ಮುಂಬೈ :ಕಳೆದ ತಿಂಗಳು ಮುಂಬೈನಲ್ಲಿ ಆತ್ಮಹತ್ಯೆ ಮಾಡಿಕೊಂಡ ದಾದ್ರಾ ಮತ್ತು ನಗರ ಹವೇಲಿ ಸಂಸದ ಮೋಹನ್ ಡೆಲ್ಕರ್ ಅವರ ಸಾವಿನ ಪ್ರಕರಣ ಇದೀಗ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ.
ಹಲವಾರು ವರ್ಷಗಳವರೆಗೆ ಕಾಂಗ್ರೆಸ್​ನಲ್ಲಿ ದುಡಿದರೂ, ಕಾಂಗ್ರೆಸ್​ನಿಂದ ಟಿಕೆಟ್​ ಸಿಗದೇ ಬೇಸತ್ತು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಮೋಹನ್​ ಅವರ ಆತ್ಮಹತ್ಯೆ ಪ್ರಕರಣ ಇದಾಗಿದೆ.
7 ಬಾರಿ ಸಂಸದರಾಗಿ ಸೇವೆ ಸಲ್ಲಿಸಿದ್ದ ಡೆಲ್ಕರ್​ ಅವರು, ದಾದ್ರಾ ಮತ್ತು ನಗರ ಹವೇಲಿ ಕ್ಷೇತ್ರದ ಕಾಂಗ್ರೆಸ್​ ಅಧ್ಯಕ್ಷರೂ ಆಗಿದ್ದರು. ಆದರೆ ಅವರಿಗೆ ಚುನಾವಣೆ ಟಿಕೆಟ್​ ನೀಡದ್ದರಿಂದ ತುಂಬಾ ಬೇಸರಗೊಂಡಿದ್ದರು. ನಂತರ ಕಾಂಗ್ರೆಸ್​ ಪಕ್ಷ ತೊರೆದು ಕಳೆದ 2019ರ ಚುನಾವಣೆಯಲ್ಲಿ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಇಷ್ಟು ವರ್ಷ ಸೇವೆ ಸಲ್ಲಿಸಿದ್ದರೂ ತಮಗೆ ಪಕ್ಷದಲ್ಲಿ ಬೆಲೆ ಇಲ್ಲ ಎಂಬ ಬಗ್ಗೆ ಅವರು ತುಂಬಾ ಬೇಸರಗೊಂಡಿದ್ದರು ಎಂದು ಕಾಂಗ್ರೆಸ್ಸಿಗೇತರರು ಆರೋಪಿಸುತ್ತಿದ್ದರೆ, ಇತ್ತ ಕಾಂಗ್ರೆಸ್​ ಬಿಜೆಪಿಯನ್ನು ದೂರತೊಡಗಿದೆ.
ಕಾಂಗ್ರೆಸ್ ಮುಖಂಡ ಸಚಿನ್ ಸಾವಂತ್ ಪತ್ರಿಕಾಗೋಷ್ಠಿ ನಡೆಸಿದ್ದು, ಬಿಜೆಪಿ ನಾಯಕರು ಮತ್ತು ಕೇಂದ್ರ ಅಧಿಕಾರಿಗಳ ಕಿರುಕುಳದಿಂದ ಮೋಹನ್ ದೇಲ್ಕರ್ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ತಮಗೆ ಕಿರುಕುಳ ನೀಡುತ್ತಿರುವ ಬಗ್ಗೆ ಮೋಹನ್​ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಹಲವು ಬಾರಿ ಪತ್ರ ಬರೆದು ಸಹಾಯ ಕೋರಿದ್ದರು, ಆದರೆ ಅದನ್ನು ಕಡೆಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮೋಹನ್​ ಅವರ ಸಾವು- ಬದುಕಿನ ಬಗ್ಗೆ ಬಿಜೆಪಿ ಮುಖಂಡರು ತಲೆ ಕೆಡಿಸಿಕೊಳ್ಳಲಿಲ್ಲ. ಉದ್ದೇಶಪೂರ್ವಕವಾಗಿ ಅವರ ಮನವಿಯನ್ನು ತಿರಸ್ಕರಿಸಲಾಯಿತು ಎಂದಿದ್ದಾರೆ.
58 ವರ್ಷದ ಮೋಹನ್​ ಅವರು ಸೌತ್​ ಮುಂಬೈನ ಹೋಟೆಲ್​ವೊಂದರಲ್ಲಿ ಫೆಬ್ರವರಿ 22ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಗುಜರಾತಿ ಭಾಷೆಯಲ್ಲಿ ಬರೆದ ಡೆತ್​ನೋಟ್​ ಪತ್ತೆಯಾಗಿದ್ದು, ಅದರಲ್ಲಿ ಬಿಜೆಪಿ ಇದರಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್‌ ಹೆಸರನ್ನು ಉಲ್ಲೇಖಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಲ್ಲದೆ ಇದರ ಜೊತೆಗೆ ಪತ್ರದಲ್ಲಿ ಕಲೆಕ್ಟರ್ ಮತ್ತು ಪೊಲೀಸ್ ಅಧೀಕ್ಷಕರನ್ನು ಸಹ ಹೆಸರಿಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ.
ಲವರ್​ ಜತೆ ಮದುವೆಗೆ ಸಿದ್ಧಳಾಗಿದ್ದ ಸಿಡಿ ಲೇಡಿ: ಉತ್ತರ ಕರ್ನಾಟಕದ ಇಂಜಿನಿಯರಿಂಗ್​ ಯುವತಿಯ ಸ್ಟೋರಿ ಇದು…

ಮದುವೆಯಾದ ರಾತ್ರಿ ಸಿಂಹದ ಮರಿ ಬಾಡಿಗೆಗೆ ಪಡೆದರು- ನಿದ್ದೆ ಮಾತ್ರೆ ನೀಡಿದರು? ವಿಡಿಯೋ ನೋಡಿ ನೆಟ್ಟಿಗರು ಗರಂ

ನನ್ನ ಗಂಡನಿಗೆ ಮೊದಲೇ ಮದ್ವೆಯಾಗಿದ್ದು ಗೊತ್ತೇ ಇರಲಿಲ್ಲ, ಮೋಸಕ್ಕೆ ಸಿಲುಕಿರುವ ನನಗೇನು ದಾರಿ?

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:16 − 2 =
Remember me
