ಭೋಪಾಲ್‌: ಹಿಂದೂ ಹೆಣ್ಣುಮಕ್ಕಳಿಗೆ ಆಮಿಷ ಒಡ್ಡಿ, ಬಲವಂತದಿಂದ ಇಲ್ಲವೇ ಪ್ರೀತಿಸುವ ನೆಪದಲ್ಲಿ ಬ್ರೇನ್‌ವಾಷ್‌ ಮಾಡಿ ಮತಾಂತರ ಮಾಡುವ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದೊಂದೇ ರಾಜ್ಯಗಳು ಇಂಥವರಿಗೆ ಬುದ್ಧಿ ಕಲಿಸಲು ಮುಂದಾಗಿದೆ.
ಕೇವಲ ಮತಾಂತರ ಮಾಡುವುದು ಮಾತ್ರವಲ್ಲದೇ ಅನೇಕ ಪ್ರಕರಣಗಳಲ್ಲಿ ಹಿಂದೂ ಹೆಸರನ್ನು ಇಟ್ಟುಕೊಳ್ಳುವ ಯುವಕರು, ತಮ್ಮ ನಿಜವಾದ ಧರ್ಮವನ್ನು ಮುಚ್ಚಿಟ್ಟು, ಹೆಣ್ಣುಮಕ್ಕಳನ್ನು ಬಲೆಗೆ ಬೀಳಿಸಿಕೊಂಡು ಮದುವೆಯಾಗಿ ನಂತರ ಮತಾಂತರಗೊಳಿಸಿ ಮೋಸ ಮಾಡುವುದೂ ಹೆಚ್ಚುತ್ತಿದೆ.
ಇಷ್ಟು ವರ್ಷ ಯಾವುದೇ ಕಾನೂನು ಇಲ್ಲದ ಹಿನ್ನೆಲೆಯಲ್ಲಿ ಮುಗ್ಧ ಹೆಣ್ಣುಮಕ್ಕಳನ್ನು ಶೋಷಣೆ ಮಾಡಿ ಬೀದಿಗೆ ತಳ್ಳುತ್ತಿರುವ ಇಂಥ ಅಪರಾಧಿಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಇದಾಗಲೇ ಉತ್ತರ ಪ್ರದೇಶ ಸರ್ಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆಯ ಬೆನ್ನಲ್ಲೇ ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿಯೂ ಇಂಥದ್ದೊಂದು ಕಠಿಣ ಕಾನೂನು ಜಾರಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ.
ಇದೀಗ ಮಧ್ಯಪ್ರದೇಶ ಸರ್ಕಾರದ ಸಚಿವ ಸಂಪುಟದಲ್ಲಿಯೂ ಮತಾಂತರ ನಿಷೇಧ ಕಾಯ್ದೆಗೆ ಹಸಿರುನಿಶಾನೆ ದೊರೆತಿದೆ. ಇಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಲವ್, ಧರ್ಮ ಸ್ವತಂತ್ರ (ಧಾರ್ಮಿಕ ಸ್ವಾತಂತ್ರ್ಯ) ಮಸೂದೆ 2020ಕ್ಕೆ ಅನುಮೋದನೆ ನೀಡಿದೆ. ಮುಂದಿನ ಪ್ರಕ್ರಿಯೆಗಾಗಿ ಅದನ್ನು ಕಳುಹಿಸಲಾಗಿದೆ.
ಇದರ ಅನ್ವಯ, ಒಂದು ವೇಳೆ ಯಾರನ್ನಾದರೂ ಬಲವಂತವಾಗಿ ಮತಾಂತರ ಮಾಡಿದರೆ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು ಕನಿಷ್ಠ 25 ಸಾವಿರ ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.
ಈ ಮಸೂದೆಯ ಸೆಕ್ಷನ್ 3ರಲ್ಲಿ ಧಾರ್ಮಿಕ ಮತಾಂತರಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಅವರಿಗೆ ಒಂದರಿಂದ ಐದು ವರ್ಷ ಜೈಲು ಶಿಕ್ಷೆ ಮತ್ತು 25 ಸಾವಿರ ರೂ.ಗಿಂತ ಕಡಿಮೆ ದಂಡ ವನ್ನು ವಿಧಿಸಬಹುದಾಗಿದೆ. ಧರ್ಮವನ್ನು ಮುಚ್ಚಿಡುವ ಪ್ರಯತ್ನ ಮಾಡಿದರೆ 3ರಿಂದ 10 ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ 50 ಸಾವಿರ ರೂ ದಂಡ ವಿಧಿಸಲಾಗುತ್ತದೆ.
ಸಾಮೂಹಿಕ ಧಾರ್ಮಿಕ ಮತಾಂತರಕ್ಕೆ (ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಮಂದಿ) ಯತ್ನಿಸಿದರೆ ಐದರಿಂದ 10 ವರ್ಷ ಜೈಲು ಶಿಕ್ಷೆ ಹಾಗೂ ಕನಿಷ್ಠ ಒಂದು ಲಕ್ಷ ರೂಪಾಯಿ ದಂಡ ವಿಧಿಸಲು ಅವಕಾಶ ಕಲ್ಪಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಪ್ರಾಪ್ತ ಅಥವಾ ಮಹಿಳೆ ಮತಾಂತರಕ್ಕೆ ಬಲವಂತ ಮಾಡಿದರೆ, ಅಪರಾಧಿಗೆ 2 ರಿಂದ 10 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ.ವರೆಗೆ ದಂಡ ವಿಧಿಸಬಹುದು. ಈ ರೀತಿ ಅನ್ಯಾಯಕ್ಕೆ ಒಳಗಾಗಿರುವ ಹೆಣ್ಣುಮಕ್ಕಳ ಯಾವುದೇ ಸಂಬಂಧಿ ದೂರು ಸಲ್ಲಿಸಬಹುದು ಎಂದು ಹೇಳಲಾಗಿದೆ.
ಈ ಯುವಕನ ಕಾರಿನ ನಂಬರ್‌ ಪ್ಲೇಟ್‌ಗೆ 52 ಕೋಟಿ ರೂ.! ಅದ್ಯಾಕೆ ಅಂತೀರಾ?

ಮಕ್ಕಳಿಗಾಗಿ ಮದುವೆಯಾದರು: ಎರಡನೇ ಪತ್ನಿಯಾದ ಮಾತ್ರಕ್ಕೆ ನನಗೆ ಬಯಕೆಗಳು ಇರುವುದು ತಪ್ಪೆ?

ಬೆಳ್ಳಂಬೆಳಕ್ಕೆ ಮಾಸ್ಕ್‌ ಘಟಕದಲ್ಲಿ ಅಗ್ನಿ ಸ್ಫೋಟ: ಒಬ್ಬನ ಸಜೀವ ದಹನ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
