ಹೈದರಾಬಾದ್:ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ. ರಾಜಾ ಸಿಂಗ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೈದರಾಬಾದ್‌ನಲ್ಲಿ ಸೋಮವಾರ ರಾತ್ರಿ ಶಾಸಕ ರಾಜಾ ಸಿಂಗ್ ಪ್ರವಾದಿ ಕುರಿತು ಮಾತನಾಡುವ ವಿಡಿಯೋವನ್ನು ಬಿಡುಗಡೆ ಮಾಡಿದ ನಂತರ ಪ್ರತಿಭಟನೆ ನಡೆದಿತ್ತು. ಧಾರ್ಮಿಕ ಭಾವನೆಗಳಿಗೆ ಘಾಸಿ ಉಂಟು ಮಾಡಿದ ಆರೋಪ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕನ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.
ಮೊಹಮ್ಮದ್ ಪೈಗಂಬರ್ ವಿರುದ್ಧ ಹೇಳಿಕೆ ನೀಡಿದ್ದ ರಾಜಾ ಸಿಂಗ್ ವಿರುದ್ಧ ಹಲವಾರು ದೂರುಗಳು ದಾಖಲಾಗಿವೆ. ಅಷ್ಟೇ ಅಲ್ಲದೆ ಡಬೀರ್‌ಪುರ, ಭವಾನಿ ನಗರ, ರೈನ್‌ಬಜಾರ್‌, ಮೀರ್‌ಚೌಕ್‌ ಪೊಲೀಸ್ ಠಾಣೆಗಳ ಮುಂದೆ ಸಾವಿರಾರು ಸಂಖ್ಯೆಯಲ್ಲಿ ಜನತೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ.
ಗೋಶಾಮಹಲ್ ಶಾಸಕ ರಾಜಾ ಸಿಂಗ್ ಅವರು ಪ್ರವಾದಿ ಮೊಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವ ವೀಡಿಯೊವನ್ನು ಬಿಡುಗಡೆ ಮಾಡಿದ ನಂತರ ಸೋಮವಾರ ಮಧ್ಯರಾತ್ರಿ ಮತ್ತು ನಂತರ ಇಂದು ಬೆಳಿಗ್ಗೆ ನಗರ ಪೊಲೀಸ್ ಕಮಿಷನರ್ ಸಿವಿ ಆನಂದ್ ಅವರ ಕಚೇರಿ ಮತ್ತು ಪಟ್ಟಣದ ಇತರ ಭಾಗಗಳಲ್ಲಿ ಪ್ರತಿಭಟನೆಗಳು ನಡೆದವು. ರಾಜಾ ಸಿಂಗ್ ಅವರನ್ನು ತಕ್ಷಣ ಬಂಧಿಸುವಂತೆ ಒತ್ತಾಯಿಸಿದ್ದರು. ಈ ವಿಡಿಯೋದಲ್ಲಿ ರಾಜಾ ಸಿಂಗ್ ಅವರು ಹಾಸ್ಯನಟ ಮುನವ್ವರ್ ಫಾರೂಕಿ ಮತ್ತು ಅವರ ತಾಯಿಯ ಬಗ್ಗೆಯೂ ಕಾಮೆಂಟ್ ಮಾಡಿದ್ದಾರೆ ಎನ್ನಲಾಗಿದೆ.
ಭಾರಿ ಪ್ರತಿಭಟನೆ ಹಿನ್ನೆಲೆಯಲ್ಲಿ ಹೈದರಾಬಾದ್ ಪೊಲೀಸ್ ಆಯುಕ್ತರ ಕಚೇರಿ, ಲಕ್ಡಿಕಾಪುಲ್‌ನಲ್ಲಿರುವ ಪೊಲೀಸ್ ಮಹಾನಿರ್ದೇಶಕರ ಕಚೇರಿ ಮತ್ತು ಪುರಾನಿ ಹವೇಲಿಯಲ್ಲಿರುವ ಹಳೆಯ ಪೊಲೀಸ್ ಕಮಿಷನರ್ ಕಚೇರಿ ಮತ್ತು ನಗರದ ಇತರ ಪ್ರಮುಖ ಸ್ಥಳಗಳ ಹೊರಗೆ ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ.(ಏಜೆನ್ಸೀಸ್​)
Telangana Police detains BJP MLA Raja Singh for his alleged derogatory comments against Prophet Muhammadhttps://t.co/wZrwhIX1D1pic.twitter.com/e4kkvM10ZQ
— ANI (@ANI)August 23, 2022

ಕೆಪಿಟಿಸಿಎಲ್​ ಪರೀಕ್ಷೆ ಗೋಲ್​ಮಾಲ್​: ಸ್ಮಾರ್ಟ್​ವಾಚ್​, ಬ್ಲೂಟೂಥ್​ನಿಂದ ಅಕ್ರಮ- 9 ಮಂದಿ ಅರೆಸ್ಟ್​

ಕೈಗೆ ಬಂದ ತುತ್ತು ಬಾಯಿಗಿಲ್ಲ: ಸರ್ಕಾರಿ ಕೆಲಸ ಸಿಕ್ಕಿಲ್ಲ.. ಬ್ಲಡಿ ಸಿಸ್ಟಮ್​ ಎಂದು ಬರೆದಿಟ್ಟು ಬಾರದ ಲೋಕಕ್ಕೆ ಯುವತಿ…

ಜೊಮ್ಯಾಟೋ ಕಂಪೆನಿ, ನಟ ಹೃತಿಕ್​ ರೋಷನ್​ಗೆ ‘ಮಹಾಕಾಲ’ ಸಂಕಟ: ಶುರುವಾಯ್ತು ಬೈಕಾಟ್​ ಅಭಿಯಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
