ಮುಂಬೈ:ಡ್ರಗ್ಸ್​ ಪ್ರಕರಣದಲ್ಲಿ ಸಿಲುಕಿ ಭಾರಿ ಸಂಕಷ್ಟಕ್ಕೆ ಸಿಲುಕಿದ್ದ ನಟ ಶಾರುಖ್​ ಖಾನ್​ ಪುತ್ರ ಆರ್ಯನ್​ ಖಾನ್​ಗೆ ಕೊನೆಗೂ ಬಿಗ್​ ರಿಲೀಫ್​ ಸಿಕ್ಕಿದ್ದು, ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಖಾನ್ ವಿರುದ್ಧ ಯಾವುದೇ ಪುರಾವೆಗಳಿಲ್ಲ ಎಂದು ಕೆಲ ಮಾಧ್ಯಮಗಳಲ್ಲಿ ವರದಿಗಳು ಪ್ರಕಟವಾಗಿದ್ದು, ಇದನ್ನು ಎಸ್​ಐಟಿ ನಿರಾಕರಿಸಿದೆ.
ಪ್ರಕರಣದ ತನಿಖೆ ನಡೆಸಿದ ಎನ್​ಸಿಬಿ ತಂಡ ವರದಿ ಪ್ರಕಟಿಸಲಿದ್ದು, ಅದರಲ್ಲಿ ಶಾರೂಖ್​ ಪುತ್ರ ಆರ್ಯನ್​ ಖಾನ್​ರಿಗೆ ಕ್ಲೀನ್​ಚಿಟ್​ ನೀಡಿದೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು ಇದು ಸಾಮಾಜಿಕ ಜಾಲತಾಣದಲ್ಲಿಯೂ ಹರಿದಾಡುತ್ತಿದೆ. ‘ಆರ್ಯನ್ ಖಾನ್ ಎಂದಿಗೂ ಡ್ರಗ್ಸ್ ಜೊತೆ ಸಂಬಂಧ ಹೊಂದಿರಲಿಲ್ಲ. ಆದ್ದರಿಂದ ಅವರ ಫೋನ್ ತೆಗೆದುಕೊಂಡು ಅವರ ಚಾಟ್‌ಗಳನ್ನು ಪರಿಶೀಲಿಸುವ ಅಗತ್ಯವಿಲ್ಲ. ಚಾಟ್‌ಗಳು ಆರ್ಯನ್ ಖಾನ್ ಯಾವುದೇ ಅಂತರಾಷ್ಟ್ರೀಯ ಸಿಂಡಿಕೇಟ್‌ನ ಭಾಗವಾಗಿದ್ದರು ಎಂದು ಸೂಚಿಸುವುದಿಲ್ಲ ಅಂತ ರಿಪೋರ್ಟ್‌ನಲ್ಲಿ ಉಲ್ಲೇಖಿಸಲಾಗಿದೆ’ ಎಂದು ಮಾಧ್ಯಮಗಳಲ್ಲಿ ವರದಿಯಾಗಿವೆ. ಆದರೆ ಇವೆಲ್ಲಾ ಸತ್ಯಕ್ಕೆ ದೂರವಾದದ್ದು ಎಂದು ಎನ್​ಸಿಬಿಯ ವಿಶೇಷ ತನಿಖಾ ತಂಡದ ಮುಖ್ಯಸ್ಥ ಸಂಜಯ್ ಸಿಂಗ್ ಹೇಳಿದ್ದಾರೆ.
ಆರ್ಯನ್​ ಖಾನ್​ ನಿರ್ದೋಷಿ ಎಂದು ಈಗಲೇ ಹೇಳುವುದು ಸಾಧ್ಯವಿಲ್ಲ. ಕ್ರೂಸ್ ಶಿಪ್ ಡ್ರಗ್ಸ್ ಪ್ರಕರಣದ ತನಿಖೆ ಇನ್ನೂ ನಡೆಯುತ್ತಿದೆ. ಈಗಲೇ ಯಾವುದೇ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ಅವರಿಂದ ಹೇಳಿಕೆಗಳನ್ನು ಪಡೆಯಲಾಗಿದೆ. ಇದರ ತನಿಖೆ ನಡೆಸಲಾಗುತ್ತಿದೆ. ಆದರೆ ಯಾವುದೇ ತೀರ್ಮಾನಕ್ಕೆ ಇನ್ನೂ ಬಂದಿಲ್ಲ ಎಂದು ಸಂಜಯ್ ಸಿಂಗ್ ಹೇಳಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ.
VIDEO: ಭಾರತದ ಧ್ವಜ ಹಿಡಿದು ಪ್ರಾಣ ಉಳಿಸಿಕೊಂಡ ಪಾಕಿಸ್ತಾನದ ವಿದ್ಯಾರ್ಥಿಗಳು! ಅನುಭವ ಇಲ್ಲಿದೆ ಕೇಳಿ…

‘ವಾಪಸ್​ ಕರೆಸಿಕೊಳ್ಳಿ’ ಎಂದು ಗೋಳಿಡುತ್ತಲೇ ಯೂಕ್ರೇನ್​ನಲ್ಲೂ ಭಾರತದ ವಿರುದ್ಧ ಪ್ರಚಾರ ಶುರು ಮಾಡಿದ! ಈತನ ಹಿಸ್ಟರಿ ಕೇಳಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + fourteen =
Remember me
