ಲಖನೌ:ಈ ಬಾರಿ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ನಾಲ್ಕು ರಾಜ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಅದರಲ್ಲಿಯೂ ಉತ್ತರ ಪ್ರದೇಶದಲ್ಲಿ ಎಲ್ಲರ ಲೆಕ್ಕಾಚಾರವನ್ನು ತಲೆಕೆಳಗೆ ಮಾಡಿ ಬಿಜೆಪಿ ಗೆಲುವು ಸಾಧಿಸಿದೆ. ಇದು ಹಲವರಿಗೆ ನುಂಗಲಾಗದ ತುತ್ತಾಗಿ ಪರಿಣಮಿಸಿರುವುದು ನಿಜವಾದರೂ ಇಲ್ಲೊಂದು ವಿಚಿತ್ರ ಘಟನೆ ನಡೆದಿದೆ.
ಅದೇನೆಂದರೆ, ಬಿಜೆಪಿ ಗೆಲುವು ಸಾಧಿಸುತ್ತಿದ್ದಂತೆಯೇ ಪತಿ ಮಹಾಶಯನೊಬ್ಬ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿ ಆಕೆಯನ್ನು ಮನೆಯಿಂದ ಹೊರಹಾಕಿದ್ದಾನೆ. ಇದೆಂಥ ವಿಚಿತ್ರ ಘಟನೆ ಅಂತೀರಾ? ಮುಸ್ಲಿಂ ಪತಿಯೊಬ್ಬ ತನ್ನ ಪತ್ನಿ ತಾನು ಹೇಳಿದ ಪಕ್ಷಕ್ಕೆ ಮತ ಹಾಕಲಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ಮಾಡಿದ್ದಾನೆ! ಪತ್ನಿಯನ್ನು ಥಳಿಸಿ ಮನೆಯಿಂದ ಹೊರಹಾಕಿದ್ದಾನೆ.
ಇದೀಗ ಪತ್ನಿ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ತನ್ನ ನೋವನ್ನು ತೋಡಿಕೊಂಡಿದ್ದಾಳೆ. ಒಂದು ವೇಳೆ ಪತ್ನಿ ಮಾಡಿರುವ ಆರೋಪ ನಿಜವಾಗಿದ್ದಲ್ಲಿ ಪತಿಯ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ರಾಷ್ಟ್ರೀಯ ಮಹಿಳಾ ಆಯೋಗ ಪೊಲೀಸರನ್ನು ಕೋರಿದೆ.
ಉತ್ತರ ಪ್ರದೇಶದ ಬರೇಲಿಯ ಮುಸ್ಲಿಂ ಮಹಿಳೆಯನ್ನು ತನ್ನ ಆಯ್ಕೆಯ ರಾಜಕೀಯ ಪಕ್ಷಕ್ಕೆ ಮತ ಹಾಕಲಿಲ್ಲ ಎಂಬ ಕಾರಣಕ್ಕೆ ಆಕೆಯ ಪತಿ ಥಳಿಸಿ ಮನೆಯಿಂದ ಹೊರಹಾಕಿದ್ದಾರೆ. ಆಕೆಯ ಪತಿ ಕೂಡ ವಿಚ್ಛೇದನ ನೀಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ತಿಳಿಸಿದ್ದಾರೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದು, ಮಹಿಳೆಯ ಪತಿ ಮತ್ತು ಅತ್ತೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿರುವುದಾಗಿ ಹೇಳಿದ್ದಾರೆ.
ಹಿಜಾಬ್‌ ಕೇಸ್‌- ಬಂದ್‌ಗೆ ಕರೆ ನೀಡಿದವರ ವಿರುದ್ಧ ನ್ಯಾಯಾಂಗ ನಿಂದನೆ ತೂಗುಕತ್ತಿ! ಹೈಕೋರ್ಟ್‌ಗೆ ವಕೀಲರಿಂದ ಅರ್ಜಿ

ವಿಶ್ವದ ಅತಿ ದೊಡ್ಡ ದೇವಾಲಯ ‘ವಿರಾಟ್‌ ರಾಮಾಯಣ’ಕ್ಕೆ ಜಮೀನು ದಾನ ನೀಡಿದ ಮುಸ್ಲಿಂ ಕುಟುಂಬ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
