ಭೋಪಾಲ್​:ಕೆಲ ತಿಂಗಳ ಹಿಂದೆ ರೆಟಿನಾ ಹಿಂಭಾಗದಲ್ಲಿ ಸೋಂಕು ಉಂಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಭೋಪಾಲದ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಪುನಃ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇವರ ಆರೋಗ್ಯದಲ್ಲಿ ತೀವ್ರವಾಗಿ ಏರುಪೇರಾಗಿರುವ ಕುರಿತು ವರದಿಯಾಗಿದೆ. ವಿಮಾನದ ಮೂಲಕ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿವೆ.
ಜಿಲ್ಲಾ ಪಂಚಾಯಿತಿ ಸಭೆಯಲ್ಲಿ ಭಾಗಿಯಾಗಿದ್ದ ಸಂಸದೆಗೆ ಉಸಿರಾಟದ ಸಮಸ್ಯೆಯಾಗಿದೆ. ಖುರ್ಚಿಯಿಂದ ಏಕಾಏಕಿ ಕುಸಿದು ಬಿದ್ದರು. ಈ ಹಿನ್ನೆಲೆಯಲ್ಲಿ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಪ್ರಜ್ಞಾ ಸಿಂಗ್ ಅವರು ಕೆಲ ತಿಂಗಳುಗಳಿಂದ ಏಮ್ಸ್​ ಆಸ್ಪತ್ರೆಯಲ್ಲಿ ರೆಟಿನಾ ಸಂಬಂಧಿತ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಅದಕ್ಕೆಂದೇ ಏಮ್ಸ್​ಗೆ ತೆರಳಿದ್ದರು. ಆದರೆ ಆ ಸಮಯದಲ್ಲಿ ತಪಾಸಣೆ ನಡೆಸಿರುವ ವೈದ್ಯರು, ಪ್ರಜ್ಞಾ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದರಿಂದ ಕೆಲ ತಿಂಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.
ನಂತರ ಅಲ್ಲಿಂದ ಚಿಕಿತ್ಸೆ ಪಡೆದು ಅವರನ್ನು ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಮಾಡಲಾಗಿತ್ತು. ಈಗ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಆರೋಗ್ಯದಲ್ಲಿ ಏರುಪೇರಾಗಿದೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ.
ಎಸ್​ಎಸ್​ಎಲ್​ಸಿಯಾದ ಮಹಿಳೆಯರಿಗೆ ಗುಡ್​ನ್ಯೂಸ್​: 159 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಅಧಿಕಾರಿಗಳ ವಿರುದ್ಧ ಇನ್ಮುಂದೆ ಹೇಗೇಗೋ ದೂರು ನೀಡೋ ಹಾಗಿಲ್ಲ​- ಇಲ್ಲಿದೆ ನೋಡಿ ರೂಲ್ಸ್​

ಪಶ್ಚಿಮ ಬಂಗಾಳದಲ್ಲಿ ಬಾಂಬ್​ ಬ್ಲಾಸ್ಟ್​: ಟಿಎಂಸಿ ಕಾರ್ಯಕರ್ತರ ಮನೆಯಲ್ಲಿಯೇ ತಯಾರು?

ಕೇಂದ್ರ ಸರ್ಕಾರದ ಸಚಿವಾಲಯಗಳಲ್ಲಿ ಉನ್ನತ ಪದವೀಧರರಿಗೆ ಉದ್ಯೋಗ: 89 ಹುದ್ದೆಗಳು ಖಾಲಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × one =
Remember me
