ನವದೆಹಲಿ:ಇಂದು ಬೆಳ್ಳಂಬೆಳಗ್ಗೆ ಪಾಪುಲರ್​ ಫ್ರಂಟ್​ ಆಫ್​ ಇಂಡಿಯಾ (ಪಿಎಫ್​ಐ) ಹಾಗೂ ಅದರ ಸಂಘಟನೆಗಳಿಗೆ ಕೇಂದ್ರ ಸರ್ಕಾರ ಶಾಕ್​ ಕೊಟ್ಟಿದೆ. ಕಾನೂನುಬಾಹಿರ ಚಟುವಟಿಕೆ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಈ ಆದೇಶ ಹೊರಡಿಸಲಾಗಿದೆ.
2006 ರಲ್ಲಿ ಅಸ್ತಿತ್ವಕ್ಕೆ ಬಂದಿರುವ ಪಿಎಫ್​ಐ, ಭಾರತದಲ್ಲಿ ಹಿಂದುಳಿದ ವರ್ಗಗಳ ಸಬಲೀಕರಣಕ್ಕಾಗಿ ಹೊಸ ಸಾಮಾಜಿಕ ಚಳವಳಿಯನ್ನು ನಡೆಸುವುದಾಗಿ ಹೇಳಿಕೊಳ್ಳುತ್ತಿದೆ. ಆದರೆ ಮತಾಂಧ ಇಸ್ಲಾಂ ಅನ್ನು ಹರಡುತ್ತಿದೆ ಎಂದು ಕಾನೂನು ಜಾರಿ ಸಂಸ್ಥೆ ಹೇಳಿದೆ. ಈ ಸಂಘಟನೆಯನ್ನು ಕೇರಳದಲ್ಲಿ ರಚಿಸಲಾಗಿದ್ದು, ಇದರ ಕೇಂದ್ರ ಕಚೇರಿ ದೆಹಲಿಯಲ್ಲಿದೆ.
ಇದೇ ಸೆ. 22ರಂದು ರಾಷ್ಟ್ರೀಯ ತನಿಖಾ ಆಯೋಗ(ಎನ್​ಐಎ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಆಂಧ್ರ ಪ್ರದೇಶ, ತೆಲಂಗಾಣ, ಉತ್ತರ ಪ್ರದೇಶ, ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಇತರ ರಾಜ್ಯಗಳ ಪಿಎಫ್​ಐ ಕಚೇರಿ ಹಾಗೂ ಮುಖಂಡರ ಮನೆಗಳ ಮೇಲಲೆ ದಾಳಿ ನಡೆಸಿ, 100 ಕ್ಕೂ ಹೆಚ್ಚು ಪಿಎಫ್​ಐ ಸದಸ್ಯರು ಮತ್ತು ಅವರ ಸಂಪರ್ಕದಲ್ಲಿರುವವರನ್ನು ಬಂಧಿಸಿ, ವಿಚಾರಣೆ ನಡೆಸಿತ್ತು.
ಯುಎಪಿಎ (ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ) ಅಡಿಯಲ್ಲಿ ಸಂಘಟನೆಗಳನ್ನು ಸರ್ಕಾರ ಬ್ಯಾನ್​ ಮಾಡಿದೆ. ಟೆರರ್ ಫಂಡಿಂಗ್ ಪ್ರಕರಣದ ತನಿಖೆ ಎದುರಿಸುತ್ತಿರುವ ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ಜತೆಗೆ ದೆಹಲಿ, ಉತ್ತರ ಪ್ರದೇಶದಿಂದ ಹಿಡಿದು ದೇಶದ ವಿವಿಧ ರಾಜ್ಯಗಳಲ್ಲಿ, ಕೇಂದ್ರ ಸರ್ಕಾರವು ಯುಎಪಿಎ ಅಡಿಯಲ್ಲಿ ಈ ಸಂಘಟನೆಯನ್ನು ಅಕ್ರಮ ಎಂದು ಘೋಷಿಸಿದೆ. ಸರ್ಕಾರ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಪಿಎಫ್‌ಐ ಮೇಲೆ ಐದು ವರ್ಷಗಳ ನಿಷೇಧ ಹೇರಲಾಗಿದೆ.
ಹಾಗಿದ್ದರೆ ಪಿಎಫ್​ಐ ಜತೆಗೆ ಬ್ಯಾನ್​ ಆಗಿರುವ ಸಂಘಟನೆಗಳು ಯಾವುವು ಎಂದು ಇಲ್ಲಿದೆ ನೋಡಿ ವಿವರ:
ಪಿಎಫ್​ಐ ಹೊರತಾಗಿ, ರಿಹಬ್ ಇಂಡಿಯಾ ಫೌಂಡೇಶನ್ (RIF), ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ (CFI), ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ (AIIC), ನ್ಯಾಷನಲ್ ಕಾನ್ಫೆಡರೇಶನ್ ಆಫ್ ಹ್ಯೂಮನ್ ರೈಟ್ಸ್ ಆರ್ಗನೈಸೇಶನ್ (NCHRO), ನ್ಯಾಷನಲ್ ವುಮೆನ್ ಫ್ರಂಟ್, ಜೂನಿಯರ್ ಫ್ರಂಟ್, ಎಂಪವರ್ ಇಂಡಿಯಾ ಫೌಂಡೇಶನ್ ಮತ್ತು ರಿಹ್ಯಾಬ್ ಫೌಂಡೇಶನ್ , ಕೇರಳದಂತಹ ಮಿತ್ರ ಸಂಘಟನೆಗಳನ್ನೂ ನಿಷೇಧಿಸಲಾಗಿದೆ.(ಏಜೆನ್ಸೀಸ್​)
ದೇಶದಲ್ಲಿ PFI ಬ್ಯಾನ್: ಮುಂದಿನ ಕ್ರಮಗಳೇನು? ಕಾರ್ಯಕರ್ತರು, ಮುಖಂಡರ ಕತೆ ಏನು? ಇಲ್ಲಿದೆ ಕಂಪ್ಲೀಟ್​ ಡೀಟೇಲ್ಸ್​

ಸಾಕಷ್ಟು ಮಾಹಿತಿ ಸಂಗ್ರಹಿಸಿಯೇ ಪಿಎಫ್ಐ ಮೇಲೆ ನಿಷೇಧ: ಸಿಎಂ ಬೊಮ್ಮಾಯಿ‌ ಹೇಳಿಕೆ

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × four =
Remember me
