ಬೆಂಗಳೂರು:ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (IISc) ಬೆಂಗಳೂರಿನಲ್ಲಿ ಆರಂಭಿಸುತ್ತಿರುವ ಸ್ನಾತಕೋತ್ತರ ವೈದ್ಯಕೀಯ ಶಾಲೆ ಹಾಗೂ 800 ಹಾಸಿಗೆಗಳ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ‘ಮಿಡ್‌ಟ್ರೀ’ ಸಂಸ್ಥೆ 425 ಕೋಟಿ ರೂಪಾಯಿಗಳನ್ನು ದೇಣಿಗೆ ನೀಡಿದೆ.
ಸುಶ್ಮಿತಾ ಮತ್ತು ಸುಬ್ರೋತೊ ಬಾಗ್ಚಿ ದಂಪತಿ, ರಾಧಾ ಮತ್ತು ಎನ್‌ಎಸ್‌ ಪಾರ್ಥಸಾರಥಿ ಅವರು ಈ ಬೃಹತ್‌ ಮೊತ್ತದ ದೇಣಿಗೆಯನ್ನು ನೀಡಿದ್ದಾರೆ. ಬಾಗ್ಚಿ ಮತ್ತು ಪಾರ್ಥಸಾರಥಿ ‘ಮೈಂಡ್‌ಟ್ರೀ‘ಯ ಸ್ಥಾಪಕ ತಂಡದ ಭಾಗವಾಗಿದ್ದಾರೆ. ಈ ದೇಣಿಗೆಯ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆ ಎಂದು ಹೆಸರಿಡಲು ನಿರ್ಧರಿಸಲಾಗಿದೆ.
ಸುಶ್ಮಿತಾ ಮತ್ತು ಸುಬ್ರೋತೊ ಬಾಗ್ಚಿ ದಂಪತಿಯೊಂದಿನ ಪಾಲುದಾರಿಕೆ ಒಪ್ಪಂದಕ್ಕೆ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ಸಹಿ ಹಾಕಿದೆ. ಅಹಮದಾಬಾದ್ ಮೂಲದ ವಾಸ್ತುಶಿಲ್ಪಿ ಆರ್ಚಿ ಮೆಡೆಸ್ ಆಸ್ಪತ್ರೆ ಕಟ್ಟಡವನ್ನು ವಿನ್ಯಾಸಗೊಳಿಸಿದ್ದಾರೆ.
ಈ ಕಾಲೇಜಿನಲ್ಲಿ ಎಂಡಿ-ಪಿಎಚ್‌ಡಿ ತರಬೇತಿ ನೀಡಲಾಗುವುದು. ಆಸ್ಪತ್ರೆಯ ಜತೆಜತೆಗೇ ವಿಜ್ಞಾನ ಮತ್ತು ಇಂಜಿನಿಯರಿಂಗ್‌ ಪ್ರಯೋಗಾಲಯಗಳು ಐಐಎಸ್ಸಿ ಕ್ಯಾಂಪಸ್‌ನಲ್ಲಿ ಲಭ್ಯವಿವೆ.
ಬರುವ ಜೂನ್‌ ತಿಂಗಳಿನಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಆರಂಭವಾಗಲಿದ್ದು, ಆಸ್ಪತ್ರೆಯು 2024 ರ ಅಂತ್ಯದ ವೇಳೆಗೆ ಕಾರ್ಯನಿರ್ವಹಿಸಲಿದೆ. ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಯು ರೋಗನಿರ್ಣಯ, ಚಿಕಿತ್ಸೆ ಮತ್ತು ಸಂಶೋಧನೆಗಾಗಿ ಸುಧಾರಿತ ಸೌಲಭ್ಯಗಳನ್ನು ಹೊಂದಿರುತ್ತದೆ. ಆಸ್ಪತ್ರೆಯು ಸುಧಾರಿತ ಡಿಜಿಟಲ್ ತಂತ್ರಜ್ಞಾನಗಳನ್ನು ಹೊಂದಿರಲಿದೆ. ಇಲ್ಲಿ ಸಮಗ್ರ ಇಲೆಕ್ಟ್ರಾನಿಕ್ ವೈದ್ಯಕೀಯ ದಾಖಲೆ ವ್ಯವಸ್ಥೆಗಳನ್ನು ಅಳವಡಿಸಲಾಗುವುದು ಎಂದು ಆಸ್ಪತ್ರೆ ಮೂಲಗಳು ಹೇಳಿವೆ.
‘ಮನ್‌ ಕೀ ಬಾತ್‌’ಗೆ ಸಲಹೆ, ಅಭಿಪ್ರಾಯ ಕೊಡಲು ಇಚ್ಛಿಸಿರುವಿರಾ? ನಿಮಗಾಗಿ ಇಲ್ಲಿದೆ ಸುವರ್ಣಾವಕಾಶ…

ನೊಂದ ಮನಸಿಗೆ ಕಿರಣ್ ರಾಜ್ ಸಾಂತ್ವನ: ’ಭರ್ಜರಿ ಗಂಡು’ ಕಾರ್ಯಕ್ಕೆ ಮಂಗಳಮುಖಿಯರು ಫುಲ್‌ ಖುಷ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 3 =
Remember me
