ಚೆನ್ನೈ:ನಿವಾರ್ ಚಂಡಮಾರುತದ ವೇಗ ಹೆಚ್ಚಾಗುತ್ತಲೇ ಸಾಗಿದ್ದು, ತಮಿಳುನಾಡಿನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತವು ಮಂಗಳವಾರ ಚಂಡಮಾರುತದ ಸ್ವರೂಪ ಪಡೆದಿತ್ತು.
ತಾಂಜಾವೂರ್, ತಿರುವಾರೂರ್, ನಾಗಪಟ್ಟಿಣಂ, ಕುದ್ದಲೋರ್, ಚೆನ್ನೈ, ಕಂಚೀಪುರಂ, ಚೆಂಗಲಪಟ್ಟು ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರಿ ಮಲೆಯಾಗುತ್ತಿದೆ. ಚಂಡಮಾರುತದ ಹಿನ್ನೆಲೆಯಲ್ಲಿ 26 ವಿಮಾನಗಳ ಸಂಚಾರ ರದ್ದುಪಡಿಸಲಾಗಿದೆ ಜತೆಗೆ ರೈಲು ಸಂಚಾರವನ್ನೂ ಬಂದ್​ ಮಾಡಲಾಗಿದೆ. ಇಂದು (ಬುಧವಾರ) ಎರಡು ರೈಲುಗಳ ಸಂಚಾರ ಸಂಪೂರ್ಣ ರದ್ದುಗೊಳಿಸಲಾಗಿದೆ. ಗುರುವಾರ ಏಳು ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಐದು ರೈಲುಗಳ ಸಂಚಾರ ಭಾಗಶಃ ರದ್ದಾಗಿದೆ ಎಂದು ದಕ್ಷಿಣ ರೈಲ್ವೆ ತಿಳಿಸಿದೆ.
The situation today in Chennai's ECR!#CycloneNivar#NivarCyclone#ChennaiRainspic.twitter.com/f3eO4Y8wS2
— Shashaank 🇮🇳🚩 (@im_shank19)November 24, 2020

ತಮಿಳುನಾಡಿನ ಏಳು ಜಿಲ್ಲೆಗಳಲ್ಲಿ ಬಸ್ ಸೇವೆ ಸ್ಥಗಿತಗೊಳಿಸಲಾಗಿದೆ. ಅಗತ್ಯ ಸೇವೆಗಳಲ್ಲಿ ತೊಡಗಿರುವವರು ಕೆಲಸ ಮುಂದುವರಿಸುವುದಾಗಿ ಸರ್ಕಾರ ಹೇಳಿದೆ. ರಾಜ್ಯದಲ್ಲಿ 4,000ಕ್ಕೂ ಹೆಚ್ಚು ದುರ್ಬಲ ಸ್ಥಳಗಳನ್ನು ಗುರುತಿಸಲಾಗಿದೆ. ಜನರ ಸುರಕ್ಷತೆಯನ್ನು ಕಾಪಾಡಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ.ತಮಿಳುನಾಡಿನಲ್ಲಿ ಈಗಾಗಲೇ ಒಟ್ಟು 24 ಸಾವಿರ ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದ್ದು 987 ನಿರಾಶ್ರಿತರ ಕೇಂದ್ರಗಳನ್ನು ತೆರೆಯಲಾಗಿದೆ.
#Vadapalanithis morning, as you can see is already waterlogged.
Heavy to very heavy rains expected in the next three days. People are advised to stay indoors and to steer clear of broken electric lines, flooded streets.#CycloneAlert#CycloneNivar#CycloneUpdatespic.twitter.com/oSyGLu6bcu
— Smitha T K (@smitha_tk)November 24, 2020

High tides at the Kasimedu fishing harbour in North Chennai#CycloneNivarpic.twitter.com/p1cFt4wlH7
— Poornima Murali (@nimumurali)November 24, 2020

ಮುಂದಿನ 12 ಗಂಟೆಗಳಲ್ಲಿ ಪುದುಚೆರಿಯ ಕಾರೈಕಲರ್​ ಹಾಗೂ ತಮಿಳುನಾಡಿನ ಮಾಮಲ್ಲಾಪುರಂನಲ್ಲಿ ಭೂಕುಸಿತ ಉಂಟಾಗೋದ್ರಿಂದ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಸ್ಥಳಾಂತರ ಮಾಡಲಾಗಿದೆ.
Rough sea at Chennai coast owing to#CycloneNivarpic.twitter.com/k8r4M6AUSm
— Pramod Madhav (@PramodMadhav6)November 24, 2020

‘ಮನೆಯಲ್ಲೇ ಇರುವಂತೆ ಜನರಿಗೆ ಸೂಚಿಸಲಾಗಿದೆ. ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಈಗಾಗಲೇ ಸೂಚಿಸಲಾಗಿದೆ. ಆಹಾರ, ಔಷಧ ವಿತರಣೆಗೆ 80 ಕೇಂದ್ರಗಳನ್ನು ತೆರೆಯಲಾಗಿದೆ’ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ತಿಳಿಸಿದ್ದಾರೆ.
Severe waterlogged roads already in many parts of Chennai. This is from Parrys, Chennai.@chennaicorp#chennairains#COMK#CycloneNivarpic.twitter.com/ypfduUMGgH
— UnniKrishnan R (@realunnikrish)November 24, 2020

ಅಂಗಡಿಗಳು ಮತ್ತು ಅನಿವಾರ್ಯವಲ್ಲದ ಸೇವೆಗಳನ್ನು ಬಂದ್ ಮಾಡಲಾಗಿದೆ. ಹಾಲಿನ ಬೂತ್‌ಗಳು, ಪೆಟ್ರೋಲ್ ಬಂಕ್, ಆಸ್ಪತ್ರೆಗಳು, ಔಷಧಾಲಯಗಳು ಮತ್ತು ಸರ್ಕಾರಿ ಕಚೇರಿಗಳನ್ನು ಮಾತ್ರ ತೆರೆಯಲು ಅನುಮತಿ ನೀಡಲಾಗಿದೆ. ಜನರು ಮನೆಯೊಳಗೆ ಇರಬೇಕು ಹಾಗೂ ಸುರಕ್ಷಿತ ಸ್ಥಳಗಲ್ಲಿರಬೇಕು ಎಂದು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಇಂದು ಬೆಳಗ್ಗೆ ಮನವಿ ಮಾಡಿದ್ದಾರೆ.
ಮಾಜಿ ಶಾಸಕ ರೋಷನ್​ ಬೇಗ್​ ಸಿಬಿಐ ಕಸ್ಟಡಿಗೆ- ಕೋರ್ಟ್​ ಆದೇಶ

ಅಯೋಧ್ಯೆಯ ಏರ್​ಪೋರ್ಟ್​ ಇನ್ಮುಂದೆ ಮರ್ಯಾದಾ ಪುರುಷೋತ್ತಮ ಶ್ರೀರಾಮ ನಿಲ್ದಾಣ

ಬಿಹಾರ ವಿಧಾನಸಭಾ ಸ್ಪೀಕರ್​ ಆಗಿ ಬಿಜೆಪಿಯ ವಿಜಯ್​ಕುಮಾರ್​ ಆಯ್ಕೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × 5 =
Remember me
