ತಂಜಾವೂರು (ತಮಿಳುನಾಡು):ಶೌಚಗೃಹದ ಫ್ಲಷ್‌ನಲ್ಲಿ ನವಜಾತ ಶಿಶುವಿನ ಮೃತದೇಹ ಸಿಕ್ಕಿರುವ ಭಯಾನಕ ಘಟನೆ ತಮಿಳುನಾಡಿನ ತಂಜಾವೂರಿನ ಆಸ್ಪತ್ರೆಯೊಂದರಲ್ಲಿ ನಡೆದಿದೆ.ಇಲ್ಲಿಯ ವೈದ್ಯಕೀಯ ಕಾಲೇಜು ಆಸ್ಪತ್ರೆಯ (ಟಿಎಂಸಿಹೆಚ್) ಫ್ಲಷ್‌ ಸರಿಯಾಗಿ ಕೆಲಸ ನಿರ್ವಹಿಸುತ್ತಿದ್ದ ಎಂದು ದೂರು ಬಂದಿತ್ತು. ಇದನ್ನು ಆಧರಿಸಿ ರಿಪೇರಿ ಮಾಡಲು ಹೋಗಿದ್ದಾರೆ ಸಿಬ್ಬಂದಿ. ಆಗ ಫ್ಲಷ್‌ನ ಟ್ಯಾಂಕ್‌ ಬಾಗಿಲು ತೆರೆದಾಗ ಅವರಿಗೆ ಶಾಕ್‌ ಆಗಿದೆ. ಏಕೆಂದರೆ ಅದರಲ್ಲಿ ಆಗತಾನೇ ಹುಟ್ಟಿದ ಮಗುವಿನ ಶವವೊಂದು ಸಿಕ್ಕಿದೆ!ತೀವ್ರ ನಿಗಾ ಘಟಕದ ಶೌಚಗೃಹದಲ್ಲಿ ಈ ಘಟನೆ ನಡೆದಿದೆ. ಕೂಡಲೇ ವೈದ್ಯರು ಪೊಲೀಸರಿಗೆ ಮಾಹಿತಿ ಮುಟ್ಟಿಸಿದ್ದಾರೆ. ಶವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಮಗು ಫ್ಲಷ್‌ ಟ್ಯಾಂಕ್‍ಗೆ ಬೀಳುವ ಮುನ್ನವೇ ಸತ್ತುಹೋಗಿದೆಯೋ ಅಥವಾ ನೀರಿನಲ್ಲಿ ಮುಳುಗಿ ಸಾವು ಸಂಭವಿಸಿದೆಯೋ ಎಂದು ತಿಳಿದುಕೊಳ್ಳಲಾಗುತ್ತಿದೆ.ಅಲ್ಲಿಯೇ ಇರುವ ಸಿಸಿಟಿವಿಯಲ್ಲಿ ಎಲ್ಲಾ ದೃಶ್ಯ ಸೆರೆಯಾಗಿದ್ದು, ಅದರ ಆಧಾರದ ಮೇಲೆ ತನಿಖೆ ನಡೆಸಲಾಗುತ್ತಿದೆ.
ಪ್ರಥಮ, ದ್ವಿತೀಯ ಪಿಯುಸಿ ಅರ್ಧವಾರ್ಷಿಕ ಪರೀಕ್ಷೆ ಸಮಯ ಬದಲು- ಇಲ್ಲಿದೆ ವಿವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + eight =
Remember me
