ್ಯದಲ್ಲಿ 9 ಪೊಲೀಸರು ಪ್ರಾಣ ಕಳೆದುಕೊಂಡಿದ್ದು, ಅವರನ್ನು ನಾನು ಗೌರವಿಸುತ್ತೇನೆ. ಅವರ ತ್ಯಾಗ ಎಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಯೋಗಿ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:ten + nine =
Remember me
