ತೆಲಂಗಾಣ:2016ರ ಸೆಪ್ಟೆಂಬರ್ 29 ರಂದು ಪಾಕಿಸ್ತಾನ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಪಾಕಿಸ್ತಾನಕ್ಕೆ ಭಾರತೀಯ ಯೋಧರು ಬುದ್ಧಿ ಕಲಿಸಿದ್ದರು. ಕಾಶ್ಮೀರದ ಉರಿ ಪ್ರದೇಶದಲ್ಲಿ ಪಾಕಿಸ್ತಾನಿಗಳು ನಡೆಸಿದ್ದ ದಾಳಿಗೆ ಪ್ರತಿಯಾಗಿ ಈ ದಾಳಿ ಮಾಡಲಾಗಿತ್ತು. ಆದರೆ ಈ ದಾಳಿ ನಡೆದೇ ಇಲ್ಲ ಎಂದು ಸಂಸದ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ಸರ್ಜಿಕಲ್‌ ಸ್ಟ್ರೈಕ್‌ ನಡೆದಿರುವ ಬಗ್ಗೆ ಅವರು ಸಾಕ್ಷ್ಯಾಧಾರ ಕೇಳಿದ್ದರು. ಇದೀಗ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಕೂಡ ರಾಹುಲ್‌ ಗಾಂಧಿಯ ಹಾದಿ ಹಿಡಿದಿದ್ದು ಭಾರತೀಯ ಸೇನೆಯ ಮೇಲೆ ಸವಾಲು ಎಸೆದಿದ್ದಾರೆ.
ಸರ್ಜಿಕಲ್ ದಾಳಿ ನಡೆಸಿದ್ದಕ್ಕೆ ರಾಹುಲ್‌ ಗಾಂಧಿ ತಮ್ಮ ಭಾಷಣಗಳಲ್ಲಿ ಸಾಕ್ಷ್ಯಾಧಾರ ಕೇಳುತ್ತಲೇ ಬಂದಿದ್ದಾರೆ. ಇವರ ಈ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವ ಶರ್ಮಾ, ರಾಹುಲ್ ಗಾಂಧಿ ನಮ್ಮ ಸೇನೆಯಿಂದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಪುರಾವೆ ಕೇಳುತ್ತಾರೆ. ನಾವು ಎಂದಾದರೂ ಅವರಿಗೆ ನೀವು ರಾಜೀವ್ ಗಾಂಧಿ ಅವರ ಮಗ ಅಥವಾ ಅಲ್ಲ ಎಂಬುದಕ್ಕೆ ಪುರಾವೆ ಕೇಳಿದ್ದೇವೆಯೇ? ನನ್ನ ಸೇನೆಯಿಂದ ಪುರಾವೆ ಕೇಳಲು ನಿಮಗೆ ಯಾವ ಹಕ್ಕಿದೆ? ಎಂದು ಪ್ರಶ್ನಿಸಿದ್ದರು.
ಇದಕ್ಕೆ ಇದೀಗ ಕಿಡಿ ಕಾರಿರುವ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್, ರಾಹುಲ್ ಗಾಂಧಿ ಕಾಂಗ್ರೆಸ್​ ಪಕ್ಷದ ನಾಯಕ. ಭಾರತೀಯ ಸೇನೆಯ ಸರ್ಜಿಕಲ್ ಸ್ಟ್ರೈಕ್ ಕುರಿತು ಪ್ರಶ್ನಿಸಿದ್ದಾರೆ. ಇದರಲ್ಲಿ ತಪ್ಪೇನಿದೆ? ಈಗ ನಾನು ಕೇಳುತ್ತಿದ್ದೇನೆ, ಕೇಂದ್ರ ಸರ್ಕಾರ ಸರ್ಜಿಕಲ್ ಸ್ಟ್ರೈಕ್ ಕುರಿತು ಸಾಕ್ಷಿ ಕೊಡಲಿ ಎಂದು ಸವಾಲು ಹಾಕಿದ್ದಾರೆ. ಜಿಜೆಪಿಯವರು ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ದಾಳಿ ನಡೆದದ್ದೇ ಹೌದಾದರೆ ಸಾಕ್ಷಿ ಕೊಡಲಿ ಎಂದಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಸರ್ಜಿಕಲ್ ಸ್ಟ್ರೈಕ್‌ ಬಗ್ಗೆ ಪುರಾವೆ ಕೇಳಿದ್ದರಲ್ಲಿ ತಪ್ಪೇನಿದೆ? ನನಗೂ ಬೇಕು, ಕೇಂದ್ರ ಸರ್ಕಾರ ಸಾಕ್ಷಿ ಕೊಡಲಿ ಎಂದಿದ್ದಾರೆ.
ಐವರ ಜೀವ ತೆಗೆದು ಹಾಯಾಗಿದ್ದ ಎಂಎ, ಎಂಬಿಎ ಪದವೀಧರ: ಆಟೋ ಚಾಲಕನಿಗೆ ನೀರುಕೇಳಿ ಸಿಕ್ಕಿಬಿದ್ದ!

VIDEO: ಬೆಡ್‌ಷೀಟ್‌ಗಾಗಿ 10ನೇ ಮಹಡಿಯಿಂದ ಸೀರೆ ಕಟ್ಟಿ ಮಗನನ್ನು ಜೋತು ಬೀಳಿಸಿದ ಅಮ್ಮ! ಶಾಕಿಂಗ್‌ ವಿಡಿಯೋ ನೋಡಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × five =
Remember me
