ಕೊಟ್ಟಾಯಂ: ಸನ್ಯಾಸಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಎದುರಿಸುತ್ತಿದ್ದ ಕೇರಳದ ಬಿಷಪ್ ಫ್ರಾಂಕೊ ಮುಲಕ್ಕಲ್ ಅವರನ್ನು ಆರೋಪಮುಕ್ತಗೊಳಿಸಿ ಕೋರ್ಟ್‌ ಆದೇಶಿಸಿದೆ.
2018ರ ಜೂನ್‌ನಲ್ಲಿ ಸನ್ಯಾಸಿನಿಯೊಬ್ಬರು ಬಿಷಪ್ ಫ್ರಾಂಕೋ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿದ್ದರು. ಈ ಸಂಬಂಧ ಪ್ರಕರಣ ದಾಖಲಾಗಿತ್ತು. ಬಳಿಕ ವಿವಾದ ಕೋರ್ಟ್‌ ಮೆಟ್ಟಿಲೇರಿತ್ತು. ಮೂರೂವರೆ ವರ್ಷದ ಬಳಿಕ ಇದೀಗ ತೀರ್ಪು ಪ್ರಕಟವಾಗಿದೆ. ಬಿಷಪ್‌ ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ ಎಂದು ಕೋರ್ಟ್‌ ಅಭಿಪ್ರಾಯ ಪಟ್ಟಿದೆ.
ಕೊಟ್ಟಾಯಂ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ನ್ಯಾಯಾಧೀಶ ಜಿ ಗೋಪಕುಮಾರ್ ಅವರು ಆದೇಶ ಹೊರಡಿಸುತ್ತಿದ್ದಂತೆಯೇ ಸ್ಥಳದಲ್ಲಿ ಹಾಜರು ಇದ್ದ ಬಿಷಪ್‌ ಸಂತಸ ವ್ಯಕ್ತಪಡಿಸಿದ್ದಾರೆ. ‘ನಾನು ದೇವರಿಗೆ ಕೃತಜ್ಞನಾಗಿದ್ದೇನೆ, ಸತ್ಯವು ಅಂತಿಮವಾಗಿ ಮೇಲುಗೈ ಸಾಧಿಸುತ್ತದೆ ಎಂದು ನಾನು ಯಾವಾಗಲೂ ನಂಬುತ್ತೇನೆ’ ಎಂದರು.
ನಿದ್ದೆಗೆ ಜಾರಿದ ಟ್ರಕ್‌ ಚಾಲಕ- ನಾಲ್ವರ ದುರ್ಮರಣ: ರಸ್ತೆಯಲ್ಲಿ ಬಿದ್ದ ಮೀನು ಹೆಕ್ಕಲು ನೂಕುನುಗ್ಗಲು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − seventeen =
Remember me
