ಲಖನೌ:ಭಾರತೀಯ ಸಂಪ್ರದಾಯಕ್ಕೆ ಮೊರೆ ಹೋಗುವವರು ಅಸಂಖ್ಯ. ಅದರಲ್ಲಿಯೂ ಇಲ್ಲಿಯ ವಿವಾಹ ಪದ್ಧತಿ ಜಗತ್ತಿನಾದ್ಯಂತ ವಿಶೇಷತೆಯನ್ನು ಗಳಿಸಿದೆ. ಇದೇ ಕಾರಣಕ್ಕೆ ಭಾರತೀಯ ಸಂಪ್ರದಾಯದಂತೆ ಮದುವೆಯಾಗಲು ಭಾರತ ಪ್ರವಾಸಕ್ಕೆ ಬಂದಿದ್ದ ಅಮೆರಿಕದ ಮುಸ್ಲಿಂ ದಂಪತಿ ಇಲ್ಲಿಯ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.
ಅವರು ಇಲ್ಲಿ ಮದುವೆಯಾಗಿದ್ದರೆ ಅದರಲ್ಲೇನೂ ವಿಶೇಷತೆ ಇರುತ್ತಿರಲಿಲ್ಲ. ಬದಲಿಗೆ ಈ ದಂಪತಿ ಒಂಬತ್ತು ಮಕ್ಕಳ ಅಪ್ಪ-ಅಮ್ಮ! ಇವರು ಉತ್ತರಪ್ರದೇಶಕ್ಕೆ ಪ್ರವಾಸಕ್ಕೆ ಬಂದಾಗ ಜೌನ್‍ಪುರದ ತ್ರಿಲೋಚನ್ ಮಹಾದೇವ ದೇವಸ್ಥಾನದಲ್ಲಿ ಹಿಂದೂ ಸಂಪ್ರದಾಯದ ಪ್ರಕಾರ ವಿವಾಹವಾಗಿ ತಮ್ಮ ಆಸೆ ಈಡೇರಿಸಿಕೊಂಡಿದ್ದಾರೆ.
ಈ ರೀತಿ ಮದುವೆಯಾದವರು ಕಿಯಾಮಾ ದಿನ್ ಖಲೀಫಾ ಹಾಗೂ ಕೇಶಾ ಕಲೀಫಾ. ಅವರು ಭಾರತ ಪ್ರವಾಸದಲ್ಲಿದ್ದಾರೆ, ಇಲ್ಲಿ ಸಂಸ್ಕೃತಿ ಹಾಗೂ ಸಂಪ್ರದಾಯಕ್ಕೆ ಮಾರುಹೋಗಿ ಹಿಂದೂ ಸಂಪ್ರದಾಯದ ಪ್ರಕಾರ ಮರು ಮದುವೆಯಾಗಲು ನಿರ್ಧರಿಸಿ, ಮದುವೆಯಾಗಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ನಮ್ಮ ಮದುವೆಯಾಗಿ 18 ವರ್ಷಗಳಾಗಿವೆ. 9 ಮಕ್ಕಳು ಇದ್ದಾರೆ. ವಾರಣಾಸಿಯ ದೇವಾಲಯಗಳು ಹಾಗೂ ಇತರ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಇಲ್ಲಿಯ ಸಂಸ್ಕೃತಿಗೆ ಆಕರ್ಷಿತರಾದೆವು. ಆದ್ದರಿಂದ ಇಲ್ಲಿಯ ಸಂಪ್ರದಾಯದಂತೆ ಮದುವೆಯಾಗಲು ನಿಶ್ಚಯಿಸಿದೆವು’ ಎಂದಿದ್ದಾರೆ. ಕಿಯಾಮಾ ದಿನ್ ಖಲೀಫಾ ಅವರ ಅಜ್ಜ ಭಾರತೀಯ ಮೂಲದ ಹಿಂದೂ ಆಗಿದ್ದರು. ನಂತರ ಇಸ್ಲಾಂ ಧರ್ಮಕ್ಕೆ ಕುಟುಂಬ ಮತಾಂತರಗೊಂಡಿದೆ.(ಏಜೆನ್ಸೀಸ್​)
ಅಯೋಧ್ಯೆಯಲ್ಲಿ ಸಿಎಂ ಯೋಗಿಗೊಂದು ದೇಗುಲ: ಪ್ರತಿಜ್ಞೆ ಹೀಗೆ ಈಡೇರಿಸಿಕೊಂಡ ಭಕ್ತ…
ಮೋದಿಗೆ ದೀದಿ ಕ್ಲೀನ್​ಚಿಟ್​: ಅವರ ತಪ್ಪೇ ಇಲ್ಲ ಎಂದ ಮಮತಾ ಮಾತಿಗೆ ರಾಜಕೀಯದಲ್ಲಿ ಬಿಸಿಬಿಸಿ ಚರ್ಚೆ!
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × 4 =
Remember me
